Published
1 month agoon
By
Vanitha Jainದಿಸ್ಪುರ್: ಮೇ 17 (ಯು.ಎನ್.ಐ.) ಅಸ್ಸಾಂನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಮಳೆಯ ಅಬ್ಬರಕ್ಕೆ ಪ್ರಮುಖ ಸೇತುವೆ ನೀರುಪಾಲಾಗಿದೆ. ರಸ್ತೆ ಮತ್ತು ರೈಲು ಸಂಪರ್ಕಗಳು ಕಡಿತಗೊಂಡು ರಾಜ್ಯದ 20 ಜಿಲ್ಲೆಗಳಲ್ಲಿ ಸುಮಾರು 2 ಲಕ್ಷ ಜನರು ಪ್ರವಾಹದಿಂದ ಪ್ರತಿಕೂಲ ಪರಿಣಾಮ ಎದುರಿಸುತ್ತಿದ್ದಾರೆ.
ಹಾಫ್ಲಾಂಗ್ ಕಂದಾಯ ವಲಯದಲ್ಲಿನ ನಿರಂತರ ಪ್ರವಾಹದಿಂದ ಉಂಟಾದ ಭೂ ಕುಸಿತವು ಮೂರು ಜೀವಗಳನ್ನು ಬಲಿ ತೆಗೆದುಕೊಂಡಿತು. ಇನ್ನು ಕ್ಯಾಚಾರ್ ಜಿಲ್ಲೆಯಲ್ಲಿ ಎರಡು ಪ್ರವಾಹ ಸಂಬಂಧಿ ಸಾವುಗಳು ವರದಿಯಾಗಿವೆ. ಒಟ್ಟಾರೆ, ಸುಮಾರು 1,97,248 ಜನರು ಪ್ರವಾಹ ಮತ್ತು ಭೂಕುಸಿತದಿಂದ ಪ್ರತಿಕೂಲ ಪರಿಣಾಮ ಎದುರಿಸುತ್ತಿದ್ದಾರೆ. ಕ್ಯಾಚಾರ್ ಮತ್ತು ಹೊಜೈ ಜಿಲ್ಲೆಗಳು ಹೆಚ್ಚು ಹಾನಿಗೊಳಗಾಗಿವೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.
ಮುಂದಿನ ಮೂರು ದಿನಗಳಲ್ಲಿ ಅಸ್ಸಾಂನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಕಚೇರಿ ಮುನ್ಸೂಚನೆ ನೀಡಿದೆ. ಕಳೆದ 24 ಗಂಟೆಗಳಲ್ಲಿ ವಿವಿಧ ಜಿಲ್ಲೆಗಳಲ್ಲಿ 16 ಕಡೆ ಒಡ್ಡುಗಳು ಒಡೆದಿವೆ. ಹಲವಾರು ಪ್ರದೇಶಗಳಲ್ಲಿ ರಸ್ತೆಗಳು, ಸೇತುವೆಗಳು ಮತ್ತು ಮನೆಗಳು ಪೂರ್ಣಗೊಂಡಿವೆ ಅಥವಾ ಭಾಗಶಃ ಹಾನಿಗೊಳಗಾಗಿವೆ.
ಆಭರಣ ಅಂಗಡಿಗೆ ನುಗ್ಗಿ ದರೋಡೆ, ಮಾಲೀಕನಿಗೆ ಗುಂಡೇಟು; ಸಿಸಿಕ್ಯಾಮೆರಾದಲ್ಲಿ ಕೃತ್ಯ ಸೆರೆ
ಸಿಧು ಮೂಸೆವಾಲಾರ ಕೊನೆಯ ಹಾಡನ್ನ ಯೂಟ್ಯೂಬ್ ನಿಂದ ತೆಗೆದುಹಾಕಿರೋದೇಕೆ?
ಹಕ್ಕುಗಳನ್ನು ರಕ್ಷಿಸುವುದು ಅಪರಾಧವಲ್ಲ; ತೀಸ್ತಾ ಸೆತಲ್ವಾಡ್ ಪರ ವಿಶ್ವಸಂಸ್ಥೆ ಅಧಿಕಾರಿ ದನಿ
“ರಾಷ್ಟ್ರೀಯ ಭದ್ರತೆಗೆ ಡ್ರಗ್ಸ್ ದೊಡ್ಡ ಸವಾಲು” : ಷಾ
ಸಿಎಂ ಭೇಟಿಯಾಗಲು ಪ್ರವಾಹದ ನೀರಲ್ಲಿ ಪರದಾಡಿದ ಅಸ್ಸಾಂ ಯುವಕ
ಸಿಎಂ ಯೋಗಿ ಆದಿತ್ಯನಾಥ್ ಪ್ರಯಾಣಿಸ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ