Connect with us


      
ಕ್ರೀಡೆ

ಪಾಕ್‌ ವಿರುದ್ಧ ಮೊದಲ ಪಂದ್ಯ.. ಭಾರತ ತಂಡ ಪ್ರಕಟಿಸಿದ ಬಿಸಿಸಿಐ

UNI Kannada

Published

on

ಮುಂಬೈ, ಜ 6(ಯುಎನ್‌ ಐ) ವೆಸ್ಟ್ ಇಂಡೀಸ್‌ನಲ್ಲಿ ನಡೆಯಲಿರುವ 2022 ರ ಮಹಿಳಾ ಏಕದಿನ ವಿಶ್ವಕಪ್‌ಗೆ 16 ಸದಸ್ಯರ ಭಾರತೀಯ ತಂಡವನ್ನು ಬಿಸಿಸಿಐ ಗುರುವಾರ ಪ್ರಕಟಿಸಿದೆ. ಮಿಥಾಲಿ ರಾಜ್ ತಂಡವನ್ನು ಮುನ್ನಡೆಸಲಿದ್ದಾರೆ. ಹರ್ಮನ್‌ಪ್ರೀತ್ ಕೌರ್ ಉಪ ನಾಯಕಿಯಾಗಿ ಆಯ್ಕೆಯಾಗಿದ್ದು, ತಾನಿಯಾ ಭಾಟಿಯಾ, ರಿಚಾ ಘೋಷ್ ವಿಕೆಟ್ ಕೀಪರ್‌ಗಳ ಪಟ್ಟಿಯಲ್ಲಿದ್ದಾರೆ.

ಇನ್ನೂ ಮೆಗಾ ಟೂರ್ನಮೆಂಟ್ ಮಾರ್ಚ್ 4 ರಂದು ಬೇ ಓವಲ್‌ನಲ್ಲಿ ಪ್ರಾರಂಭವಾಗಲಿದೆ. ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್, ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಲಿದೆ. ಮಾರ್ಚ್ 4 ರಂದು ಭಾರತ ತನ್ನ ಮೊದಲ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಭಾರತ ಈ ಬಾರಿ ಪ್ರಶಸ್ತಿ ಸುತ್ತಿನ ಹಾಟ್ ಫೇವರಿಟ್ ಎನಿಸಿಕೊಂಡಿದೆ.

ಭಾರತ ತಂಡ: ಮಿಥಾಲಿ ರಾಜ್ (ನಾಯಕಿ), ಹರ್ಮನ್‌ಪ್ರೀತ್ ಕೌರ್ (ಉಪನಾಯಕಿ), ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಯಾಸ್ತಿಕಾ, ದೀಪ್ತಿ, ರಿಚಾ ಘೋಷ್ (ವಿಕೆಟ್ ಕೀಪರ್), ಸ್ನೇಹಾ ರಾಣಾ, ಜೂಲನ್, ಪೂಜಾ, ಮೇಘನಾ ಸಿಂಗ್, ರೇಣುಕಾ ಸಿಂಗ್ ಠಾಕೂರ್, ತಾನಿಯಾ (ವಿಕೆರ್‌ ಕೀಪರ್), ರಾಜೇಶ್ವರಿ, ಪೂನಂ

Share