Connect with us


      
ಜಾನಪದ

ಕಲಾವಿದ ಬಸವಲಿಂಗಯ್ಯ ಹಿರೇಮಠ ನಿಧನ; ಸಿಎಂ ಕಂಬನಿ

Kumara Raitha

Published

on

ಬೆಂಗಳೂರು: ಜನೆವರಿ 09 (ಯು.ಎನ್.ಐ.)  ಹಿರಿಯ ಜಾನಪದ ಕಲಾವಿದ, ಗಾಯಕ ಬಸಲಿಂಗಯ್ಯ ಹಿರೇಮಠ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಬಸಲಿಂಗಯ್ಯ ಹಿರೇಮಠ ಅವರು ಕರ್ನಾಟಕದಲ್ಲಿ ಜಾನಪದ ಕಲೆಯನ್ನು ವಿಶೇಷವಾಗಿ ಉತ್ತರ ಕರ್ನಾಟಕ ಶೈಲಿಯ ಜಾನಪದ ಗೀತೆ ಹಾಗೂ ಸಂಗೀತವನ್ನು ಜೀವಂತವಿರಿಸುವ ಪ್ರಯತ್ನವನ್ನು ನಿರಂತರವಾಗಿ ಮಾಡುತಿದ್ದರು. ಅವರ ನಿಧನದಿಂದ ಕನ್ನಡ ಸಾರಸ್ವತ ಹಾಗೂ ಜಾನಪದ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ನಿಧನದ ಆಘಾತವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದ ಸದಸ್ಯರಿಗೆ ಆ ಭಗವಂತ ನೀಡಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.

Continue Reading
Share