Connect with us


      




ಆರೋಗ್ಯ

ಜಯದೇವ ಆಸ್ಪತ್ರೆಯಲ್ಲಿ ಬಡರೋಗಿಗಳಿಗೆ ಉಚಿತ ಸ್ಟಂಟ್ ಅಳವಡಿಕೆ

Iranna Anchatageri

Published

on

ಬೆಂಗಳೂರು: ಜೂನ್ 01 (ಯು.ಎನ್.ಐ.) ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು 150 ಬಡರೋಗಿಗಳಿಗೆ ಆಂಜಿಯೋಪ್ಲಾಸ್ಟಿ ಕಾರ್ಯಾಗಾರವನ್ನು 24-26ನೇ ಜೂನ್ 2022ರವರೆಗೆ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದೆ

ಮೆಡ್ಟ್ರಾನಿಕ್, ಅಮೆರಿಕ ಹಾಗೂ ಡಾ.ಗೋವಿಂದರಾಜು ಸುಬ್ರಮಣಿ ಹಾರ್ಟ್ ಫೌಂಡೇಷನ್, ವಿಸ್ಕಿನ್ ಸನ್ ಅಮೆರಿಕಾರವರ ಸಹಯೋಗದೊಂದಿಗೆ ಜನಪಯೋಗಿ ಯೋಜನೆ ಹಮ್ಮಿಕೊಂಡಿದೆ.

150 ಜನ ಬಡತನ ರೇಖೆಗಿಂತ ಕೆಳಗಿರುವ ಹಿರಿಯ ನಾಗರಿಕರಿಗೆ ಉನ್ನತ ಗುಣಮಟ್ಟದ ಮೆಡಿಕೇಟೆಡ್ ಸ್ಟಂಟ್ ಗಳನ್ನು ಉಚಿತವಾಗಿ ಅಳವಡಿಸಲಾಗುವುದು. ಈ ಸೌಲಭ್ಯವನ್ನು ಈಗಾಗಲೇ ಅಂಜಿಯೋಗ್ರಾಂ ತಪಾಸಣೆಗೆ ಒಳಪಟ್ಟಿರುವ ರೋಗಿಗಳು ಪಡೆಯಬಹುದಾಗಿದೆ. ಅವಶ್ಯಕ ರೋಗಿಗಳು ದಾಖಲಾತಿ ಸಂದರ್ಭದಲ್ಲಿ ಬಿಪಿಎಲ್ ಕಾರ್ಡ್ ಅಥವಾ ಕಡಿಮೆ ಆದಾಯ ಪ್ರಮಾಣ ಪತ್ರವನ್ನು ಹೊಂದಿರಬೇಕು. ಹಾಗೂ ಜೂನ್ 20 ರೊಳಗೆ ಹೆಸರು ನೋಂದಿಯಿಸಬೇಕೆಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Share