Published
5 months agoon
ಸುವರ್ಣಸೌಧ ಬೆಳಗಾವಿ, ಡಿಸೆಂಬರ್ 13, (ಯು.ಎನ್.ಐ) ವಿಧಾನಸಭೆಯ ಮೊದಲ ದಿನದ ಕಲಾಪದಲ್ಲಿ ಆರಂಭದಲ್ಲಿ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಮಾಜಿ ರಾಜ್ಯಪಾಲರಾಗಿದ್ದ ಕೋಣಿಜೇತಿ ರೋಸಯ್ಯ, ಮಾಜಿ ಸಂಸದರ ವಿರುಪಾಕ್ಷಪ್ಪ ಸಂಗಣ್ಣ ಅಗಡಿ, ಮಾಜಿ ಸಚಿವ ಎಸ್.ಆರ್.ಮೋರೆ, ಕನ್ನಡ ಚಲನಚಿತ್ರ ರಂಗದ ಯುವ ನಟ ಪುನೀತ್ ರಾಜ್ ಕುಮಾರ್, ಸ್ವಾತಂತ್ರ್ಯ ಹೋರಾಟಗಾರ ಪಿ.ಭೋಜರಾಜ ಹೆಗ್ಡೆ, ಹಿರಿಯ ವಿದ್ವಾಂಸ ಕೆ.ಎಸ್.ನಾರಾಯಣಾಚಾರ್ಯ, ಹಿರಿಯ ಬಯಲಾಟ ಕಲಾವಿದೆ ನಾಡೋಜ ಹರಿಜನ ಪದ್ಮಮ್ಮ, ಕನ್ನಡ ಚಿತ್ರರಂಗದ ಹಿರಿಯ ನಟರಾದ ಶಿವರಾಂ ಹಾಗೂ ಭಾರತ ಸೇನಾಪಡೆಯ ಸಶಸ್ತ್ರ ಪಡೆಯ ಮುಖ್ಯಸ್ಥರಾದ ಬಿಪಿನ್ ಲಕ್ಷ್ಮಣ್ ಸಿಂಗ್ ರಾವತ್ ಅವರುಗಳಿಗೆ ಸಂತಾಪ ಸೂಚಿಸಲಾಯಿತು.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಸಚಿವ ಈಶ್ವರಪ್ಪ ಹಾಗೂ ಯಡಿಯೂರಪ್ಪ ಸೇರಿದಂತೆ ಅನೇಕ ನಾಯಕರು ಸದನದಲ್ಲಿ ಮೃತರ ಕೊಡುಗೆಗಳನ್ನು ಸ್ಮರಿಸಿದರು.
ಮೃತರ ಗೌರವಾರ್ಥ ಮಾನ್ಯ ಸದಸ್ಯರುಗಳು ಎದ್ದು ನಿಂತು ಒಂದು ನಿಮಿಷ ಮೌನವನ್ನು ಆಚರಿಸಿದರು. ಅಲ್ಲದೆ, ಸದನದಲ್ಲಿ ಪ್ರಸ್ತಾಪಿಸಿದ ಸಂತಾಪ ಸೂಚನೆ ನಿರ್ಣಯವನ್ನು ಮೃತ ಗಣ್ಯರ ಕುಟುಂಬದವರಿಗೆ ಕಳುಹಿಸಲಾಗುವುದು ಎಂದು ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಬಳಿಕ, ಮಧ್ಯಾಹ್ನ 3 ಗಂಟೆಗೆ ವಿಧಾನಸಭೆ ಕಲಾಪವನ್ನು ಮುಂದೂಡಲಾಯಿತು.
ಬಿಡಿಎ ಬಡಾವಣೆ ಮನೆಗಳ ಸಕ್ರಮಕ್ಕೆ ನಿರ್ಧಾರ: ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್
ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಪ್ರತಾಪ್ ರೆಡ್ಡಿ ನೇಮಕ
ಡೆಂಘೀ ಪ್ರಕರಣಗಳು ಹೆಚ್ಚಾಗದಂತೆ ಮುಂಜಾಗ್ರತಾ ಕ್ರಮಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ
ಶಾಲಾ ಮಕ್ಕಳೊಂದಿಗೆ ಸಿಎಂ ಸಂವಾದ; ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಿದ ಬೊಮ್ಮಾಯಿ
ಎಂಬಿಎ ಪದವೀಧರೆಯಾಗಿದ್ರೂ ಕೆಲಸ ಸಿಗದೆ ಉಡುಪಿಯ ಸಹನಾ ಸಾವು; ಡಿಕೆಶಿ ಸಂತಾಪ
ರಾಷ್ಟ್ರಗೀತೆ ಹಾಡೋದನ್ನು ಮುತಾಲಿಕ್ ಹೇಳಿ ಕೊಡಬೇಕಾ? – ಜಮೀರ್