Connect with us


      
ದೇಶ

ಅಧಿಕೃತವಾಗಿ ಟಾಟಾ ಸಮೂಹಕ್ಕೆ ಏರ್ ಇಂಡಿಯಾ ಕಂಪೆನಿ ಹಸ್ತಾಂತರ

Vanitha Jain

Published

on

ಅಧಿಕೃತವಾಗಿ ಟಾಟಾ ಸಮೂಹಕ್ಕೆ ಏರ್ ಇಂಡಿಯಾ ಕಂಪೆನಿ ಹಸ್ತಾಂತರ

ನವದೆಹಲಿ: ಜನೆವರಿ 27  (ಯು.ಎನ್.ಐ.) ಕೇಂದ್ರ ಸರ್ಕಾರವು ಗುರುವಾರ ಅಧಿಕೃತವಾಗಿ ಏರ್ ಇಂಡಿಯಾವನ್ನು ಟಾಟಾ ಸಮೂಹಕ್ಕೆ ಹಸ್ತಾಂತರಿಸಿದೆ. 69 ವರ್ಷಗಳ ಬಳಿಕ ಪುನಃ ಟಾಟಾ ಮಡಿಲಿಗೆ ಏರ್ ಇಂಡಿಯಾ ಬಂದಿದೆ.

ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್ ಅವರು ಅಧಿಕೃತ ಹಸ್ತಾಂತರಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು

ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್ ಮಾತನಾಡಿ, ಏರ್ ಇಂಡಿಯಾವನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಪೂರ್ಣಗೊಂಡಿದೆ. ಏರ್ ಇಂಡಿಯಾವನ್ನು ತನ್ನ ಮಡಿಲಿಗೆ ಮರಳಿ ಪಡೆದಿರುವುದಕ್ಕೆ ಟಾಟಾ ಸಮೂಹ ತುಂಬಾ ಸಂತೋಷಗೊಂಡಿದೆ. ವಿಶ್ವದರ್ಜೆ ಮಟ್ಟದಲ್ಲಿ ವಿಮಾನಯಾನ ಸಂಸ್ಥೆಯನ್ನು ರಚಿಸಲು, ಉತ್ಸಾಹದಿಂದ ಎಲ್ಲರೊಂದಿಗೆ ಕೆಲಸ ಮಾಡಲು ನಾವು ಎದುರು ನೋಡುತ್ತಿದ್ದೇವೆ ಎಂದು ಹೇಳಿದರು.

ನಿರ್ವಹಣಾ ನಿಯಂತ್ರಣದೊಂದಿಗೆ ಏರ್ ಇಂಡಿಯಾದ 100 ಪ್ರತಿಶತ ಷೇರುಗಳನ್ನು M/s ಟ್ಯಾಲೇಸ್ ಪ್ರೈವೇಟ್ ಲಿಮಿಟೆಡ್‌ಗೆ ವರ್ಗಾಯಿಸುವುದರೊಂದಿಗೆ ಏರ್ ಇಂಡಿಯಾದ ಕಾರ್ಯತಂತ್ರದ ಹೂಡಿಕೆ ವಹಿವಾಟು ಇಂದು ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಸ್ಟ್ರಾಟೆಜಿಕ್ ಪಾಲುದಾರರ ನೇತೃತ್ವದ ಹೊಸ ಮಂಡಳಿಯು ಏರ್ ಇಂಡಿಯಾದ ಜವಾಬ್ದಾರಿಯನ್ನು ವಹಿಸುತ್ತದೆ ಎಂದು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆ (ಡಿಐಪಿಎಎಂ) ಕಾರ್ಯದರ್ಶಿ ತುಹಿನ್ ಕಾಂತಾ ಪಾಂಡೆ ತಿಳಿಸಿದ್ದಾರೆ.

ಸಂಪೂರ್ಣ 2,700 ಕೋಟಿ ರೂಪಾಯಿ ಸರ್ಕಾರಕ್ಕೆ ಬಂದಿರುವುದರಿಂದ ತಲಾಸ್ ಹೊಸ ಮಾಲೀಕರಾಗಿದ್ದಾರೆ. ನಾವು ಷೇರುಗಳನ್ನು ವರ್ಗಾಯಿಸಿದ್ದೇವೆ. 15,300 ಕೋಟಿ ಸಾಲವನ್ನು ಸಹ ಸ್ವೀಕರಿಸಲಾಗಿದೆ. ಆದ್ದರಿಂದ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡಿವೆ” ಎಂದು ಡಿಐಪಿಎಎಂ ಕಾರ್ಯದರ್ಶಿ ಹೇಳಿದರು.

ಸ್ಪರ್ಧಾತ್ಮಕ ಹರಾಜು ಪ್ರಕ್ರಿಯೆಯ ನಂತರ, ಸರ್ಕಾರವು ಕಳೆದ ವರ್ಷ ಅಕ್ಟೋಬರ್ 8 ರಂದು ಏರ್ ಇಂಡಿಯಾವನ್ನು 18,000 ಕೋಟಿ ರೂ.ಗೆ ಟ್ಯಾಲೇಸ್ ಪ್ರೈವೇಟ್ ಲಿಮಿಟೆಡ್‌ಗೆ ಮಾರಾಟ ಮಾಡಿತ್ತು.

Share