Published
6 months agoon
By
Vanitha Jainಮುಂಬೈ: ಜನವರಿ 03(ಯು.ಎನ್.ಐ) ಮುಂಬೈ-ಗೋವಾ ಕ್ರೂಸ್ ಹಡಗಿನಲ್ಲಿದ್ದ 66 ಪ್ರಯಾಣಿಕರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಕ್ರೂಸ್ ಹಡಗಿನಲ್ಲಿದ್ದ ಒಬ್ಬ ಸಿಬ್ಬಂದಿ ಕೋವಿಡ್ ಕಾಣಿಸಿಕೊಂಡ ನಂತರ, ಹಡಗಿನಲ್ಲಿದ್ದ 2000ಕ್ಕೂ ಹೆಚ್ಚು ಪ್ರಯಾಣಿಕರು ಮತ್ತು ಸಿಬ್ಬಂದಿಯ ಮಾದರಿಗಳನ್ನು ಪರೀಕ್ಷಿಸಲಾಯಿತು. ಈ ಪೈಕಿ 66 ಮಂದಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಪ್ರಯಾಣಿಕರನ್ನು ಇಳಿಸುವ ಬಗ್ಗೆ ಚರ್ಚಿಸಲು ಸರ್ಕಾರವು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಕಲೆಕ್ಟರ್ಗಳು ಮತ್ತು ಮುಂಬೈ ಪೋರ್ಟ್ ಟ್ರಸ್ಟ್ (ಎಂಪಿಟಿ) ಸಿಬ್ಬಂದಿಗೆ ತಿಳಿಸಲಾಗಿದೆ ಎಂದು ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಹೇಳಿದ್ದಾರೆ.
ಎಲ್ಲಾ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆಗಳನ್ನು ನಡೆಸುವಂತೆ ಹಡಗು ನಿರ್ವಾಹಕರನ್ನು ಕೇಳಲಾಗಿದೆ ಮತ್ತು ಕೊರೋನಾ ವೈರಸ್ ಸೋಂಕಿಗೆ ಒಳಗಾಗಿದ್ದರೆ ಅವರನ್ನು ಇಳಿಯಲು ಅನುಮತಿಸಲಾಗುವುದಿಲ್ಲ ಎಂದು ಸಚಿವರು ತಿಳಿಸಿದರು.
ಆಭರಣ ಅಂಗಡಿಗೆ ನುಗ್ಗಿ ದರೋಡೆ, ಮಾಲೀಕನಿಗೆ ಗುಂಡೇಟು; ಸಿಸಿಕ್ಯಾಮೆರಾದಲ್ಲಿ ಕೃತ್ಯ ಸೆರೆ
ಸಿಧು ಮೂಸೆವಾಲಾರ ಕೊನೆಯ ಹಾಡನ್ನ ಯೂಟ್ಯೂಬ್ ನಿಂದ ತೆಗೆದುಹಾಕಿರೋದೇಕೆ?
ಹಕ್ಕುಗಳನ್ನು ರಕ್ಷಿಸುವುದು ಅಪರಾಧವಲ್ಲ; ತೀಸ್ತಾ ಸೆತಲ್ವಾಡ್ ಪರ ವಿಶ್ವಸಂಸ್ಥೆ ಅಧಿಕಾರಿ ದನಿ
“ರಾಷ್ಟ್ರೀಯ ಭದ್ರತೆಗೆ ಡ್ರಗ್ಸ್ ದೊಡ್ಡ ಸವಾಲು” : ಷಾ
ಸಿಎಂ ಭೇಟಿಯಾಗಲು ಪ್ರವಾಹದ ನೀರಲ್ಲಿ ಪರದಾಡಿದ ಅಸ್ಸಾಂ ಯುವಕ
ಸಿಎಂ ಯೋಗಿ ಆದಿತ್ಯನಾಥ್ ಪ್ರಯಾಣಿಸ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ