Connect with us


      




ಕರ್ನಾಟಕ

ಆಸಿಡ್ ಪ್ರಕರಣ: ಆರೋಪಿ ಬಂಧಿಸಿದ ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ ಅರಗ ಜ್ಞಾನೇಂದ್ರ

Vanitha Jain

Published

on

ಬೆಂಗಳೂರು: ಮೇ 14 (ಯು.ಎನ್.ಐ.) ಯುವತಿಯ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದ ನಾಗೇಶ್ ಎಂಬ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಗೃಹ ಸಚಿವ ಅರಗ ಜ್ಞಾನೇಂದ್ರ ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಯುವತಿಯ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದ ಕಿರಾತಕ ನಾಗೇಶ್ ಎಂಬ ಆರೋಪಿಯನ್ನು ಪೊಲೀಸರು, ಅತ್ಯಂತ ಶ್ರಮ ಹಾಗೂ ದಕ್ಷತೆಯಿಂದ ನೆರೆಯ ತಮಿಳುನಾಡು ರಾಜ್ಯದಲ್ಲಿ ಅಡಗಿದ್ದವನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಿ ಹೆಡೆಮುರಿ ಕಟ್ಟುವುದರ ಮೂಲಕ ಪೊಲೀಸರು, ದೇಶದಲ್ಲಿಯೇ, ಅತ್ಯಂತ ದಕ್ಷತೆಯ ಹಾಗೂ ವೃತ್ತಿಪರ ಪಡೆಯೆಂದು, ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.

ತಮಿಳುನಾಡು ಪೊಲೀಸರೂ, ಹೀನ ಕೃತ್ಯ ನಡೆಸಿದ ಅಪರಾಧಿಯನ್ನು ಬಂಧಿಸುವ ಕಾರ್ಯದಲ್ಲಿ ನಮ್ಮ ಪೊಲೀಸರಿಗೆ ನೆರವಾಗಿರುವ ಕಾರಣ ಅವರಿಗೂ ಅಭಿನಂದನೆ ಸಲ್ಲಿಸಿದ್ದಾರೆ. ಅಪರಾಧಿಗೆ ಉಗ್ರ ಶಿಕ್ಷೆಯಾಗುವಂತೆ, ಅಪರಾಧಿಯನ್ನು, ಫಾಸ್ಟ್ ಟ್ರ್ಯಾಕ್ ನ್ಯಾಯಾಲಯದಲ್ಲಿ ಆರೋಪಿಯ ವಿಚಾರಣೆ ನಡೆಸಿ ಎಲ್ಲಾ ರೀತಿಯ ಕಾನೂನು ಕ್ರಮ ಜರುಗಿಸಲಾಗುತ್ತದೆ ಆರೋಪಿಗೆ ತಕ್ಕ ಶಿಕ್ಷೆ ಆಗುವ ಮೂಲಕ ಸಂತ್ರಸ್ತ ಮಹಿಳೆಗೆ ಹಾಗೂ ಕುಟುಂಬ ವರ್ಗಕ್ಕೆ ಸ್ವಲ್ಪವಾದರೂ ನೆಮ್ಮದಿ ದೊರಕಿದಂತಾಗುವುದು ಎಂದು ಹೇಳಿದರು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ಸಂತ್ರಸ್ತ ಮಹಿಳೆ, ಚೇತರಿಸಿಕೊಳ್ಳುತ್ತಿದ್ದು, ಶೀಘ್ರ ಗುಣಮುಖವಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

Share