Connect with us


      




ರಾಜಕೀಯ

ವಿರೇಂದ್ರ ಸೆಹ್ವಾಗ್ ಸಹೋದರಿ ಅಂಜು ಸೆಹ್ವಾಗ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

Published

on

ನವದೆಹಲಿ, ಡಿಸೆಂಬರ್ 31(ಯು.ಎನ್.ಐ) ಭಾರತದ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಸಹೋದರಿ ಅಂಜು ಸೆಹ್ವಾಗ್ ಶುಕ್ರವಾರ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 2022ರ ವಿಧಾನಸಭಾ ಚುನಾವಣೆಗೆ ಮುನ್ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಭದ್ರಕೋಟೆ ಪಂಜಾಬ್‍ನ ಪಟಿಯಾಲಾದಲ್ಲಿ ‘ಶಾಂತಿ ಮಾರ್ಚ್’ ನಡೆಸಿದ ದಿನದಂದು ಈ ಬೆಳವಣಿಗೆ ನಡೆದಿದೆ.

ಇತ್ತೀಚೆಗಷ್ಟೇ ಚಂಡೀಗಢ ಸಿವಿಸಿ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ಎಎಪಿ ಪಂಜಾಬಿನಲ್ಲಿ ಮುಂದಿನ ಚುನಾವಣೆಯಲ್ಲಿ ಪಾರುಪತ್ಯ ಸಾಧಿಸಲು ಯತ್ನ ನಡೆಸಿದೆ. ಪಂಜಾಬ್, ಗೋವಾ, ಉತ್ತರಾಖಂಡ, ಉತ್ತರ ಪ್ರದೇಶದಲ್ಲೂ ತಮ್ಮ ಪಕ್ಷವನ್ನು ವಿಸ್ತರಿಸಲು ಸಿದ್ಧತೆ ನಡೆಸಿದೆ.

ಅಂಜು ಸೆಹ್ವಾಗ್ ಯಾರು?
1977ರಲ್ಲಿ ಚೌಧರಿ ಕ್ರಿಶನ್ ಸೆಹ್ವಾಗ್ ಮತ್ತು ಕೃಷ್ಣ ಸೆಹ್ವಾಗ್ ದಂಪತಿಗೆ ಜನಿಸಿದ ಅಂಜು, ಪ್ರಸಿದ್ಧ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರ ಸಹೋದರಿ. ಇವರು ಮೂಲತಃ ಹರಿಯಾಣದ ಜಜ್ಜರ್ ಜಿಲ್ಲೆಯ ಚುಡಾನಿ ಗ್ರಾಮದವರು. ಅಂಜು ದಕ್ಷಿಣ ದೆಹಲಿಯ ಮದಂಗಿರ್ ಗ್ರಾಮದ ಉದ್ಯಮಿ ಚೌಧರಿ ರವೀಂದರ್ ಸಿಂಗ್ ಮಹಲ್ವಾಲ್ ಅವರನ್ನು ವಿವಾಹವಾಗಿದ್ದಾರೆ. 2012ರಿಂದಲೂ ಸಾಮಾಜಿಕ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿರುವ ಅಂಜು ಸೆಹ್ವಾಗ್, ದಕ್ಷಿಣಪುರಿ ವಿಸ್ತರಣಾ ವಾರ್ಡ್‍ನಿಂದ ಎಂಸಿಡಿ ಕೌನ್ಸಿಲರ್ ಚುನಾವಣೆಗೆ ಸ್ಪರ್ಧಿಸಿ ಗೆದ್ದಿದ್ದರು.

ರಾಜಕೀಯ

ಯುಪಿಯಲ್ಲಿ ಏಕಾಂಗಿಯಾಗಿ ಕಣಕ್ಕಿಳಿಯಲಿರುವ ಜೆಡಿ(ಯು)

Published

on

By

ನವದೆಹಲಿ, ಜ ೧೭(ಯುಎನ್ ಐ) ಸಂಯುಕ್ತ ಜನತಾ ದಳ(ಜೆಡಿಯು) ಪಕ್ಷ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದೆ.
ಪಕ್ಷದ ರಾಷ್ಟ್ರೀಯ ವಕ್ತಾರ ಕೆ.ಸಿ. ತ್ಯಾಗಿ. ಈ ಕುರಿತು ಪ್ರತಿಕ್ರಿಯಿಸಿ ನಮ್ಮ ಪಕ್ಷದ ನಾಯಕರು ನಾಳೆ ಲಖನೌದಲ್ಲಿ ಸಭೆ ನಡೆಸಿ, ಅಭ್ಯರ್ಥಿಗಳ ಆಯ್ಕೆ ಸಂಬಂಧ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಚುನಾವಣೆಯನ್ನು ಜಂಟಿಯಾಗಿ ಎದುರಿಸಲು ಬಿಜೆಪಿಗೆ ೩೧ ಅಭ್ಯರ್ಥಿಗಳ ಪಟ್ಟಿಯನ್ನು ಜೆಡಿ(ಯು) ಸಲ್ಲಿಸಿತ್ತು. ಆದರೆ ನಮ್ಮ ಆಹ್ವಾನಕ್ಕೆ ಬಿಜೆಪಿ ಸೂಕ್ತವಾಗಿ ಸ್ಪಂದಿಸಿಲ್ಲ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಜೆಡಿ(ಯು) ಏಕಾಂಗಿಯಾಗಿ ಕಣಕ್ಕಿಳಿಯುವುದರಿಂದ ಬಿಹಾರದಲ್ಲಿ ಬಿಜೆಪಿ-ಜೆಡಿ(ಯು) ಪಕ್ಷಗಳ ಮೈತ್ರಿಗೆ ಯಾವುದೇ ಸಮಸ್ಯೆ ಉದ್ಭವಿಸುವುದಿಲ್ಲ ಎಂದು ತ್ಯಾಗಿ ಸ್ಪಷ್ಟಪಡಿಸಿದ್ದಾರೆ.

Continue Reading

ರಾಜಕೀಯ

ನಾರಾಯಣ ಗುರುಗಳಿಗೆ ಎಸಗಿರುವ ಅಪಮಾನ.. “ಹಿಂದು ಹೃದಯ ಸಾಮ್ರಾಟ” ಮೋದಿ ಗಮನಕ್ಕೆ ಬಂದಿಲ್ಲವೇ… ಸಿದ್ದು ಪ್ರಶ್ನೆ

Published

on

By

ಬೆಂಗಳೂರು, ಜ 16(ಯುಎನ್‌ ಐ) ಸಮಾಜ ಸುಧಾರಕ ನಾರಾಯಣ ಗುರುಗಳಿಗೆ ಮಾಡಿರುವ ಅವಮಾನಕ್ಕಾಗಿ ಕೇಂದ್ರದ
ಬಿಜೆಪಿ ನೇತೃತ್ವದ ಸರ್ಕಾರ ದೇಶದ ಕ್ಷಮೆ ಕೇಳಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ತಮ್ಮ ಮೂಗಿನಡಿಯಲ್ಲಿಯೇ ನಾರಾಯಣ ಗುರುಗಳಿಗೆ ಮಾಡಿರುವ ಅವಮಾನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇನ್ನೂ ಪ್ರತಿಕ್ರಿಯಿಸದೆ
ಇರುವುದು ಆಶ್ಚರ್ಯಕರ.ಇದನ್ನು ಹೇಗೆ ಅರ್ಥೈಸಬೇಕು? ಈ ಅವಮಾನಕ್ಕೆ ಸಹಮತ ಇದೆಯೆಂದೇ? ಎಂದು ಸಿದ್ದರಾಮಯ್ಯ ಸರಣಿ ಟ್ವೀಟ್‌ ಗಳಲ್ಲಿ ಪ್ರಶ್ನಿಸಿದ್ದಾರೆ.

ಈ ಬಾರಿಯ ಗಣರಾಜ್ಯೋತ್ಸವದಲ್ಲಿ ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಪ್ರಾಧಾನ್ಯ ಕೊಟ್ಟು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ನಾನು ಮುಖ್ಯಮಂತ್ರಿಯಾಗಿದ್ದಾಗ ನಾರಾಯಣ ಗುರುಗಳ ಜಯಂತಿಯನ್ನು
ರಾಜ್ಯ ಸರ್ಕಾರವೇ ಅಧಿಕೃತವಾಗಿ ಆಚರಿಸಬೇಕೆಂಬ ನಿರ್ಧಾರ ಕೈಗೊಂಡೆ. ಇದರಿಂದಾಗಿ
ಇಂದು ರಾಜ್ಯದ ಮೂಲೆ ಮೂಲೆಗೆ ಗುರುಗಳ ಚಿಂತನೆಯ ಸಂದೇಶ ತಲುಪುತ್ತಿದೆ‌ ಎಂಬ ಹೆಮ್ಮೆ ಮತ್ತು
ತೃಪ್ತಿ ನನ್ನದು ಎಂದು ಹೇಳಿದ್ದಾರೆ.

ಹಿಂದೂ ಧರ್ಮದ ಸುಧಾರಕ ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ
ಅವಕಾಶ ನಿರಾಕರಿಸಿ ಅವಮಾನಿಸಿರುವುದು ‘ಹಿಂದು ಹೃದಯ ಸಾಮ್ರಾಟ’ ಎಂದು ಕರೆಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ಇ‌ನ್ನೂ ಬಂದಿಲ್ಲವೇ? ಶತಮಾನದ ಹಿಂದೆಯೇ
ಅಸ್ಪೃಶ್ಯತೆ ಮತ್ತು ಪುರೋಹಿತಷಾಹಿ ವ್ಯವಸ್ಥೆ ವಿರುದ್ದ ಸಿಡಿದೆದ್ದು ಹಿಂದೂ ಧರ್ಮದ ಸುಧಾರಣೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದ ನಾರಾಯಣ ಗುರುಗಳಿಗೆ ಅವಮಾನಿಸಿರುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರಕ್ಕೆ ಹಿಂದೂ ಧರ್ಮದ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಯಾವ ಕಾರಣಕ್ಕಾಗಿ ಅವಕಾಶ ನಿರಾಕರಿಸಲಾಗಿದೆ? ನಾರಾಯಣ ಗುರುಗಳು ಹಿಂದೂ ಧರ್ಮಕ್ಕೆ ಸೇರಿದವರಲ್ಲವೇ?
ಅಂತಹ ಅಭಿಪ್ರಾಯವನ್ನು ಬಿಜೆಪಿ ಹೊಂದಿದ್ದರೆ ಹಾಗೆಂದು ಮುಕ್ತವಾಗಿ ಹೇಳುವ ಧೈರ್ಯ ತೋರಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ
ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ತಳಸಮುದಾಯದ ಮಹಾಪುರುಷರ ಬಗ್ಗೆ ಬಿಜೆಪಿ ಮತ್ತು ಕೇಂದ್ರ ಸರ್ಕಾರಕ್ಕೆ ಇರುವ ಪೂರ್ವಗ್ರಹ ಮತ್ತು ತಿರಸ್ಕಾರಕ್ಕೆ ಇದು ಸಾಕ್ಷಿ ಎಂದು ಹೇಳಿದ್ದಾರೆ.

Continue Reading

ರಾಜಕೀಯ

ಮುಲಾಯಂಸಿಂಗ್‌ ಯಾದವ್‌ ಕಿರಿಯಸೊಸೆ ಬಿಜೆಪಿಗೆ…?

Published

on

By

ಲಕ್ನೋ, ಜ 16(ಯುಎನ್ ಐ) ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಸಾಕಷ್ಟು ಪಕ್ಷಾಂತರಗಳಿಗೆ ಕಾರಣವಾಗಿದೆ. ಸಮಾಜವಾದಿ ಪಕ್ಷದ ಪರಮೋಚ್ಚ ನಾಯಕ ಮುಲಾಯಂ ಸಿಂಗ್ ಯಾದವ್ ಕಿರಿಯ ಸೊಸೆ ಅಪರ್ಣಾ ಯಾದವ್ ಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ನಂಬಲರ್ಹ ಮೂಲಗಳು ಹೇಳಿವೆ.
ಅಪರ್ಣಾ ಸಿಂಗ್ ಯಾದವ್ ಅವರು ಮುಲಾಯಂ ಸಿಂಗ್ ಅವರ ಕಿರಿಯ ಪುತ್ರ ಪ್ರತೀಕ್ ಯಾದವ್ ಅವರ ಪತ್ನಿ. 2017ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ, ಬಿಜೆಪಿಯ ರೀಟಾ ಬಹುಗುಣ ಜೋಶಿ ಎದುರು ಪರಾಭವಗೊಂಡಿದ್ದರು. ನಂತರದ ದಿನಗಳಲ್ಲಿ ಸಮಾಜವಾದಿ ಪಕ್ಷದಲ್ಲಿದ್ದರೂ ಎನ್ ಡಿ ಎ ಸರ್ಕಾರದ ಕ್ರಮಗಳನ್ನು ಶ್ಲಾಘಿಸುತ್ತಿದ್ದರು. ಈಗ ಅಪರ್ಣಾ ಯಾದವ್ ಬಿಜೆಪಿ ಸೇರುವ ಸಾಧ್ಯತೆಯ ಬಗ್ಗೆ ಮೂಲಗಳು ಹೇಳಿವೆ.
ಸಮಾಜವಾದಿ ಪಕ್ಷದಿಂದ ಈಗಾಗಲೇ ಹಲವಾರು ಮಂದಿ ಪಕ್ಷಾಂತರ ಮಾಡಿದ್ದು, ಈ ಮಧ್ಯೆ ಅಪರ್ಣಾ ಯಾದವ್ ಬಿಜೆಪಿಗೆ ಸೇರಿದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಮೇಲೆ ಪರಿಣಾಮ ಉಂಟಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ
ಇತ್ತೀಚೆಗೆ, ಯೋಗಿ ಸಂಪುಟದಲ್ಲಿ ಸಚಿವರಾಗಿದ್ದ ಸ್ವಾಮಿ ಪ್ರಸಾದ್ ಮೌರ್ಯ, ಧರಂ ಸಿಂಗ್ ಸೈನಿ ಇತರ ಶಾಸಕರು.. ಬೆಂಬಲಿಗರೊಂದಿಗೆ ಸಮಾಜವಾದಿ ಪಕ್ಷ ಸೇರ್ಪಡೆಗೊಂಡಿದ್ದರು.

Continue Reading
Advertisement
ಕರ್ನಾಟಕ15 mins ago

ಬೆಂಗಳೂರಲ್ಲಿ ಆತಂಕ ಹೆಚ್ಚಿಸಿದ ಒಮೈಕ್ರಾನ್!

ಬೆಂಗಳೂರು: ಜನೆವರಿ 17 (ಯು.ಎನ್.ಐ) ರಾಜಧಾನಿ ಬೆಂಗಳೂರಲ್ಲಿ ಒಂದೇ ದಿನ ಬರೋಬ್ಬರಿ 287 ಒಮೈಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯ ಸರ್ಕಾರ ತೀವ್ರ ನಿಗಾದ ಮಧ್ಯೆಯೇ ಒಮೈಕ್ರಾನ್ ಪ್ರಕರಣಗಳು...

ದೇಶ28 mins ago

ಪಂಜಾಬ್ ಚುನಾವಣಾ ದಿನಾಂಕ ಮುಂದೂಡಿಕೆ

ಚಂಡೀಗಢ: ಜನೆವರಿ 17 (ಯು.ಎನ್.ಐ.) ಪಂಜಾಬ್‌ನಲ್ಲಿ ಫೆಬ್ರವರಿ 20ರಂದು ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಇಂದು ತಿಳಿಸಿದೆ. ಗುರು ರವಿದಾಸ್ ಜಯಂತಿ ಆಚರಣೆಗೆ ಅನುಕೂಲ...

ದೇಶ30 mins ago

ದೇಶವನ್ನು ಕೊರೋನಾ ಮುಕ್ತಗೊಳಿಸಲು ಪಣ ತೊಡೋಣ; ಕೇಜ್ರಿವಾಲ್

ನವದೆಹಲಿ: ಜನೆವರಿ 17 (ಯು.ಎನ್.ಐ.) ಸಾಂಕ್ರಾಮಿಕ ರೋಗವಾದ ಕೋವಿಡ್ -೧೯ ಪರಿಸ್ಥಿತಿಯನ್ನು ಆಪಾದನೆ ಮಾಡುತ್ತಾ ಕುಳಿತುಕೊಂಡರೆ ಯಾವುದೇ ಪ್ರಯೋಜನವಿಲ್ಲ. ಇಡೀ ದೇಶದಿಂದ ತೊಡೆದುಹಾಕು ಪಣ ತೊಡಬೇಕು ಎಂದು...

ಸಿನೆಮಾ47 mins ago

ಹಿಂದಿಯಲ್ಲಿ ತೆರೆ ಕಾಣುತ್ತಿದೆ ಅಲ್ಲು ಅರ್ಜುನ್‌ ಅಭಿನಯದ ‘ಅಲಾ ವೈಕುಂಠಪುರಮುಲು’

ಹೈದರಾಬಾದ್: ಜನೆವರಿ 17 (ಯು.ಎನ್.ಐ.) ಇದೀಗ ಟಾಲಿವುಡ್ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಪುಷ್ಪ ದಿ ರೈಸ್ ಸಿನಿಮಾದ ಯಶಸ್ಸಿನಲ್ಲಿದ್ದಾರೆ. ಮತ್ತೊಂದು ಸಂತೋಷದ ವಿಚಾರವೆಂದರೆ ಅಲ್ಲು ಅರ್ಜುನ್‌...

ದೇಶ1 hour ago

ಮೂವರು ಪಿಎಲ್ ಎಫ್ ಐ ಸಂಘಟನೆ ನಕ್ಸಲರ ಬಂಧನ

ಖುಂಟಿ: ಜನೆವರಿ 17 (ಯು.ಎನ್.ಐ.) ನಿಷೇಧಿತ ಪೀಪಲ್ಸ್ ಲಿಬರೇಶನ್ ಫ್ರಂಟ್ ಆಫ್ ಇಂಡಿಯಾ (ಪಿಎಲ್ ಎಫ್‌ಐ) ಸಂಘಟನೆಗೆ ಸೇರಿದ 14 ವರ್ಷದ ಅಪ್ರಾಪ್ತ ಸೇರಿದಂತೆ ಮೂವರು ಮೂವರು...

ದೇಶ1 hour ago

ಪದ್ಮಶ್ರೀ ಪುರಸ್ಕೃತೆ, ಸಾಮಾಜಿಕ ಕಾರ್ಯಕರ್ತೆ ಶಾಂತಿ ದೇವಿ ನಿಧನ: ಮೋದಿ ಸಂತಾಪ

ರಾಯಗಡ: ಜನೆವರಿ ೧೭ (ಯು.ಎನ್.ಐ.) ಪದ್ಮಶ್ರೀ ಪುರಸ್ಕೃತೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಶಾಂತಿ ದೇವಿ ಭಾನುವಾರ ರಾತ್ರಿ ಒಡಿಶಾದ ರಾಯಗಡ ಜಿಲ್ಲೆಯ ಗುಣಪುರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ....

ಕರ್ನಾಟಕ1 hour ago

ಪಿಎಂಎಫ್ಎಂಇ ಯೋಜನೆಗೆ ಶೇ.15 ರಷ್ಟು ರಾಜ್ಯದಿಂದ ಹೆಚ್ಚುವರಿ ಸಹಾಯಧನ

ಬೆಂಗಳೂರು: ಜನೆವರಿ 17 (ಯು.ಎನ್.ಐ.)ರೈತರಿಗೆ ಬಲತುಂಬಲು ರಾಜ್ಯ ಸರ್ಕಾರ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ (ಪಿಎಂಎಫ್ಎಂಇ) ಯೋಜನೆಗೆ ಸಹಾಯಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. ಪಿಎಂಎಫ್ಎಂಇ ಯೋಜನೆಗೆ...

ಬೆಂಗಳೂರು2 hours ago

ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಗೆ ಕೋವಿಡ್

ಬೆಂಗಳೂರು, ಜ ೧೭(ಯುಎನ್ ಐ) ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕಳೆದ ನಾಲ್ಕೈದು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆಆರ್ ಟಿ...

ದೇಶ2 hours ago

ಉಪಯುಕ್ತ ಮಾಹಿತಿ ; 5 ಸಾವಿರ ಅಲ್ಲ, ಕೇವಲ ₹260 ರಲ್ಲಿ ಒಮೈಕ್ರಾನ್ ಪತ್ತೆ ಹಚ್ಚಿ!

ಬೆಂಗಳೂರು : ಜನೆವರಿ 17 (ಯು.ಎನ್.ಐ.) ಪ್ರತಿ ದಿನ ಒಮೈಕ್ರಾನ್ ಸೋಂಕು ದೇಶದಲ್ಲಿ ವೇಗವಾಗಿ ಹರಡಲಾರಂಭಿಸಿದೆ. ಕೊರೊನಾ ರೂಪಾಂತರಗಳಿಗಿಂತ ಒಮೈಕ್ರಾನ್ ಹೆಚ್ಚು ಸಾಂಕ್ರಾಮಿಕವಾಗಿದ್ದು, ಜೀನೋಮ್ ಸೀಕ್ವೆನ್ಸಿಂಗ್ ಟೆಸ್ಟ್‌ನೊಂದಿಗೆ...

ದೇಶ2 hours ago

ಐಐಟಿ ಬಾಂಬೆಯ ವಿದ್ಯಾರ್ಥಿ ಆತ್ಮಹತ್ಯೆ

ಮುಂಬೈ: ಜನೆವರಿ 17  (ಯು.ಎನ್.ಐ.) ಐಐಟಿ ಬಾಂಬೆಯ ವಿದ್ಯಾರ್ಥಿ ಸೋಮವಾರ ಮುಂಜಾನೆ ಇಲ್ಲಿನ ಪೊವೈ ಕ್ಯಾಂಪಸ್ ನಲ್ಲಿರುವ ತನ್ನ ಹಾಸ್ಟೆಲಿನ ಟೆರೇಸ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ...

ಟ್ರೆಂಡಿಂಗ್

Share