Published
5 months agoon
ಬೆಳಗಾವಿ ವಿಮಾನ ನಿಲ್ದಾಣ, ಡಿಸೆಂಬರ್ 13 (ಯು.ಎನ್.ಐ) ಮತಾಂತರ ನಿಷೇಧ ಕಾಯಿದೆಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ ಸದನದಲ್ಲಿ ಮಂಡಿಸುತ್ತೇವೆ ಅಂತಾ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಕಾಯಿದೆಗಳ ಪರಿಶೀಲನಾ ಸಮಿತಿ ಮುಂದೆ ಯಾವ ಯಾವ ಕಾಯಿದೆಗಳು ಬರುತ್ತವೆಯೋ ನೋಡಿ ನಂತರ ಅದನ್ನು ಸದನದಲ್ಲಿ ಮಂಡಿಸುವ ಬಗ್ಗೆ ತೀರ್ಮಾನ ಮಾಡ್ತೇವೆ ಎಂದು ಪರೋಕ್ಷವಾಗಿ ಲವ್ ಜಿಹಾದ್ ಕಾಯಿದೆ ಜಾರಿಗೆ ತರುವ ಬಗ್ಗೆ ಸಿಎಂ ಬೊಮ್ಮಾಯಿ ಸುಳಿವು ನೀಡಿದ್ದಾರೆ.
ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ಹಾಗೂ ಈ ಭಾಗಕ್ಕೆ ಯೋಜನೆಗಳನ್ನು ತರಲು ಸರ್ಕಾರ ಸಿದ್ಧವಾಗಿದೆ. ಉತ್ತರ ಕರ್ನಾಟಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಸದನದಲ್ಲಿ ಕೆಲ ನಿರ್ಣಯ ತೆಗೆದು ಕೊಳ್ಳುತ್ತೇವೆ. ಈ ಸದನದ ಮೂಲಕ ಜನರು ಖಂಡಿತ ನಿರೀಕ್ಷೆ ಮಾಡಿರುತ್ತಾರೆ ಅಂತಾ ಸುದ್ದಿಗಾರರ ಪ್ರಶ್ನೆಗೆ ಸಿಎಂ ತಿಳಿಸಿದರು.
ಕೃಷಿ ಕಾಯಿದೆ ವಿರೋಧಿಸಿ ರೈತರ ಪ್ರತಿಭಟನೆ
ಕೃಷಿ ಕಾಯಿದೆ ವಿರೋಧಿಸಿ ರೈತರ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಈ ಬಗ್ಗೆ ರೈತರೊಂದಿಗೆ ಚರ್ಚಿಸಲು ಸರ್ಕಾರ ಸಿದ್ಧವಿದೆ. ಅವುಗಳನ್ನು ವಾಪಸ್ ಪಡೆಯುವ ಬಗ್ಗೆ ರೈತರು ಏನು ಹೇಳುತ್ತಾರೆ ಎಂಬುದನ್ನು ರೈತರಿಂದ ಕೇಳಿ ತೀರ್ಮಾನ ಮಾಡುತ್ತೇವೆ ಅಂತಾ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾರ್ಮಿಕವಾಗಿ ನುಡಿದರು.
ವಾರಣಾಸಿಯಲ್ಲಿ ಪ್ರಧಾನಿ ಮೋದಿ ಸಭೆ
ಪ್ರಧಾನಿ ಮೋದಿಯವರು ವಾರಣಾಸಿಯಲ್ಲಿ ಎಲ್ಲ ಬಿಜೆಪಿ ರಾಜ್ಯಗಳ ಸಿಎಂಗಳ ಸಭೆಯನ್ನು ಕರೆದಿದ್ದಾರೆ. ಈ ಸಭೆಯಲ್ಲಿ ತಾವು ಕೂಡ ಪಾಲ್ಗೊಳ್ಳುವುದಾಗಿ ತಿಳಿಸಿದರು.
ಬಿಡಿಎ ಬಡಾವಣೆ ಮನೆಗಳ ಸಕ್ರಮಕ್ಕೆ ನಿರ್ಧಾರ: ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್
ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಪ್ರತಾಪ್ ರೆಡ್ಡಿ ನೇಮಕ
ಡೆಂಘೀ ಪ್ರಕರಣಗಳು ಹೆಚ್ಚಾಗದಂತೆ ಮುಂಜಾಗ್ರತಾ ಕ್ರಮಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ
ಶಾಲಾ ಮಕ್ಕಳೊಂದಿಗೆ ಸಿಎಂ ಸಂವಾದ; ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಿದ ಬೊಮ್ಮಾಯಿ
ಎಂಬಿಎ ಪದವೀಧರೆಯಾಗಿದ್ರೂ ಕೆಲಸ ಸಿಗದೆ ಉಡುಪಿಯ ಸಹನಾ ಸಾವು; ಡಿಕೆಶಿ ಸಂತಾಪ
ರಾಷ್ಟ್ರಗೀತೆ ಹಾಡೋದನ್ನು ಮುತಾಲಿಕ್ ಹೇಳಿ ಕೊಡಬೇಕಾ? – ಜಮೀರ್