Connect with us


      




ಕರ್ನಾಟಕ

ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗೆ 5 ಟಿ ಸೂತ್ರ: ಪ್ರಧಾನಿ ಮೆಚ್ಚುಗೆ

Published

on

ಬೆಂಗಳೂರು, ಜನೆವರಿ 13 (ಯು.ಎನ್.ಐ.) ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಗೆ ಅಳವಡಿಸಿರುವ ಟೆಸ್ಟಿಂಗ್, ಟ್ರಾಕಿಂಗ್, ಟ್ರೇಸಿಂಗ್, ಟ್ರಯಾಜಿಂಗ್ ಮತ್ತು ಟೆಕ್ನಾಲಜಿ ಬಳಕೆಯ 5 ಟಿ ಸೂತ್ರವನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ ನಂತರ ಪತ್ರಿಕಾ ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಗಾಗಿ ಕೈಗೊಂಡಿರುವ ಕ್ರಮಗಳನ್ನು ಪ್ರಧಾನಿಯವರಿಗೆ ವಿವರಿಸಲಾಯಿತು. ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪರೀಕ್ಷೆ ನಡೆಸುತ್ತಿರುವ ಕುರಿತು ಹಾಗೂ ರಾಜ್ಯದಲ್ಲಿ ಲಸಿಕೆ ಹಾಕಿಸಿಕೊಂಡವರ ಪ್ರಮಾಣ ದೇಶದ ಸರಾಸರಿಗಿಂತ ಹೆಚ್ಚಿರುವ ಕುರಿತು ಪ್ರಧಾನಿಯವರು ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ತಿಳಿಸಿದ್ದಾರೆ.

ಇದರೊಂದಿಗೆ ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಕುರಿತು ಸಹ ಪ್ರಧಾನಿಯವರಿಗೆ ಮಾಹಿತಿ ನೀಡಲಾಯಿತು. ಹಾಗೂ ಆಕ್ಸಿಜನೇಟೆಡ್ ಬೆಡ್ ಗಳು ಮತ್ತು ಆಕ್ಸಿಜನ್ ಪ್ಲಾಂಟ್ ಗಳನ್ನು ಹೆಚ್ಚಿಸಲು ಕೇಂದ್ರದ ನೆರವು ಕೋರಲಾಯಿತು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಹೋಂ ಐಸೊಲೇಷನ್ ನಲ್ಲಿ ಇರುವವರ ಮೇಲ್ವಿಚಾರಣೆಗೆ ತಂತ್ರಜ್ಞಾನದ ಬಳಕೆಯನ್ನು ಪ್ರಧಾನಿಯವರು ಶ್ಲಾಘಿಸಿದರು ಎಂದು ಅವರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಅಲೆ ಫೆಬ್ರವರಿ ತಿಂಗಳಲ್ಲಿ ಅತ್ಯಂತ ತೀವ್ರಗೊಳ್ಳುವ ನಿರೀಕ್ಷೆಯಿದ್ದು, ಮೊದಲ ಹಾಗೂ ಎರಡನೇ ಅಲೆಯನ್ನು ಎದುರಿಸಿದ ಅನುಭವದ ಆಧಾರದಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದರು. ಮೂರನೇ ಅಲೆಯ ಸಂದರ್ಭದಲ್ಲಿ ಶೇ. 94ಕ್ಕೂ ಹೆಚ್ಚು ಸೋಂಕಿತರು ಹೋಮ್ ಐಸೊಲೇಷನ್ ನಲ್ಲಿ ಇದ್ದಾರೆ. ಆದ್ದರಿಂದ ಅವರಲ್ಲಿ ವಿಶ್ವಾಸ ಮೂಡಿಸುವ ಹಾಗೂ ಅವರಿಗೆ ಔಷಧ ಪೂರೈಕೆಯೂ ಸೇರಿದಂತೆ ಸೂಕ್ತ ಆರೈಕೆಯನ್ನು ಖಾತರಿಪಡಿಸಲು ಆದ್ಯತೆ ನೀಡುವಂತೆ ಪ್ರಧಾನಿಯವರು ತಿಳಿಸಿದ್ದಾರೆ. ಭಾರತ ಸರ್ಕಾರವು ಹೆಚ್ಚಿನ ಪರೀಕ್ಷೆ ನಡೆಸುವಂತೆ ಹಾಗೂ ಕೇಂದ್ರ ಸರ್ಕಾರ ಒದಗಿಸಿರುವ 23,000 ಕೋಟಿ ರೂ. ಪ್ಯಾಕೇಜ್ ನಡಿ ಅಂಬ್ಯುಲೆನ್ಸ್ ಹಾಗೂ ಆರೋಗ್ಯ ಮೂಲಸೌಕರ್ಯ ಹೆಚ್ಚಿಸಲು ಕ್ರಮ ವಹಿಸುವಂತೆ ಸಲಹೆ ನೀಡಿದೆ ಎಂದು ಮುಖ್ಯಮಂತ್ರಿಯವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಎಲ್ಲ ರಾಜ್ಯ ಸರ್ಕಾರಗಳಿಗೆ 32 ಸಾವಿರ ಕೋಟಿ ಹಣವನ್ನು ಆರೋಗ್ಯ ಮೂಲಭೂತ ಸೌಕರ್ಯಕ್ಕಾಗಿ ಎರಡನೆಯ ನಂತರ ಒದಗಿಸಿದೆ. ಹಲವು ರಾಜ್ಯಗಳು ಇನ್ನೂ ಇದರ ಪ್ರಯೋಜನ ಪಡೆದಿಲ್ಲ. ಆರೋಗ್ಯ ಮೂಲಭೂತ ಸೌಕರ್ಯಗಳಾದ ಐಸಿಯು, ಆಕ್ಸಿಜನ್ ಪ್ಲಾಂಟ್, ಆಕ್ಸಿಜಿನೆಟೆಡ್ ಬೆಡ್ ಹಾಗೂ ಅಂಬುಲೆನ್ಸ್ ಸೇರಿದಂತೆ ಇತರ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ರಾಜ್ಯಗಳು ಸಹ ತಮ್ಮ ಪಾಲನ್ನು ಸೇರಿಸಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿದೆ ಎಂದು ಸಲಹೆ ಕೊಟ್ಟರು.

Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಇಡೀ ವರ್ಷ ಸುಭಾಷ್ ಚಂದ್ರಬೋಸ್ ಜನ್ಮದಿನಾಚರಣೆಗೆ ತೀರ್ಮಾನ: ಸಿಎಂ

Published

on

ಬೆಂಗಳೂರು : ಜನೆವರಿ 23 (ಯು.ಎನ್.ಐ.) ರಾಜ್ಯ ಸರ್ಕಾರದ ವತಿಯಿಂದ ವರ್ಷವಿಡೀ ನೇತಾಜಿ ಸುಭಾಷ್ ಚಂದ್ರಬೋಸ್ ರವರ 125ನೇ ಜನ್ಮ ದಿನಾಚರಣೆಯನ್ನ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.  ಭಾರತದ ಸ್ವತಂತ್ರ್ಯಕ್ಕೆ ಬಹಳ ದೊಡ್ಡ ಬುನಾದಿ ಹಾಕಿಕೊಟ್ಟ ಮಹಾನ್ ನಾಯಕ ನೇತಾಜಿ ಸುಭಾಷ್ ಚಂದ್ರ ಭೋಸ್ ಅವರ 125 ನೇ ಜನ್ಮ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ವಿಧಾನಸೌಧ ಆವರಣದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರದ ವತಿಯಿಂದ ವರ್ಷವಿಡೀ ನೇತಾಜಿ ಅವರ 125ನೇ ಜನ್ಮ ದಿನಾಚರಣೆಯನ್ನ ವಿಚಾರಧಾರೆಯ ಮೂಲಕ, ಚರ್ಚೆಗಳ ಮೂಲಕ, ವಿಮರ್ಶೆಗಳ ಮೂಲಕ ಸ್ಮರಣೆ ಮಾಡುವ ಮೂಲಕ ಆಚರಣೆ ಮಾಡಲಿದ್ದೇವೆ ಎಂದರು.

ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಹೋರಾಟ ಮಾಡಿದ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನೋತ್ಸವದ ಅಂಗವಾಗಿ ಮುಖ್ಯಮಂತ್ರಿಗಳು ಪ್ರತಿಜ್ಞಾವಿಧಿ ಬೋಧಿಸಿದರು. ಬ್ರಿಟೀಷರ ವಿರುದ್ದ ಸೈನ್ಯವನ್ನ ಕಟ್ಟಿ ಹೋರಾಟ ಮಾಡಿದ ಅಪ್ರತಿಮ ವೀರ ಸುಭಾಷ್ ಚಂದ್ರಭೋಸ್. ಯುವಕರಿಗೆ ಪ್ರೇರಣೆಕೊಟ್ಟದ್ದು. ನೀವು ನನಗೆ ರಕ್ತ ಕೊಡಿ ನಾನು ನಿಮಗೆ ಸ್ವತಂತ್ರ್ಯಕೊಡಿಸುತ್ತೇನೆ ಎಂದು ಯುವಕರನ್ನ ಉತ್ಸಾಹಿಸಿ ಸೈನ್ಯಕಟ್ಟಿ ಹೋರಾಡಿದ ಸೇನಾನಿ ಎಂದು ಅವರ ಸಾಧನೆಯನ್ನ ಸ್ಮರಿಸಿದರು.

Continue Reading

ಕರ್ನಾಟಕ

ನ್ಯಾಯಮೂರ್ತಿ ಕೆ ಎಲ್. ಮಂಜುನಾಥ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

Published

on

ಬೆಂಗಳೂರು: ಜನವರಿ 23 (ಯು.ಎನ್.ಐ.)  ಕರ್ನಾಟಕ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ನ್ಯಾಯಮೂರ್ತಿ ಮಂಜುನಾಥ್ ಅವರು ಅತ್ಯುತ್ತಮ ವಕೀಲರಾಗಿ, ವಕೀಲರ ಸಂಘದ ಅಧ್ಯಕ್ಷರಾಗಿ, ಹೈಕೋರ್ಟ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ನದಿ ನೀರು ಮತ್ತು ಗಡಿ ವಿವಾದ ಪ್ರಾಧಿಕಾರದ ಅಧ್ಯಕ್ಷರಾಗಿ, ಆಂಧ್ರ ಪ್ರದೇಶದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ ಅವಿಸ್ಮರಣೀಯವಾದದ್ದು ಎಂದು ಸಿಎಂ ಮೃತ ಗಣ್ಯರ ಸಾಧನೆಗಳನ್ನು ಸ್ಮರಿಸಿದ್ದಾರೆ.

ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬದವರು ಹಾಗೂ ಹಿತೈಷಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Continue Reading

ಕರ್ನಾಟಕ

ನಿವೃತ್ತ ಹೈಕೋರ್ಟ್‌ ನ್ಯಾಯಮೂರ್ತಿ ಕೆ.ಎಲ್.‌ ಮಂಜುನಾಥ್‌ ವಿಧಿವಶ

Published

on

By

ಬೆಂಗಳೂರು, ಜ 23 (ಯುಎನ್‌ ಐ) ರಾಜ್ಯ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಶನಿವಾರ ತಡರಾತ್ರಿ ಹೃದಯಾಘಾತದಿಂದ ನಗರದ ನಿವಾಸದಲ್ಲಿ ವಿಧಿವಶರಾಗಿದ್ದಾರೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 12 ಗಂಟೆವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನ ಇರಲಿದ್ದು, ಮಧ್ಯಾಹ್ನ 3 ಗಂಟೆಗೆ ನೆಲಮಂಗಲದ ತೋಟದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ಹೇಳಿವೆ.

ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಅವರು 1974ರ ಸೆ.13 ರಂದು ರಾಜ್ಯ ಹೈಕೋರ್ಟ್‌ ನಲ್ಲಿ ವಕೀಲ ವೃತ್ತಿ ಆರಂಭಿಸಿದ್ದರು. 2000ರ ಡಿ.11 ರಂದು ಕರ್ನಾಟಕ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ, 2001ರ ಅ. 27 ರಂದು ಖಾಯಂ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು

Continue Reading
Advertisement
ಅಂಕಣ2 mins ago

ಎಳವೆಯಿಂದ ರಂಗಭೂಮಿ

ನಾದಾಂಕಣ – ಡಾ. ನಾ. ದಾಮೋದರ ಶೆಟ್ಟಿ ಭಾರತೀಯ ಹಾಗೂ ಗ್ರೀಕ್‌ ರಂಗಭೂಮಿಗೆ ಬಹುದೊಡ್ಡ ಪರಂಪರೆಇದೆ ಎನ್ನುವುದು ಸಾರ್ವಕಾಲಿಕ ಸತ್ಯ. ಆದರೆ ಯುರೋಪಿನ ರಂಗಭೂಮಿಯಾಗಲೀ ರಷ್ಯಾ, ಅಮೇರಿಕಾ...

ದೇಶ3 mins ago

ಅರುಣಾಚಲದಿಂದ ನಾಪತ್ತೆಯಾಗಿದ್ದ ಯುವಕ ಚೀನಾ ಗಡಿಯಲ್ಲಿ ಪತ್ತೆ!

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿದ್ದ ಭಾರತೀಯ ಯುವಕ ಚೀನಾ ಗಡಿಯಲ್ಲಿ ಪತ್ತೆಯಾಗಿದ್ದಾನೆ. ಈ ಬಗ್ಗೆ ಚೀನಾ ಸೈನಿಕರು ಭಾರತೀಯ ಯೋಧರಿಗೆ ಮಾಹಿತಿ ನೀಡಿದ್ದು,...

ಹಣಕಾಸು43 mins ago

ಕೆಲಸ ಬದಲಾಯಿಸಿದ್ದೀರಾ? ಚಿಂತೆ ಬಿಡಿ.. ನಿಮ್ಮ ನೆರವಿಗೆ ಇದೆ ಇಪಿಎಫ್ಒ!

ಬೆಂಗಳೂರು: ಜನೆವರಿ 23 (ಯು.ಎನ್.ಐ.) ಉತ್ತಮ ಸಂಬಳ, ಭದ್ರತೆಯುಳ್ಳ ನೌಕರಿ, ವಿಶೇಷ ಸವಲತ್ತುಗಳು.. ಹೀಗೆ ನಾನಾ ಉದ್ದೇಶಗಳಿಂದ ಉದ್ಯೋಗಿಗಳು ತಮ್ಮ ಕೆಲಸವನ್ನು ಬದಲಾಯಿಸುತ್ತಾ ಇರುತ್ತಾರೆ. ಇಂತಹ ಸಂದರ್ಭದಲ್ಲಿ...

ದೇಶ48 mins ago

ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿ… ದೇಶಾದ್ಯಂತ ಪರಾಕ್ರಮ ದಿನವಾಗಿ ಆಚರಣೆ

ನವದೆಹಲಿ, ಜ ೨೩( ಯುಎನ್ ಐ) ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ೧೨೫ನೇ ಜನ್ಮಜಯಂತಿ ಇಂದು. ದೇಶಾದ್ಯಂತ ಪರಾಕ್ರಮ ದಿನವಾಗಿ ನೇತಾಜಿ...

ಕರ್ನಾಟಕ1 hour ago

ಇಡೀ ವರ್ಷ ಸುಭಾಷ್ ಚಂದ್ರಬೋಸ್ ಜನ್ಮದಿನಾಚರಣೆಗೆ ತೀರ್ಮಾನ: ಸಿಎಂ

ಬೆಂಗಳೂರು : ಜನೆವರಿ 23 (ಯು.ಎನ್.ಐ.) ರಾಜ್ಯ ಸರ್ಕಾರದ ವತಿಯಿಂದ ವರ್ಷವಿಡೀ ನೇತಾಜಿ ಸುಭಾಷ್ ಚಂದ್ರಬೋಸ್ ರವರ 125ನೇ ಜನ್ಮ ದಿನಾಚರಣೆಯನ್ನ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ...

ಅಂಕಣ1 hour ago

ಸ್ವಾತಂತ್ರ್ಯಕ್ಕಿಂತ ದೊಡ್ಡದು ಇನ್ಯಾವುದಿದೆ ?

‌ಅಂಕಣ: ದಿಟನುಡಿ -೩ ಕಳೆದ ವಾರ ನನ್ನ ಕೈರೋಪ್ರಾಕ್ಟರ್ ರೇ ಬಳಿ ಹೋಗಿದ್ದೆ. ಏಕೋ ಗೊತ್ತಿಲ್ಲ ಕೆಲ ದಿನಗಳ ಹಿಂದೆ ಸೊಂಟ ಹಿಡಿದಿತ್ತು. ಏಳಲು, ಕೂರಲು, ನಿಲ್ಲಲು...

ದೇಶ2 hours ago

ಪಂಜಾಬ್ ಚುನಾವಣೆ: ಕೆಂಪು ಕೋಟೆ ಹಿಂಸಾಚಾರದ ಆರೋಪಿಗೆ ರೈತ ಸಂಘಟನೆಯಿಂದ ಟಿಕೆಟ್!

ಚಂಡೀಗಢ: ಜನೆವರಿ 23 (ಯು.ಎನ್.ಐ.) ರೈತರ ಸಂಘಟನೆ ಯುನೈಟೆಡ್ ಸಮಾಜ ಮೋರ್ಚಾ ಪಂಜಾಬ್ ವಿಧಾನಸಭಾ ಚುನಾವಣೆಗೆ 35 ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮಾಜಿ...

ಕರ್ನಾಟಕ2 hours ago

ನ್ಯಾಯಮೂರ್ತಿ ಕೆ ಎಲ್. ಮಂಜುನಾಥ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು: ಜನವರಿ 23 (ಯು.ಎನ್.ಐ.)  ಕರ್ನಾಟಕ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ನ್ಯಾಯಮೂರ್ತಿ ಮಂಜುನಾಥ್ ಅವರು...

ಅಂಕಣ2 hours ago

ಸ್ವಾತಂತ್ರ್ಯ ಕೇವಲ ಮನುಷ್ಯನ ಹಕ್ಕೆ?

ಅ‌ಂಕಣ- ಖಚಿತ ನೋಟ ಹೆಸರಾಂತ ಪ್ರಾಣಿಹಕ್ಕುಗಳ ಪ್ರತಿಪಾದಕ, ಪೀಟರ್ ಸಿಂಗರ್ ಹೇಳುವಂತೆ, ಮನುಷ್ಯ ತನ್ನ ಇತಿಹಾಸದಲ್ಲಿ ಮಾಡಿರುವ ಜಾತಿ ಮತ್ತು ಲಿಂಗ ಆಧಾರಿತ ಶೋಷಣೆಯ ಬಗ್ಗೆ ಇಂದು...

ವಿದೇಶ2 hours ago

ಅಫ್ಘಾನಿಸ್ತಾನ ಬಾಂಬ್ ಸ್ಫೋಟ: 7 ಮಂದಿ ಸಾವು

ಹೆರಾತ್: ಜನೆವರಿ 23 (ಯು.ಎನ್.ಐ.) ಅಫ್ಘಾನಿಸ್ತಾನದ ಪಶ್ಚಿಮ ನಗರವಾಗಿರುವ ಹೆರಾತ್‌ನಲ್ಲಿ ಮಿನಿ ವ್ಯಾನ್‌ ಒಳಗೆ ಇಟ್ಟಿದ್ದ ಬಾಂಬ್ ಸ್ಫೋಟಗೊಂಡು 7 ಮಂದಿ ಸಾವಿಗೀಡಾಗಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರೂ...

ಟ್ರೆಂಡಿಂಗ್

Share