Published
5 months agoon
ಬೆಂಗಳೂರು, ಡಿ 7 (ಯುಎನ್ಐ) ರಾಜ್ಯಾದ್ಯಂತ 15 ಸರ್ಕಾರಿ ಅಧಿಕಾರಿಗಳ ಮೇಲೆ ನಡೆದ ಎಸಿಬಿ ದಾಳಿಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ನಾಲ್ವರ ಮೇಲೆ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಎಸಿಬಿ ಠಾಣೆಯಲ್ಲಿ ಈ ಎಫ್ಐಆರ್ ದಾಖಲಾಗಿದ್ದು, ಅವರ ಹೆಸರುಗಳು ಈ ಕೆಳಗಿನಂತಿವೆ
ಎಲ್ಲಾ ಆರೋಪಿಗಳ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಕಲಂ13(1) ,13(2) ಅಡಿಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಉಳಿದಂತೆ 11 ಸರ್ಕಾರಿ ಅಧಿಕಾರಿಗಳ ಮೇಲೂ ರಾಜ್ಯದ ವಿವಿಧ ಎಸಿಬಿ ಠಾಣೆಗಳಲ್ಲಿ ಎಫ್ ಐ ಆರ್ ದಾಖಲಾಗಿದೆ.
ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಕಳೆದ ಕೆಲವು ದಿನಗಳ ಹಿಂದೆ ಏಕಕಾಲದಲ್ಲಿ ರಾಜ್ಯದ 60 ಕಡೆ ದಾಳಿ ನಡೆಸಿತ್ತು. ಈ ವೇಳೆ, 15 ಅಧಿಕಾರಿಗಳ ನಿವಾಸ ಸೇರಿ ವಿವಿಧ ಸ್ಥಳಗಳಲ್ಲಿ ಎಸಿಬಿ ಶೋಧ ಕಾರ್ಯಾಚರಣೆ ನಡೆಸಿತ್ತು.
ಬೆಂಗಳೂರು, ಬೆಳಗಾವಿ, ಗದಗ ಸೇರಿ ಹಲವು ಜಿಲ್ಲೆಗಳಲ್ಲಿ ಎಸಿಬಿ ದಾಳಿ ನಡೆಸಿ, ಅಧಿಕಾರಿಗಳ ಮನೆಯಲ್ಲಿರುವ ಚಿನ್ನಾಭರಣ, ಕಾಗದ ಪತ್ರಗಳು, ದಾಖಲೆಗಳನ್ನು ವಶಕ್ಕೆ ಪಡೆಯಲಾಗಿತ್ತು. ಈ ವೇಳೆ ಅಧಿಕಾರಿಗಳು ಕೋಟಿ ಕೋಟಿ ಒಡೆಯರಾಗಿರುವ ಮಾಹಿತಿ ಬೆಳಕಿಗೆ ಬಂದಿದೆ. ಅಧಿಕಾರಿಗಳ ನಿವಾಸ ಮತ್ತು ಬೇರೆ ಬೇರೆ ನಗರಗಳಲ್ಲಿರುವ ಸಂಬಂಧಿಕರ ನಿವಾಸದ ಮೇಲೆಯೂ ದಾಳಿ ನಡೆದಿತ್ತು.