Connect with us


      
ಕರ್ನಾಟಕ

ಸಿಎಂ ಭೇಟಿ ಮಾಡಿದ ಚಿಕ್ಕಮಗಳೂರು ಶಾಸಕರ ನಿಯೋಗ

Iranna Anchatageri

Published

on

ಬೆಂಗಳೂರು: ಜನೆವರಿ 27 (ಯು.ಎನ್.ಐ.) ಶಾಸಕ ಹಾಗೂ ಬಿಜೆಪಿ ಪ್ರಧಾನ ಕಾರ್ಯಯದರ್ಶಿ ಸಿ ಟಿ ರವಿ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲೆ ಶಾಸಕರು ಮುಖ್ಯಮಂತ್ರಿ‌ ಬಸವರಾಜ ಎಸ್ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದರು. ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ನಿಯೋಗದ ಅಹವಾಲುಗಳನ್ನು ಮುಖ್ಯಮಂತ್ರಿ ಆಲಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ, ಮತ್ತು ಭದ್ರಾ ಉಪಕಣವೆಯ 2 ಮತ್ತು 3 ನೇ ಹಂತದ ಯೋಜನೆಗೆ ಹಣ ಬಿಡುಗಡೆ ಹಾಗೂ ಜಿಲ್ಲೆಯ ಜಲಧಾರೆ ಯೋಜನೆಗೆ ಬಜೆಟ್ ಹಣ ನೀಡುವಂತೆ ನಿಯೋಗ ಮನವಿ ಮಾಡಿದೆ. ನಿಯೋಗದಲ್ಲಿ ಉಪ ಸಭಾಪತಿ ಪ್ರಾಣೇಶ್, ಶಾಸಕ ಸುರೇಶ್, ಬೆಳ್ಳಿ ಪ್ರಕಾಶ್, ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್‌ ಸಹ ಇದ್ದರು.

ಸಿಎಂ ಭೇಟಿ ಬಳಿಕ ಜೀವರಾಜ್ ಅವರು ಮಾತನಾಡಿ, ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿದರು. ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ನಮ್ಮ ಜಿಲ್ಲೆಯಲ್ಲಿ ನನಗಿಂತಲೂ ಹಿರಿಯರಿದ್ದಾರೆ, ಮೂಡಿಗೆರೆ ಎಂ ಪಿ ಕುಮಾರಸ್ವಾಮಿ ಇದಾರೆ, ತರೀಕೆರೆ ಸುರೇಶ್ ಇದಾರೆ, ಅವರಿಗೆ ಕೊಡಲಿ. ಸಿ ಟಿ ರವಿ ಮಾರ್ಗದರ್ಶನದಲ್ಲಿ ಮುಂದೆ‌ ಹೋಗ್ತೀವಿ.
ಸಂಪುಟ ವಿಸ್ತರಣೆ ಸಮಯದಲ್ಲಿ ನಮ್ಮ ಜಿಲ್ಲೆಗೆ ಅವಕಾಶ ಸಿಕ್ಕರೆ ಸಿಗಬಹುದು.. ಸಿಗದೇನೂ ಇರಬಹುದು. ಯಾರಿಗೆ ಕೊಟ್ಟರು ಸಂತೋಷ ಕೊಟ್ಟಿಲ್ಲ ಅಂದ್ರೂ ಸಂತೋಷ ಎಂದರು.

ಬಿಜೆಪಿ ಶಾಸಕರು ಕಾಂಗ್ರೆಸ್ನವರ ಸಂಪರ್ಕದಲ್ಲಿರುವ ವಿಚಾರವಾಗಿ ಮಾತನಾಡಿ, ನಮ್ಮ ಪಕ್ಷದಿಂದ ಯಾರು ಹೋಗೋದಿಲ್ಲ. ಚುನಾವಣಾ ಹತ್ತಿರ ಬಂದಾಗ ಏನ್ ಆಗುತ್ತೆ ಅನ್ನೋದು ದೇವರೊಬ್ಬರಿಗೆ ಮಾತ್ರ ಗೊತ್ತು.‌ ಒಮ್ಮೆ ಪಕ್ಷಕ್ಕೆ ಸೇರ್ಪಡೆಯಾದರೆ ಅಲ್ಲಿ ವಲಸಿಗ ಮೂಲ ಅನ್ನೋದು ಬರೋದಿಲ್ಲ.‌ ಈಶ್ವರಪ್ಪ ಉಸ್ತುವಾರಿಯಾಗಿ ಬಂದಿರೋದನ್ನ ನಾವು ಸ್ವಾಗತ ಮಾಡ್ತೀವಿ ಎಂದು ಹೇಳಿದರು.

ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಮಾತನಾಡಿ.‌ ಸಿ.ಟಿ ರವಿ ನೇತೃತ್ವದಲ್ಲಿ ನಮ್ಮ ಪಕ್ಷದ ಚಿಕ್ಕಮಗಳೂರು ಶಾಸಕರೆಲ್ಲ ಸಿಎಂ ಭೇಟಿ ಮಾಡಿದ್ವಿ. ಚಿಕ್ಕಮಗಳೂರು ಜಿಲ್ಲೆ ಸಮಸ್ಯೆ ಬಗ್ಗೆ ಚರ್ಚೆಗೆ ತೆರಳಿದ್ವಿ. ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಮತ್ತು ಮೂಡಿಗೆರೆಯಲ್ಲಿ ತೋಟಗಾರಿಕೆ ವಿಶ್ವವಿದ್ಯಾಲಯ ಹಾಗೂ ಭದ್ರಾ ಉಪಕಣಿವೆಯ ಕಾಮಗಾರಿ, ಜಿಲ್ಲೆಯ ಜಲಧಾರೆಯ ಯೋಜನೆ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ಮನವಿ ಸಲ್ಲಿಸಿ ಬಂದಿದ್ದೇವೆ ಎಂದು ವಿವರಿಸಿದರು.

Share