Published
5 months agoon
ಬೆಳಗಾವಿ (ಸುವರ್ಣ ವಿಧಾನಸೌಧ) ಡಿಸೆಂಬರ್ 15 (ಯು.ಎನ್.ಐ.) ಕೇಂದ್ರ ಸರ್ಕಾರ ಆರ್.ಟಿ.ಒಗೆ ಸಂಬಂಧಿಸಿದಂತೆ ಹೊಸ ನಿಯಮಾವಳಿಗಳನ್ನು ಜಾರಿಗೆ ತಂದಿದೆ. ಇದರ ಪ್ರಕಾರ ಕೆಎಸ್ಆರ್ಟಿಸಿ 9 ಲಕ್ಷ ಕಿಲೋ ಮೀಟರ್ ಓಡಿದ ಬಸ್ ಗಳನ್ನು ಸ್ಕ್ಯಾಪ್ ಮಾಡಲಾಗುತ್ತಿದೆಯೇ? ಕೇಂದ್ರ ಸರ್ಕಾರದ ಹೊಸ ನಿಯಮ ರಾಜ್ಯದಲ್ಲಿ ಅಳವಡಿಸಿಕೊಳ್ಳಲಾಗಿದೆಯೇ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ಶ್ರೀರಾಮುಲು ಅವರನ್ನು ಇಂದು ವಿಧಾನಸಭೆಯಲ್ಲಿ ಪ್ರಶ್ನೆ ಮಾಡಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಶ್ರೀರಾಮುಲು, ಕೇಂದ್ರ ಸರ್ಕಾರದ ನಿಯಮವನ್ನು ರಾಜ್ಯದಲ್ಲಿ ಜಾರಿಗೆ ತರಲಾಗಿದೆ. ಅದರಂತೆ 9 ಲಕ್ಷ ಕಿಲೋ ಮೀಟರ್ ಓಡಿದ ಎಲ್ಲ ಬಸ್ ಗಳನ್ನು ಗುಜರಿಗೆ ಹಾಕುವ ಕಾರ್ಯ ನಡೆದಿದೆ. ಪ್ರತಿ ಡಿಪೋದಲ್ಲಿ, ಪ್ರತಿ ತಿಂಗಳು ಹಳೆಯ ಬಸ್ ಗಳನ್ನು ಸ್ಕ್ರ್ಯಾಪ್ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದ ನೀತಿ ಜಾರಿಯಲ್ಲಿದೆ ಎಂದು ಸಾರಿಗೆ ಸಚಿವರು ಸದನಕ್ಕೆ ತಿಳಿಸಿದರು.
ಈ ವೇಳೆ, ಗುಡ್ಡಗಾಡು ಪ್ರದೇಶಗಳಲ್ಲಿರುವ ಶಾಲಾ ವಿದ್ಯಾರ್ಥಿಗಳಿಗಾಗಿ ಮಿನಿ ಬಸ್ ಗಳನ್ನು ಒದಗಿಸಿಕೊಡಬೇಕೆಂದು ಅಪ್ಪಚ್ಚು ರಂಜನ್ ಕೇಳಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ರಾಮುಲು, ಸದ್ಯಕ್ಕೆ ಇದು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಮಿನಿ ಬಸ್ ಗಳನ್ನು ಗುಡ್ಡುಗಾಡು ಪ್ರದೇಶಗಳ ಸೇವೆಗೆ ನಿಯುಕ್ತಿ ಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು.
ಬಿಡಿಎ ಬಡಾವಣೆ ಮನೆಗಳ ಸಕ್ರಮಕ್ಕೆ ನಿರ್ಧಾರ: ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್
ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಪ್ರತಾಪ್ ರೆಡ್ಡಿ ನೇಮಕ
ಡೆಂಘೀ ಪ್ರಕರಣಗಳು ಹೆಚ್ಚಾಗದಂತೆ ಮುಂಜಾಗ್ರತಾ ಕ್ರಮಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ
ಶಾಲಾ ಮಕ್ಕಳೊಂದಿಗೆ ಸಿಎಂ ಸಂವಾದ; ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಿದ ಬೊಮ್ಮಾಯಿ
ಎಂಬಿಎ ಪದವೀಧರೆಯಾಗಿದ್ರೂ ಕೆಲಸ ಸಿಗದೆ ಉಡುಪಿಯ ಸಹನಾ ಸಾವು; ಡಿಕೆಶಿ ಸಂತಾಪ
ರಾಷ್ಟ್ರಗೀತೆ ಹಾಡೋದನ್ನು ಮುತಾಲಿಕ್ ಹೇಳಿ ಕೊಡಬೇಕಾ? – ಜಮೀರ್