Connect with us


      




ದೇಶ

2 ಅಧ್ಯಕ್ಷ ಸ್ಥಾನಗಳಿಂದ ಕೆಳಗಿಳಿದ ಅನಿಲ್ ಅಂಬಾನಿ

Vanitha Jain

Published

on

ಮುಂಬೈ: ಮಾರ್ಚ್ 26 (ಯು.ಎನ್.ಐ.) ಮಹತ್ವದ ಬೆಳವಣಿಗೆಯಲ್ಲಿ ರಿಲಯನ್ಸ್ ಸಮೂಹದ ಅಧ್ಯಕ್ಷ ಅನಿಲ್ ಅಂಬಾನಿ ರಿಲಾಯನ್ಸ್ ಪವರ್ ಹಾಗೂ ರಿಲಾಯನ್ಸ್ ಇನ್‌ಫ್ರಾಸ್ಟ್ರಕ್ಚರ್‌ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದು ಸೆಬಿ ಆದೇಶದ ಎಫೆಕ್ಟ್ . ಹೇಗೆಂದರೆ ಅನಿಲ್ ಅಂಬಾನಿ ಸೆಬಿಯಲ್ಲಿ ಪಟ್ಟಿ ಮಾಡಲಾಗಿರುವ ಯಾವುದೇ ಸಂಸ್ಥೆಯೊಂದಿಗೆ ಗುರುತಿಸಿಕೊಳ್ಳುವಂತಿಲ್ಲ ಎಂದು ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ( ಸೆಬಿ) ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಅನಿಲ್ ಅಂಬಾನಿ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.

ಸಂಸ್ಥೆಯ ನಿಧಿಗಳನ್ನು ಅಕ್ರಮವಾಗಿ ಬಳಕೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ರಿಲಾಯನ್ಸ್ ಹೋಮ್ ಫೈನಾನ್ಸ್ ಲಿಮಿಟೆಡ್, ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಸೇರಿದಂತೆ ಮೂವರನ್ನ ಸೆಬಿ ಯಾವುದೇ ಸಂಸ್ಥೆಯಲ್ಲಿ ಯಾವುದೇ ಹುದ್ದೆಯನ್ನು ಹೊಂದುವುದರಿಂದ ನಿಷೇಧ ಮಾಡಿತ್ತು.

ಸೆಬಿಯ ಮಧ್ಯಂತರ ಆದೇಶದ ನಂತರ ನಾನ್ ಎಕ್ಸಿಕ್ಯೂಟಿವ್ ಡೈರೆಕ್ಟರ್ ಅನಿಲ್ ಅಂಬಾನಿ ಕಂಪನಿಯ ನಿರ್ದೇಶಕ ಸ್ಥಾನದಿಂದ ಕೆಳಗಿಳಿದಿದ್ದಾರೆ ಎಂದು ರಿಲಯನ್ಸ್ ಪವರ್ ಷೇರು ವಿನಿಮಯ ಕೇಂದ್ರಕ್ಕೆ ನೀಡಿರುವ ಮಾಹಿತಿಯಲ್ಲಿ ತಿಳಿಸಿದೆ.

ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್ ಸಹ ಷೇರು ವಿನಿಮಯ ಕೇಂದ್ರಕ್ಕೆ ಅನಿಲ್ ಅಂಬಾನಿ ಅವರು “ಸೆಬಿಯ ಮಧ್ಯಂತರ ಆದೇಶವನ್ನು ಅನುಸರಿಸಿ” ಕಂಪನಿಯ ನಿರ್ದೇಶಕರ ಮಂಡಳಿಗೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿಸಿದೆ.

ಫೆಬ್ರವರಿಯಲ್ಲಿ, ಸೆಬಿ ರಿಲಯನ್ಸ್ ಹೋಮ್ ಫೈನಾನ್ಸ್ ಲಿಮಿಟೆಡ್, ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಮತ್ತು ಇತರ ಮೂವರನ್ನು ಸೆಕ್ಯುರಿಟೀಸ್ ಮಾರುಕಟ್ಟೆಯಿಂದ ಹಣ ಹಿಂಪಡೆದ ಆರೋಪದ ಮೇಲೆ ನಿಷೇಧಿಸಿತ್ತು.

Share