Connect with us


      




ದೇಶ

ಭಾನುವಾರದಿಂದ ವಯಸ್ಕರಿಗೂ ಬೂಸ್ಟರ್ ಡೋಸ್ ಲಭ್ಯ

Lakshmi Vijaya

Published

on

ನವದೆಹಲಿ:  ಏಪ್ರಿಲ್ 08 (ಯು.ಎನ್. ಐ) ಭಾನುವಾರದಿಂದ ಎಲ್ಲಾ ವಯಸ್ಕರಿಗೆ ಖಾಸಗಿ ಲಸಿಕೆ ಕೇಂದ್ರಗಳಲ್ಲಿ ಕೊರೊನಾವೈರಸ್  ವಿರುದ್ಧ ಹೋರಾಡಲು ಬೂಸ್ಟರ್ ಡೋಸ್ ಗಳು ಸಿಗಲಿವೆ. ಈ ಬಗ್ಗೆ ಕೇಂದ್ರ ಸರ್ಕಾರ ಶುಕ್ರವಾರ ಅಧಿಕೃತವಾಗಿ ಪ್ರಕಟಿಸಿದೆ.

ಪ್ರಸ್ತುತ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಸಿಬ್ಬಂದಿ ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಉಚಿತವಾಗಿ ಬೂಸ್ಟರ್ ಡೋಸ್ ನೀಡಲಾಗುತ್ತಿದೆ. ಆದರೆ ವಯಸ್ಕರಿಗೆ ಬೂಸ್ಟರ್ ಡೋಸ್ ಉಚಿತವಾಗಿ ಸಿಗುವುದಿಲ್ಲ.

“ಪ್ರಥಮ ಮತ್ತು ಎರಡನೇ ಡೋಸ್‌ಗಾಗಿ ಸರ್ಕಾರಿ ಲಸಿಕೆ ಕೇಂದ್ರಗಳ ಮೂಲಕ ನಡೆಯುತ್ತಿರುವ ಉಚಿತ ಲಸಿಕೆ ಕಾರ್ಯಕ್ರಮ ಮತ್ತು ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕೆಲಸಗಾರರು ಮತ್ತು 60 ವರ್ಷ ಮೇಲ್ಪಟ್ಟವರಿಗೆ ನೀಡುತ್ತಿರುವ ಬೂಸ್ಟರ್ ಲಸಿಕಾ ಕಾರ್ಯ ಮುಂದುವರಿಯುತ್ತದೆ ಮತ್ತು ಅದನ್ನು ಮತ್ತಷ್ಟು ವೇಗಗೊಳಿಸಲಾಗುವುದು” ಎಂದು ಸರ್ಕಾರದ ಹೇಳಿಕೆ ತಿಳಿಸಿದೆ.

ದೇಶದ 15 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಸುಮಾರು 96 ಪ್ರತಿಶತದಷ್ಟು ಕನಿಷ್ಠ ಒಂದು COVID-19 ಲಸಿಕೆ ಡೋಸ್ ಅನ್ನು ಪಡೆದಿದ್ದಾರೆ ಮತ್ತು ಸುಮಾರು 83 ಪ್ರತಿಶತದಷ್ಟು ಜನರು ಎರಡೂ ಡೋಸ್‌ಗಳನ್ನು ಸ್ವೀಕರಿಸಿದ್ದಾರೆ ಎಂದು ತಿಳಿಸಲಾಗಿದೆ.

ಅನೇಕ ದೇಶಗಳಲ್ಲಿ ಸೋಂಕು ಮತ್ತೆ ಹೆಚ್ಚುತ್ತಿದ್ದು ಮತ್ತು ಕೆಲವು ಭಾರತೀಯರು ಮೂರನೇ ಡೋಸ್ ಇಲ್ಲದೆ ವಿದೇಶಕ್ಕೆ ಪ್ರಯಾಣಿಸಲು ಕಷ್ಟಪಡುತ್ತಿದ್ದ ಹಿನ್ನೆಲೆಯಲ್ಲಿ ವಯಸ್ಕರಿಗೂ ಬೂಸ್ಟರ್ ಡೋಸ್ ನೀಡಬೇಕೆಂಬ ಒತ್ತಾಯ ಕೇಳಿಬಂದಿತ್ತು.

Share