Published
5 months agoon
By
Vanitha Jainಬೆಂಗಳೂರು, ಡಿಸೆಂಬರ್ 10 (ಯು.ಎನ್.ಐ) ರಾಜ್ಯದಲ್ಲಿ ಸುರಿದ ಭಾರಿ ಮಳೆಗೆ ಸಾಕಷ್ಟು ಬೆಳೆ ನಾಶವಾಗಿದೆ ಇದಕ್ಕೆ ಪರಿಹಾರವನ್ನು ನೀಡುವ ಸಲುವಾಗಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ತಿಳಿಸಿದರು.
ವಿಧಾನ ಪರಿಷತ್ ಚುನಾವಣೆಗೆ ಮತ ಚಲಾವಣೆ ಮಾಡಲು ಬಂದ ಮುಖ್ಯಮಂತ್ರಿಗಳು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಪ್ರಥಮಬಾರಿಗೆ ಬೆಳೆ ಹಾನಿಯ ಬಗ್ಗೆ ಸರ್ಕಾರದಿಂದ ಪ್ರತಿನಿತ್ಯ ಆಯಾ ಜಿಲ್ಲೆ ಮತ್ತು ತಾಲ್ಲೂಕುವಾರು ಕೃಷಿ ಇಲಾಖೆಯ ವತಿಯಿಂದ ಬೆಳೆಹಾನಿಯ ಸರ್ವೆ ನಂತರ ದತ್ತಾಂಶವನ್ನು ಅಪ್ ಲೋಡ್ ಆದ ತಕ್ಷಣ ಬೆಳೆ ಪರಿಹಾರ ದೊರೆಯುವ ವ್ಯವಸ್ಥೆ ಮಾಡಲಾಗಿದೆ ಮತ್ತು ಅತಿ ಹೆಚ್ಚು ಬೆಳೆ ಹಾನಿಯಾಗಿರುವುದು ನವೆಂಬರ್ ತಿಂಗಳಿನಲ್ಲಿ ಎಂದು ತಿಳಿದ್ದಾರೆ.
ಕೋವಿಡ್ ಮೂರನೇ ಅಲೆ ಒಮೈಕ್ರಾನ್ ಪ್ರಯುಕ್ತ ಕ್ರಿಸ್ಮಸ್ ಮತ್ತು ಹೊಸ ವರ್ಷದ ಸಂಭ್ರಮಾಚರಣೆಗೆ ಯಾವ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಸದ್ಯ ಇದರ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಒಮೈಕ್ರಾನ್ ವೇಗವಾಗಿ ಹರಡುವಿಕೆಯ ಬಗ್ಗೆ ಮುಂದಿನ ದಿನಗಳಲ್ಲಿ ಸರಿಯಾದ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಬೆಳಗಾವಿ ಅಧಿವೇಶನ
ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಡಿಸೆಂಬರ್ 13 ರಿಂದ 24ರ ವರೆಗೆ ನಡೆಯಲಿದೆ. ಕೋವಿಡ್ ಮತ್ತು ಪ್ರವಾಹದ ಕಾರಣದಿಂದ ಬೆಳಗಾವಿಯಲ್ಲಿ ಕಳೆದ ಎರಡು ವರ್ಷಗಳಿಂದ ಅಧಿವೇಶನ ನಡೆದಿರಲಿಲ್ಲ.
ಎರಡು ವರ್ಷಗಳ ನಂತರ ನಡೆಯಲಿರುವ ಬೆಳಗಾವಿ ಅಧಿವೇಶನದಲ್ಲಿ ಮುಂದೆ ಉತ್ತರ ಕರ್ನಾಟಕ ಭಾಗದಲ್ಲಿ ಆಗಬೇಕಾದಂತಹ ಅಭಿವೃದ್ದಿ ಕಾರ್ಯಗಳು, ನೀರಾವರಿ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದರು.