Connect with us


      
ಕರ್ನಾಟಕ

30 ಕೋಟಿ ರೂ. ಮೌಲ್ಯದ ಬಿಡಿಎ ಸ್ವತ್ತು ವಶ

Kumara Raitha

Published

on

ಮುಂದುವರಿದ ಒತ್ತುವರಿ ಜಾಗ ತೆರವು ಕಾರ್ಯಾಚರಣೆ

ಬೆಂಗಳೂರು: ಜನೆವರಿ 05 (ಯು.ಎನ್.ಐ.) ಪ್ರತಿಷ್ಠಿತ ಆರ್‍ಎಂವಿ 2ನೇ ಹಂತದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ ಶೆಡ್‍ಗಳನ್ನು ತೆರವುಗೊಳಿಸಿ ಸುಮಾರು 30 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ.
ನಾಗಶೆಟ್ಟಿಹಳ್ಳಿಯ ಆರ್‍ಎಂವಿ 2ನೇ ಹಂತದಲ್ಲಿರುವ ಸರ್ವೆ ನಂಬರ್ 71/3 ರಲ್ಲಿನ 32 ಗುಂಟೆ ಜಾಗ ಬಿಡಿಎಗೆ ಸೇರಿತ್ತು. ಆದರೆ, ಈ ಜಾಗದಲ್ಲಿ ಎನ್‍ಟಿಐ ಸೊಸೈಟಿ ಅನಧಿಕೃತವಾಗಿ ತಾತ್ಕಾಲಿಕ ಶೆಡ್‍ಗಳನ್ನು ನಿರ್ಮಾಣ ಮಾಡಿತ್ತು.
ಈ ಬಗ್ಗೆ ಹಲವು ಬಾರಿ ಸೂಚನೆ ನೀಡಿದ್ದರೂ ಜಾಗ ತೆರವುಗೊಳಿಸಿರಲಿಲ್ಲ. ಬುಧವಾರ ಬೆಳಗ್ಗೆ ಬಿಡಿಎ ಕಾರ್ಯಪಾಲಕ ಎಂಜಿನಿಯರ್ ಕುಮಾರ್, ಪೆÇಲೀಸ್ ಅಧಿಕಾರಿಗಳಾದ ಭಾಸ್ಕರ್ ಮತ್ತು ರವಿಕುಮಾರ್ ನೇತೃತ್ವದಲ್ಲಿ ಬಿಡಿಎ ಸಿಬ್ಬಂದಿ ಶೆಡ್‍ಗಳನ್ನು ನೆಲಸಮ ಮಾಡಿ ಜಾಗ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಜಾಗದ ಪ್ರಸ್ತುತ ಮಾರುಕಟ್ಟೆ ಮೌಲ್ಯ ಸುಮಾರು 30 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಇದೀಗ ಜಾಗದ ಸುತ್ತ ಕಾಂಪೌಂಡ್ ನಿರ್ಮಿಸಿ ಬಿಡಿಎ ಸ್ವತ್ತು ಎಂದು ಸೂಚನಾ ಫಲಕ ಹಾಕಲಾಗಿದೆ.

Share