Connect with us


      




ಸಿನೆಮಾ

ಜನವರಿ 7 ರಿಂದ ಅಮೆಜಾನ್ ಪ್ರೈಮ್‍ನಲ್ಲಿ ‘ಪುಷ್ಪ’

Published

on

ಹೈದರಾಬಾದ್: ಜನೆವರಿ 06 (ಯು.ಎನ್.ಐ.) ಟಾಲಿವುಡ್ ಸ್ಟಾರ್ ಅಲ್ಲು ಅರ್ಜುನ್ ಮತ್ತು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ: ದಿ ರೈಸ್ ಸಿನಿಮಾ ಜನವರಿ 7 ರಿಂದ ಅಮೆಜಾನ್ ಪ್ರೈಮ್‍ನಲ್ಲಿ ಲಭ್ಯವಾಗಲಿದೆ.

ಪುಷ್ಪ: ದಿ ರೈಸ್ ಸಿನಿಮಾ ಜನವರಿ 7 ರಿಂದ ಅಮೆಜಾನ್ ಪ್ರೈಮ್‍ನಲ್ಲಿ ಲಭ್ಯವಾಗುವ ಬಗ್ಗೆ ಜನವರಿ 5 ರಂದು ಅಮೆಜಾನ್ ಪ್ರೈಮ್ ವೇದಿಕೆ ಘೋಷಿಸಿತ್ತು.

ಈಗಾಗಲೇ ಗಲ್ಲಾ ಪೆಟ್ಟಿಗೆಯಲ್ಲಿ ಧೂಳೆಬ್ಬಿಸಿರುವ ಪುಷ್ಪ ಸಿನಿಮಾದ ಸ್ಟ್ರೀಮಿಂಗ್ ಹಕ್ಕು ದೊಡ್ಡ ಮೊತ್ತಕ್ಕೆ ಮಾರಾಟವಾಗಿದೆ. ಪುಷ್ಪ ಅವರ ಸ್ಟ್ರೀಮಿಂಗ್ ಹಕ್ಕುಗಳನ್ನು ಅಮೆಜಾನ್ ಪ್ರೈಮ್ ವಿಡಿಯೋ ಸುಮಾರು 27-30 ಕೋಟಿ ರೂಪಾಯಿಗೆ ಖರೀದಿಸಿದೆ ಎಂದು ತಿಳಿದು ಬಂದಿದೆ.

ಒಂದು ಚಿತ್ರದ ಸ್ಯಾಟಲೆಟ್ ಮೌಲ್ಯವು ಒಟಿಟಿ ಒಪ್ಪಂದಕ್ಕಿಂತ ಹೆಚ್ಚಾಗಿದೆ. ಪುಷ್ಪ ವಿಷಯದಲ್ಲಿ, ಇದು ಒಟಿಟಿನಲ್ಲಿ ಕೇವಲ ಒಂದು ಭಾಷೆಯಲ್ಲಿ ಮಾತ್ರವಲ್ಲದೆ ನಾಲ್ಕು ಭಾಷೆಗಳಲ್ಲಿ ಲಭ್ಯವಿದೆ. ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡ. ಇದನ್ನು ಥಿಯೇಟರ್‍ಗಳಲ್ಲಿ ನೋಡದವರು ಈಗ ಒಟಿಟಿ ಮೂಲಕ ವೀಕ್ಷಿಸಬಹುದಾಗಿದೆ.

ಸಿನೆಮಾ

ನಾಗಚೈತನ್ಯ, ಸಮಂತಾ ವಿಚ್ಛೇದನಕ್ಕೆ ನಟ ನಾಗಾರ್ಜುನ ಕೊಟ್ಟ ಕಾರಣ ಏನು?

Published

on

ಹೈದರಾಬಾದ್: ಜನೆವರಿ 27 (ಯು.ಎನ್.ಐ.) ಟಾಲಿವುಡ್ ಸ್ಟಾರ್ ಗಳಾದ ನಾಗಚೈತನ್ಯ ಮತ್ತು ಸಮಂತಾ ರುತ್ ಪ್ರಭು 2021ರಲ್ಲಿ ವಿಚ್ಛೇದನ ಘೋಷಿಸಿದರು. ಅಂದಿನಿಂದ ಇಮದಿನವರೆಗೆ ಅವರ ನಡುವಿನ ಪ್ರತ್ಯೇಕತೆಗೆ ಕಾರಣ ಏನು ಎಂಬುದು ಇಬ್ಬರು ಮಾತನಾಡಿಲ್ಲ. ನಾಗಚೈತನ್ಯ ಬಂಗಾರರಾಜು ಸಿನಿಮಾ ಬಿಡುಗಡೆಯಾದ ಸಂತಸದಲ್ಲಿದ್ದರೆ, ಸಮಂತಾ ಪುಷ್ಪ ಸಿನಿಮಾದ ಯಶಸ್ಸಿನಲ್ಲಿ ಬೀಗುತ್ತಾ ಇಬ್ಬರು ಬೇರೆ ಬೇರೆ ಪ್ರಾಜೆಕ್ಟ್ ಗಳಲ್ಲಿ ಬ್ಯುಸಿಯಾಗಿದ್ದಾರೆ.

ಇದೀಗ ನಾಗಚೈತನ್ಯ ಅವರ ತಂದೆ, ಸಮಂತಾ ಅವರ ಮಾವ, ನಾಗಾರ್ಜುನ ಇವರಿಬ್ಬರ ವಿಚ್ಛೇದನದ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದಾರೆ. ೨೦೨೧ರ ನಂತರ ಅವರ ವಿವಾಹ ಜೀವನದಲ್ಲಿ ಮೊದಲು ಇದ್ಧಷ್ಟು ಸಾಮರಸ್ಯ ಇರಲಿಲ್ಲ. ೨೦೨೧ ರ ನಂತರ ಅವರ ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಪ್ರಾರಂಭವಾದವು. ಮೊದಲು ಸಮಂತಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದರು. ಇದನ್ನು ನಾಗ ಚೈತನ್ಯ ಒಪ್ಪಿಕೊಂಡರು ಎಂದು ಹೇಳಿದ್ದಾರೆ.

ಆದರೆ ನಾಗಚೈತನ್ಯ ನನ್ನ ಬಗ್ಗೆ ತುಂಬಾ ಚಿಂತಾಕ್ರಾಂತರಾಗಿದ್ದರು. ನಾನು ಏನು ಯೊಚಿಸುತ್ತೇನೆ, ಕುಟುಂಬದ ಖ್ಯಾತಿಗೆ ತೊಂದರೆಯಾಗುತ್ತಿದೆಯೇ ಎಂದು ಆಲೋಚಿಸಿದ್ದರು. ನಾನು ತುಂಬಾ ಚಿಂತೆ ಮಾಡುತ್ತೇನೆ ಎಂಬ ಕಾರಣಕ್ಕೆ ನನಗೆ ಸಾಂತ್ವಾನವನ್ನು ಹೇಳಿದ್ದರು. ದಾಂಪತ್ಯ ಜೀವನದಲ್ಲಿ ಅವರಿಬ್ಬರೂ 4 ವರ್ಷಗಳಿಂದ ಒಟ್ಟಿಗೆ ಇದ್ದಾರೆ ಆದರೆ ಅಂತಹ ಯಾವುದೇ ಸಮಸ್ಯೆ ಅವರ ನಡುವೆ ಬಂದಿಲ್ಲ. ಇಬ್ಬರೂ ತುಂಬಾ ಆತ್ಮೀಯರಾಗಿದ್ದರು ಮತ್ತು ಅದು ಹೇಗೆ ಇವರಿಬ್ಬರು ಈ ನಿರ್ಧಾರಕ್ಕೆ ಬಂದರು ಎಂದು ನನಗೆ ತಿಳಿದಿಲ್ಲ. 2021ರ ಹೊಸ ವರ್ಷವನ್ನು ಒಟ್ಟಿಗೆ ಆಚರಿಸಿದರು, ಅದರ ನಂತರ ಸಮಸ್ಯೆಗಳು ಉದ್ಭವಿಸಿವೆ ಎಂದು ತೋರುತ್ತದೆ ನಾಗಾರ್ಜುನ ಹೇಳಿದರು.

Continue Reading

ಸಿನೆಮಾ

‘ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾರೆ’ – ನಟಿ ಶ್ವೇತಾ ತಿವಾರಿ

Published

on

ಭೋಪಾಲ್: ಜನೆವರಿ 27 (ಯು.ಎನ್.ಐ.) ಕಿರುತೆರೆ ಹಾಗೂ ಹಿಂದಿ ಫಿಲಂ ನಟಿ ಶ್ವೇತಾ ತಿವಾರಿ ದೇವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಫ್ಯಾಶನ್ ಸಂಬಂಧಿತ ವೆಬ್ ಸರಣಿಯ ಪ್ರಕಟಣೆಗಾಗಿ ಅವರು ಸ್ಟಾರ್‌ ಕಾಸ್ಟ್ ಮತ್ತು ನಿರ್ಮಾಣ ತಂಡದೊಂದಿಗೆ ಭೋಪಾಲ್ ನಲ್ಲಿರುವ ಅವರು, ಧಾರಾವಾಹಿಯ ಪ್ರಚಾರದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪ್ರಚಾರದ ವೇಳೆ ಶ್ವೇತಾ ತಿವಾರಿ ವೇದಿಕೆಯಲ್ಲಿ ನಡೆದ ಚರ್ಚಾ ಕಾರ್ಯಕ್ರಮದಲ್ಲಿ ತಮಾಷೆ ಮಾಡುತ್ತಾ, ‘ದೇವರು ನನ್ನ ಬ್ರಾ ಗಾತ್ರವನ್ನು ತೆಗೆದುಕೊಳ್ಳುತ್ತಿದ್ದಾರೆ’ ಎಂದು ಹೇಳಿದ್ದಾರೆ. ಶ್ವೇತಾ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಮನೀಶ್ ಹರಿಶಂಕರ್ ನಿರ್ದೇಶನದ ಈ ಧಾರಾವಾಹಿಯ ಪ್ರಚಾರದ ವೇಳೆ ಈ ವಿವಾದ ಸೃಷ್ಟಿಯಾಗಿದೆ. ವೀಡಿಯೋ ವೈರಲ್ ಆದ ಬಳಿಕ ಕೆಲವರು ನಟಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶ್ವೇತಾ ತಿವಾರಿ ಅವರ ವಿವಾದಾತ್ಮಕ ಹೇಳಿಕೆ ವಿರುದ್ಧ ಮಧ್ಯಪ್ರದೇಶದ ಗೃಹ ಸಚಿವ ಡಾ.ನರೋತ್ತಮ್ ಮಿಶ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ನರೋತ್ತಮ್ ಮಿಶ್ರಾ, ‘ನಾನು ಶ್ವೇತಾ ತಿವಾರಿ ಹೇಳಿಕೆಯನ್ನು ಖಂಡಿಸುತ್ತೇನೆ. ತನಿಖೆ ನಡೆಸಿ ಶೀಘ್ರವೇ ವರದಿ ಸಲ್ಲಿಸುವಂತೆ ಭೋಪಾಲ್ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ. ಆ ಬಳಿಕ ನಟಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Continue Reading

ಸಿನೆಮಾ

ವಿವಾಹ ಜೀವನಕ್ಕೆ ಕಾಲಿರಿಸಿದ ಮೌನಿರಾಯ್, ಸೂರಜ್ ನಂಬಿಯಾರ್

Published

on

ಪಣಜಿ: ಜನೆವರಿ 27 (ಯು.ಎನ್.ಐ.) ಬಾಲಿವುಡ್ ನಟಿ ಮೌನಿ ರಾಯ್ ಮತ್ತು ಉದ್ಯಮಿ ಸೂರಜ್ ನಂಬಿಯಾರ್ ಇಂದು ಗೋವಾದಲ್ಲಿ ವಿವಾಹ ಜೀವನಕ್ಕೆ ಕಾಲಿರಿಸಿದ್ದಾರೆ. ಇವರ ವಿವಾಹದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಮೌನಿರಾಯ್ ಹಾಗೂ ಬಹುಕಾಲದ ಗೆಳೆಯ ಸೂರಜ್ ನಂಬಿಯಾರ್ ಅವರು ಮಲಯಾಳಿ ಸಂಪ್ರದಾಯದ ಪ್ರಕಾರ ವಿವಾಹವಾಗಿದ್ದಾರೆ. ಇದಾದ ನಂತರ ಸಂಜೆ ಬೆಂಗಾಲಿ ಮದುವೆ ನಡೆಯಲಿದೆ.

ಮೌನಿ ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಮೂಲದವರು. ಮತ್ತೊಂದೆಡೆ, ಸೂರಜ್ ದುಬೈನಲ್ಲಿ ಬ್ಯಾಂಕರ್ ಮತ್ತು ಉದ್ಯಮಿ, ಅವರು ಬೆಂಗಳೂರಿನ ಜೈನ ಕುಟುಂಬಕ್ಕೆ ಸೇರಿದವರು.

ಮೌನಿ ಬಿಳಿ ಹಾಗೂ ಕೆಮಪು ಬಾರ್ಡರ್ ಸೀರೆ, ಒಡವೆ ತೊಟ್ಟು ಕಂಗೊಳಿಸಿದರೆ, ಸೂರಜ್ ಕ್ರಿಮ್ ಬಣ್ಣದ ಕುರ್ತಾ ಮತ್ತು ಬಿಳಿ ಪಂಚೆಯಲ್ಲಿ ಮಿಂಚಿದರು. ಮೌನಿ ಈಗಾಗಲೇ ತಮ್ಮ ವಿವಾಹದ ಫೋಟೋಗಳನ್ನು ಇನ್‌ಸ್ಟಾಗ್ರಾಮ್ ನಲ್ಲಿ ಅಪ್ ಲೋಡ್ ಮಾಡಿದ್ದಾರೆ.

Continue Reading
Advertisement
ಕರ್ನಾಟಕ2 mins ago

ಉ.ಪ್ರ.‌ಚುನಾವಣೆ ನಂತರ ರಾಜ್ಯದಲ್ಲಿ‌ಮಹತ್ವದ ಬದಲಾವಣೆ: ಸಿ.ಎಂ ಇಬ್ರಾಹಿಮ್

ಬೆಂಗಳೂರು: ಜನೆವರಿ 27 (ಯು.ಎನ್.ಐ.)‌ ನಾನು ಹೇಳಿದಂತೆ ರಾಜ್ಯದಲ್ಲಿ ರಾಜಕೀಯ ಬೆಳವಣಿಗೆಗಳು ಘಟಿಸುತ್ತಾ ಬಂದಿವೆ.‌ ಉತ್ತರ ಪ್ರದೇಶ ಚುನಾವಣಾ ಬಳಿಕ ಸಾರ್ವತ್ರಿಕ ಚುನಾವಣೆ, ಇಲ್ಲವೇ ರಾಷ್ಟ್ರ ಪತಿ...

ದೇಶ16 mins ago

ವೈಯಕ್ತಿಕ ದ್ವೇಷ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ದುಷ್ಟರು

ನವದೆಹಲಿ: ಜನೆವರಿ 27 (ಯು.ಎನ್.ಐ.) ವೈಯಕ್ತಿಕ ದ್ವೇಷದ ಕಾರಣ ಮಹಿಳೆಯನ್ನು ಅಪಹರಿಸಿ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ದುಷ್ಟರು ಚಪ್ಪಲಿ ಹಾರ ಹಾಕಿ, ಮುಖಕ್ಕೆ ಕಪ್ಪು...

ಕರ್ನಾಟಕ1 hour ago

ಸಿಎಂ ಭೇಟಿ ಮಾಡಿದ ಚಿಕ್ಕಮಗಳೂರು ಶಾಸಕರ ನಿಯೋಗ

ಬೆಂಗಳೂರು: ಜನೆವರಿ 27 (ಯು.ಎನ್.ಐ.) ಶಾಸಕ ಹಾಗೂ ಬಿಜೆಪಿ ಪ್ರಧಾನ ಕಾರ್ಯಯದರ್ಶಿ ಸಿ ಟಿ ರವಿ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲೆ ಶಾಸಕರು ಮುಖ್ಯಮಂತ್ರಿ‌ ಬಸವರಾಜ ಎಸ್ ಬೊಮ್ಮಾಯಿ...

ಕರ್ನಾಟಕ2 hours ago

ಸಿಎಂ‌ ಇಬ್ರಾಹಿಂ ಬಂದರೆ ಸ್ವಾಗತ: ಎಚ್‌‌‌ಡಿಕೆ

ಬೆಂಗಳೂರು:ಜನೆವರಿ 27 (ಯು.ಎನ್.ಐ.) ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಿಎಂ‌ ಇಬ್ರಾಹಿಂ‌ ಅವರು ಜಾತ್ಯತೀತ ಜನತಾ ದಳಕ್ಕೆ ಬಂದರೆ ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.‌ಕುಮಾರಸ್ವಾಮಿ ಹೇಳಿದ್ದಾರೆ....

ದೇಶ2 hours ago

ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಅಂತ್ಯ; ಶಾಲಾ-ಕಾಲೇಜುಗಳು ಬಂದ್

ಹೊಸದಿಲ್ಲಿ: ಜನೆವರಿ 27 (ಯು.ಎನ್.ಐ.) ರಾಷ್ಟ್ರ ರಾಜಧಾನಿ ಜನರಿಗೆ ದೆಹಲಿ ಸರ್ಕಾರ ಗುಡ್ ನ್ಯೂಸ್ ನೀಡಿದೆ. ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿರುವ  ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಅನ್ನು...

ಕ್ರೀಡೆ3 hours ago

ಟೀಂ ಇಂಡಿಯಾ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಟ್ವಿಟರ್ ಖಾತೆ ಹ್ಯಾಕ್

ಮುಂಬೈ: ಜನೆವರಿ ೨೭ (ಯು.ಎನ್.ಐ.) ಇತ್ತೀಚೆಗೆ ಬಿಟ್‌ಕಾಯಿನ್ ಸ್ಕ್ಯಾಮರ್ ಗಳು ಟ್ವಿಟರ್ ಖಾತೆಗಳನ್ನು ಹ್ಯಾಕ್ ಮಾಡುತ್ತಿದ್ದು, ಈಗಾಗಲೇ ಸಾಕಷ್ಟು ಮಂದಿಯ ಟ್ವಿಟರ್ ಖಾತೆ ಇದೇ ವಿಚಾರಕ್ಕೆ ಹ್ಯಾಕ್...

ಸಿನೆಮಾ3 hours ago

ನಾಗಚೈತನ್ಯ, ಸಮಂತಾ ವಿಚ್ಛೇದನಕ್ಕೆ ನಟ ನಾಗಾರ್ಜುನ ಕೊಟ್ಟ ಕಾರಣ ಏನು?

ಹೈದರಾಬಾದ್: ಜನೆವರಿ 27 (ಯು.ಎನ್.ಐ.) ಟಾಲಿವುಡ್ ಸ್ಟಾರ್ ಗಳಾದ ನಾಗಚೈತನ್ಯ ಮತ್ತು ಸಮಂತಾ ರುತ್ ಪ್ರಭು 2021ರಲ್ಲಿ ವಿಚ್ಛೇದನ ಘೋಷಿಸಿದರು. ಅಂದಿನಿಂದ ಇಮದಿನವರೆಗೆ ಅವರ ನಡುವಿನ ಪ್ರತ್ಯೇಕತೆಗೆ...

ದೇಶ3 hours ago

ಅನ್ಯ ಜಾತಿ ಹುಡುಗಿ ಮದುವೆಯಾದ ಮಗ: ತಾಯಿ ಮೇಲೆ ಹಲ್ಲೆ

ಚೆನ್ನೈ: ಜನೆವರಿ 27 (ಯು.ಎನ್.ಐ.) ಅನ್ಯ ಜಾತಿಯ ಹುಡುಗಿಯನ್ನು ಮಗ ವಿವಾಹವಾದ ಕಾರಣ ತಾಯಿಯನ್ನು ದೀಪದ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯ ತಿರುಚುಲಿ...

ಸಿನೆಮಾ4 hours ago

‘ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾರೆ’ – ನಟಿ ಶ್ವೇತಾ ತಿವಾರಿ

ಭೋಪಾಲ್: ಜನೆವರಿ 27 (ಯು.ಎನ್.ಐ.) ಕಿರುತೆರೆ ಹಾಗೂ ಹಿಂದಿ ಫಿಲಂ ನಟಿ ಶ್ವೇತಾ ತಿವಾರಿ ದೇವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಫ್ಯಾಶನ್ ಸಂಬಂಧಿತ ವೆಬ್ ಸರಣಿಯ...

ಸಿನೆಮಾ4 hours ago

ವಿವಾಹ ಜೀವನಕ್ಕೆ ಕಾಲಿರಿಸಿದ ಮೌನಿರಾಯ್, ಸೂರಜ್ ನಂಬಿಯಾರ್

ಪಣಜಿ: ಜನೆವರಿ 27 (ಯು.ಎನ್.ಐ.) ಬಾಲಿವುಡ್ ನಟಿ ಮೌನಿ ರಾಯ್ ಮತ್ತು ಉದ್ಯಮಿ ಸೂರಜ್ ನಂಬಿಯಾರ್ ಇಂದು ಗೋವಾದಲ್ಲಿ ವಿವಾಹ ಜೀವನಕ್ಕೆ ಕಾಲಿರಿಸಿದ್ದಾರೆ. ಇವರ ವಿವಾಹದ ಫೋಟೋಗಳು...

ಟ್ರೆಂಡಿಂಗ್

Share