Connect with us


      
ರಾಜಕೀಯ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ: ಏಕಾಂಗಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ ಆಜಾದ್ ಸಮಾಜ ಪಕ್ಷ

Vanitha Jain

Published

on

ಲಕ್ನೋ: ಜನೆವರಿ 18 (ಯು.ಎನ್.ಐ.) ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಆಜಾದ್ ಸಮಾಜ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಆಜಾದ್ ಸಮಾಜ ಪಕ್ಷದ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಹೇಳಿದ್ದಾರೆ.

ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಚಂದ್ರಶೇಖರ್ ಆಜಾದ್, “ನಾವು ಯುಪಿಯಲ್ಲಿ ಇತರ ರಾಜಕೀಯ ಪಕ್ಷಗಳಿಗೆ ಪರ್ಯಾಯವಾಗಿದ್ದೇವೆ. ನಾನು ಶಾಸಕ ಮತ್ತು ಸಚಿವನಾಗುವ ಪ್ರಸ್ತಾಪವನ್ನು ತಿರಸ್ಕರಿಸಿದ್ದೇನೆ” ಎಂದು ಹೇಳಿದರು.

ಎಸ್‌ಪಿ ನಮಗೆ 100 ಸೀಟು ನೀಡಿದರೂ ನಾನು ಅವರೊಂದಿಗೆ ಮೈತ್ರಿ ಮಾಡಿಕೊಳ್ಳಲು ಹೋಗುವುದಿಲ್ಲ, ಚುನಾವಣೆ ನಂತರ ಬಿಜೆಪಿಯನ್ನು ಸೋಲಿಸಲು ನಾವು ಇತರ ಪಕ್ಷಗಳಿಗೆ ಸಹಾಯ ಮಾಡುತ್ತೇವೆ. ನಾನು ಕೂಡ ಮಾಯಾವತಿ ಜತೆ ಮೈತ್ರಿಗೆ ಯತ್ನಿಸಿದ್ದೆ, ಆದರೆ ಯಾರೂ ನನ್ನನ್ನು ಸಂಪರ್ಕಿಸಿಲ್ಲ ಎಂದು ಹೇಳಿದರು.

ನಾನು ವೈಯಕ್ತಿಕ ಸಂತೋಷದ ಬಗ್ಗೆ ಎಂದಿಗೂ ತಲೆಕೆಡಿಸಿಕೊಂಡಿಲ್ಲ. ಕಳೆದ ಐದು ವರ್ಷಗಳಲ್ಲಿ ನಾನು ಬಹಳಷ್ಟು ಕಳೆದುಕೊಂಡಿದ್ದೇನೆ. ಹತ್ರಾಸ್, ಪ್ರಯಾಗ್ರಾಜ್ ಮತ್ತು ಉನ್ನಾವೋದಂತಹ ಪ್ರತಿಭಟನೆಯ ಘಟನೆಗಳಿಗಾಗಿ ನಾನು ಜೈಲಿಗೆ ಹೋಗಿದ್ದೆ. ಪ್ರತಿಪಕ್ಷಗಳ ವಿಭಜನೆಯಿಂದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಎಲ್ಲರಿಗೂ ನಷ್ಟ. ಭೀಮ್ ಆರ್ಮಿಯ ಕಾರ್ಯಕರ್ತರು ನಮ್ಮ ಶಕ್ತಿ ಎಂದು ಹೇಳಿದರು.

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷವಾದ ಆಜಾದ್ ಸಮಾಜ ಪಕ್ಷ ಮತ್ತು ಸಮಾಜವಾದಿ ಪಕ್ಷ (ಎಸ್‌ಪಿ) ನಡುವೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಜನವರಿ 15 ರಂದು ತಳ್ಳಿಹಾಕಿದರು.

Share