Connect with us


      
ಕರ್ನಾಟಕ

ಅಧಿವೇಶನದ 4ನೇ ದಿನ ಮೂರು ವಿಧೇಯಕಗಳ ಮಂಡನೆ

Iranna Anchatageri

Published

on

ಬೆಳಗಾವಿ (ಸುವರ್ಣ ವಿಧಾನಸೌಧ) ಡಿಸೆಂಬರ್ 16 (ಯು.ಎನ್.ಐ.) ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ನಾಲ್ಕನೇ ದಿನದ ಅಧಿವೇಶನದಲ್ಲಿ ರಾಜ್ಯ ಸರ್ಕಾರ 3 ವಿಧೇಯಕಗಳನ್ನು ಮಂಡನೆ ಮಾಡಿತು.

ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಅವರು, 2021ನೇ ಸಾಲಿನ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದ ವಿಧೇಯಕವನ್ನು ಮಂಡಿಸಲಾಯಿತು. ಆರೋಗ್ಯ ಸಚಿವ ಡಾ.ಕೆ.ಸುಧಾಕರ್, 2021ನೇ ಸಾಲಿನ ಕರ್ನಾಟಕ ರಾಜ್ಯ ಆಯುಷ್ ವಿಶ್ವವಿದ್ಯಾಲಯ ವಿಧೇಯಕವನ್ನು ಮಂಡಿಸಿದರು. ಹಾಗೂ ಪ್ರಥಾಮಿಕ, ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, 2021ನೇ ಸಾಲಿನ ಕರ್ನಟಾಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ 2ನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು.

Share