Connect with us


      
ಕರ್ನಾಟಕ

ತಮಿಳುನಾಡಿಗೆ ಸೆಡ್ಡು ಹೊಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Iranna Anchatageri

Published

on

ಬೆಂಗಳೂರು: ಮಾರ್ಚ್ 22 (ಯು.ಎನ್.ಐ.) ಮೇಕೆದಾಟು ಯೋಜನೆಯನ್ನು ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಜಾರಿಯಾಗದಂತೆ ತಮಿಳುನಾಡು ಸರಕಾರ ನಿರ್ಣಯ ಕೈಗೊಂಡಿದೆ. ಇದಕ್ಕೆ ಸೆಡ್ಡು ಹೊಡೆದಿರುವ ರಾಜ್ಯ ಸರಕಾರ, ಮೇಕೆದಾಟು ಯೋಜನೆ ಅನುಷ್ಠಾನಕ್ಕೆ  ಕ್ರಮಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ತಮಿಳುನಾಡಿಗೆ ಕಾವೇರಿ ಒಂದು ರಾಜಕೀಯ ದಾಳ. ಸ್ವಾತಂತ್ರ್ಯ ದೊರೆತಾಗಿನಿಂದ ಕಾವೇರಿ ಹೆಸರಿನಲ್ಲಿಯೇ ಅವರು ರಾಜಕಾರಣ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಕಾವೇರಿ ಜಲವಿವಾದ ನ್ಯಾಯಮಂಡಲಿ ತೀರ್ಪು ನೀಡಿ ನೀರಿನ ಹಂಚಿಕೆಯಾಗಿದೆ. ನೀರನ್ನು ನೀಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇದೆ. ನಮ್ಮ ರಾಜ್ಯದಲ್ಲಿ ಹುಟ್ಟಿರುವ ಕಾವೇರಿ, ಇಲ್ಲಿ ಬಿದ್ದ ಮಳೆಯ ಆಧಾರದ ಮೇಲೆ ನಾವು ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆಯನ್ನು ರೂಪಿಸಲಾಗಿದೆ. ಇಷ್ಟೆಲ್ಲಾ ಇದ್ದರೂ ತಮಿಳುನಾಡು ತಕರಾರು ಮಾಡುತ್ತಿದ್ದಾರೆ. ವಿವಿಧ ಅರ್ಜಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಲಿ ನಮ್ಮ ಪರವಾಗಿ ಆದೇಶ ನೀಡಿದ್ದಾರೆ. ಆದರೆ ತಮಿಳುನಾಡು ವಿರುದ್ಧ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದಾರೆ. ಸರ್ವ ಪಕ್ಷ ಸಭೆ ನಡೆಸಿ ಒಗ್ಗಟ್ಟಿನಿಂದ ಇದನ್ನು ಎದುರಿಸಲು ತೀರ್ಮಾನ ಮಾಡಿದ ಹಿನ್ನೆಲೆಯಲ್ಲಿ ಈ ನಿರ್ಣಯ ಮಾಡಿದ್ದಾರೆ. ಇದಕ್ಕೆ ಕಾನೂನಿನ ಪ್ರಕಾರ ಯಾವುದೇ ಬೆಲೆ ಇಲ್ಲ.. ಈ ರೀತಿಯ ಹತ್ತು ಹಲವಾರು ನಿರ್ಣಯಗಳಾಗಿವೆ. ಇದು ರಾಜಕೀಯ ತಂತ್ರವಷ್ಟೇ ಎಂದರು.

ಸರ್ವ ಪಕ್ಷ ಸಭೆಯಲ್ಲಿ ನಿರ್ಣಯಿಸಿದಂತೆ ಡಿಪಿಆರ್ ಪಡೆದು ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆದು ಯೋಜನೆ ಅನುಷ್ಠಾನಕ್ಕೆ ಎಲ್ಲ ಕ್ರಮವನ್ನು ಸರ್ಕಾರ ತೆಗೆದುಗೊಳ್ಳಲಿದೆ ಎಂದರು.

Share