Connect with us


      




ಆರೋಗ್ಯ

ಕೋವಿಡ್‌ಕೇರ್ ಸೆಂಟರ್‌ಗೆ ಸಚಿವ ಗೋಪಾಲಯ್ಯ ಚಾಲನೆ

Published

on

ಜ.16 ರಿಂದ ಮನೆ ಮನೆಗೆ ಔಷಧಿ ಮಾತ್ರೆ  ವಿತರಣೆ ಆರಂಭ

ಬೆಂಗಳೂರು: ಜ.14 ( ಯು.ಎನ್.ಐ.) ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೋಂ ಐಸೋಲೇಷನ್ ಆಗಿರುವ ಕೋವಿಡ್ ಸೋಂಕಿತರಿಗೆ ಮನೆ ಮನೆಗೆ ಔಷಧಿ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸುವ ಕಾರ್ಯಕ್ರಮಕ್ಕೆ ಇದೇ ಭಾನುವಾರ ಚಾಲನೆ ನೀಡಲಾಗುವುದು ಎಂದು ಕ್ಷೇತ್ರದ ಶಾಸಕರೂ ಆದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂ,.43 ರ ನಂದಿನಿ ಲೇ ಔಟ್‌ನಲ್ಲಿರುವ ಕೆಂಪೇಗೌಡ ಸಮುದಾಯಭವನದಲ್ಲಿ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿ ಅವರು ಮಾತನಾಡಿದರು.

ಖಾಸಗಿ ಆಸ್ಪತ್ರೆಗಿಂತಲೂ ಮಿಗಿಲಾದ ವೈದ್ಯಕೀಯ ಸೌಲಭ್ಯಗಳನ್ನು ಉಳ್ಳ ಆಸ್ಪತ್ರೆಯನ್ನಾಗಿ ಕೆಂಪೇಗೌಡ ಸಮುದಾಯ ಭವನವನ್ನು ಪರಿವರ್ತಿಸಲಾಗಿದೆ. ಸಿಎಸ್‌ಆರ್ ಫಂಡ್‌ನಲ್ಲಿ ಈಗಾಗಲೇ ಕೋಟಿ ರೂ ಗೂ ಅಧಿಕ ವೆಚ್ಚದಲ್ಲಿ ಇಲ್ಲಿ ಆಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗಿದೆ, ಎಂ.ಎಸ್.ರಾಮಯ್ಯ ಆಸ್ಪತ್ರೆಯ ನುರಿತ ತಜ್ಞರು ಬಂದು ಪರಿಶೀಲನೆ ನಡೆಸಿ ಇನ್ನೂ ಅಗತ್ಯವಾಗಿ ಬೇಕಿರುವ ಪರಿಕರಗಳ ಬಗ್ಗೆ ಪಟ್ಟಿ ನೀಡಿದ್ದಾರೆ. ಅದೆಲ್ಲವನ್ನೂ ಒದಗಿಸಲಾಗುವುದು ಎಂದರು.

ಚಿಕ್ಕ ಮನೆಗಳಲ್ಲಿ ಇರುವ ಸೋಂಕಿತರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಇಲ್ಲಿ ಕೋವಿಡ್ ಕೇರ್‌ಸೆಂಟರ್ ಆರಂಭಿಸಲಾಗಿದೆ. ಚಿಕ್ಕ ಮನೆಗಳಲ್ಲಿ ಇರುವ ಯಾರಿಗಾದರೂ ಸೋಂಕು ತಗುಲಿದರೆ ಮನೆಯ ಇತರೆ ಸದಸ್ಯರಿಗೂ ಸೋಂಕು ಹಬ್ಬದಿರಲಿ ಎಂಬ ಉದ್ದೇಶದಿಂದ ಸೋಂಕಿತರನ್ನು ಇಲ್ಲಿಗೆ ದಾಖಲಿಸಲಾಗುವುದು. ಒಂದು ವೇಳೆ ಹೆಚ್ಚಿನ ಚಿಕಿತ್ಸೆ ಬೇಕಾದವರಿಗೆ ಇನ್ನೂ ಹೆಚ್ಚಿನ ವೈದ್ಯಕೀಯ ವ್ಯವಸ್ಥೆವುಳ್ಳ ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಲಾಗುವುದು. ಕ್ಷೇತ್ರದ ಜನರು ಯಾವುದಕ್ಕೂ ಭಯ ಪಡದೇ ಸೋಂಕಿನ ಲಕ್ಷಣಗಳು ಕಂಡು ಬಂದ ತಕ್ಷಣ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಶಾಸಕರ ಕಚೇರಿಯಲ್ಲಿ ಸಹಾಯವಾಣಿಯನ್ನು ಭಾನುವಾರ ಸಾಂಕೇತಿಕವಾಗಿ ಉದ್ಘಾಟನೆ ಮಾಡಲಾಗುವುದು ಮತ್ತು ಮನೆ ಮನೆಗೆ ಕರಪತ್ರಗಳನ್ನು ಹಂಚುವ ಕೆಲಸ ಮಾಡಲಾಗುವುದು. ಅಗತ್ಯಇರುವವರಿಗೆ ಔಷಧಿ ಮಾತ್ರೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯಕ್ಕೆ ಭಾನುವಾರ ಚಾಲನೆ ನೀಡಲಾಗುವುದು.ಕಳೆದ ಬಾರಿ ತಂಡವಾಗಿ ಮಾಡಿದಂತೆ ಒಗ್ಗಟ್ಟಿನ ಕೆಲಸವನ್ನು ಮಾಡೋಣ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಓಬಿಸಿ ರಾಜ್ಯಾಧ್ಯಕ್ಷ ನೆ.ಲ. ನರೇಂದ್ರಬಾಬು, ಮಾಜಿ ಉಪಮೇಯರ್ ಹರೀಶ್, ಬಿಬಿಎಂಪಿ ಪಶ್ಚಿಮ ವಲಯ ವಿಶೇಷ ಆಯುಕ್ತ ಡಾ. ದೀಪಕ್ , ಜಂಟಿ ಆಯುಕ್ತ ಶಿವಸ್ವಾಮಿ, ಮಾಜಿ ಬಿಬಿಎಂಪಿ ಸದಸ್ಯ ರಾಜೇಂದ್ರಕುಮಾರ್, ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು

ಆರೋಗ್ಯ

ಜನರಿಗೆ ತೊಂದರೆ ಕೊಡುವ ಉದ್ದೇಶ ಸರ್ಕಾರ ಹೊಂದಿಲ್ಲ

Published

on

By

ಬೆಂಗಳೂರು, ಜ ೨೦(ಯುಎನ್ ಐ) ಕೊರೋನಾ ನಿಯಂತ್ರಣಕ್ಕೆ ರಾಜ್ಯದಲ್ಲಿ ವಾರಾಂತ್ಯದ ಕರ್ಫ್ಯೂ ಮುಂದುವರಿಸಬೇಕೇ, ಬೇಡವೇ ಎಂಬ ಬಗ್ಗೆ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆಯಲಿರುವ
ಉನ್ನತಮಟ್ಟದ ಸಭೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಜನರು ಮತ್ತು ಅವರ ಆರೋಗ್ಯದ ದೃಷ್ಟಿಯಿಂದ ಯಾವ ಕ್ರಮದ ಅವಶ್ಯಕತೆ ಇದೆ, ಸೋಂಕು ನಿಯಂತ್ರಣ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಈ ವಿಚಾರದಲ್ಲಿ ಮುಖ್ಯಮಂತ್ರಿಗಳು ವೈಜ್ಞಾನಿಕ ನೆಲೆಯಲ್ಲಿ ಎಲ್ಲರ ಸಲಹೆ ಪಡೆದು ತೀರ್ಮಾನ ಕೈಗೊಳ್ಳುತ್ತಾರೆ. ಜನರ ಸಂಕಷ್ಟ ಮತ್ತು ಭಾವನೆಗಳಿಗೆ ಸ್ಪಂದಿಸುತ್ತಾರೆ. ಯಾವುದೇ ಕಾರಣಕ್ಕೂ ಜನರಿಗೆ ತೊಂದರೆ ಕೊಡುವಂತಹ ನಿರ್ಣಯ ಕೈಗೊಳ್ಳುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಹೇಳಿದರು.
ಈ ಹಿಂದೆ ಕಠಿಣ ನಿರ್ಬಂಧ ಕೈಗೊಂಡಿದ್ದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಅನಿವಾರ್ಯ ಸಂದರ್ಭದಲ್ಲಿ ಕೆಲವು ನಿರ್ಣಯ ಕೈಗೊಳ್ಳಲಾಗಿತ್ತು. ಜನರಿಗೆ ತೊಂದರೆ ಕೊಡುವುದರಿಂದ ಸರ್ಕಾರಕ್ಕೆ ಯಾವುದೇ ಲಾಭ ಅಥವಾ ಆದಾಯ ಇಲ್ಲ ಎಂದು ಸ್ಪಷ್ಟಪಡಿಸಿದರು.
ಕರೋನಾ ೩ನೇ ಅಲೆಯಲ್ಲಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವವರು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೋಮ್ ಐಸೋಲೇಷನ್ ಕಿಟ್ ಗಳನ್ನು ಬೆಂಗಳೂರಿನಲ್ಲಿ ಈಗಾಗಲೇ ವಿತರಿಸಲಾಗುತ್ತಿದೆ. ಇನ್ನೆರಡು ದಿನಗಳಲ್ಲಿ ಜಿಲ್ಲೆಗಳಿಗೂ ಈ ಕಿಟ್ ಗಳನ್ನು ಕಳುಹಿಸಲಾಗುವುದು ಎಂದರು.

Continue Reading

ಆರೋಗ್ಯ

ತಿಂಗಳಾಂತ್ಯದಲ್ಲಿ ಕೋವಿಡ್ ಅಧಿಕಗೊಳ್ಳಲಿದೆ … ಫೆಬ್ರವರಿಯಲ್ಲಿ ಇಳಿ ಮುಖ ಸಂಭವ

Published

on

By

ಹುಬ್ಬಳ್ಳಿ ಜ ೧೮ (ಯುಎನ್‌ಐ) -ಜನವರಿ ತಿಂಗಳ ಅಂತ್ಯಕ್ಕೆ ದೇಶದಲ್ಲಿ ಕೋವಿಡ್ ಸಾಂಕ್ರಾಮಿಕ ಅಧಿಕ ಪ್ರಮಾಣದಲ್ಲಿ ಏರಿಕೆಯಾಗುವ ಸಂಭವವಿದ್ದು,. ಫೆಬ್ರವರಿಯಲ್ಲಿ ಇಳಿಮುಖವಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ- ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ
ಹುಬ್ಬಳ್ಳಿಯಲ್ಲಿ ಕೋವಿಡ್- ೧೯ ರ ೩ನೇ ಅಲೆ ನಿಯಂತ್ರಣ ಹಾಗೂ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು.
ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ೩ನೇ ಅಲೆಯನ್ನು ಸಮರ್ಥವಾಗಿ ನಿರ್ವಹಿಸಲು ಸಮರ್ಪಕ ಸಿದ್ಧತೆ ಮಾಡಿಕೊಳ್ಳಬೇಕು. ಹೋಮ್ ಐಸೋಲೇಷನ್ ನಲ್ಲಿರುವವರ ಖುದ್ದು ಟ್ರಯೇಜಿಂಗ್ ಮಾಡಿ ಔಷಧೀಯ ಕಿಟ್ ತಲುಪಿಸುವ ಕಾರ್ಯದಲ್ಲಿ ಯಾವುದೇ ಲೋಪಗಳು ಆಗದಂತೆ ಎಚ್ಚರಿಕೆ ವಹಿಸಬೇಕು ಸೂಚಿಸಿದರು.

ಸರ್ಕಾರಿ ಹಾಗೂ ಸಾರ್ವಜನಿಕ ಆಸ್ಪತ್ರೆಗಳ ಬಗ್ಗೆ ಜನರು ಕೋವಿಡ್ ಮೊದಲ ಹಾಗೂ ಎರಡನೇ ಅಲೆಯಲ್ಲಿ ವಿಶ್ವಾಸ ಮೂಡಿಸಿಕೊಂಡಿದ್ದಾರೆ. ಮೂರನೇ ಅಲೆಯಲ್ಲಿ ಈ ನಂಬಿಕೆ ಉಳಿಸಿಕೊಳ್ಳುವಂತಹ ಪ್ರಾಮಾಣಿಕ ಕರ್ತವ್ಯ ನಿರ್ವಹಿಸಬೇಕು ಎಂದು ಸಚಿವ ಜೋಷಿ ಕಿವಿ ಮಾತುಹೇಳಿದರು.
ಮೂರನೇ ಅಲೆಯಲ್ಲಿ ಆಸ್ಪತ್ರೆಗಳಿಗೆ ದಾಖಲಾಗುವವರ ಸರಾಸರಿ ಪ್ರಮಾಣ ಬಹಳ ಕಡಿಮೆಯಿದೆ. ಮನೆಯಲ್ಲಿಯೇ ಪ್ರತ್ಯೇಕವಾಗಿದ್ದು ಚಿಕಿತ್ಸೆ ಪಡೆಯುವವರ ಸಂಖ್ಯೆ ಹೆಚ್ಚಾಗಿದೆ. ಅವರಿಗೆ ಸಕಾಲದಲ್ಲಿ ಔಷಧಿಗಳ ಕಿಟ್ ಹಾಗೂ ಆಪ್ತ ಸಮಾಲೋಚನೆ ಮೂಲಕ ಸಲಹೆಗಳು ಲಭ್ಯವಾಗಬೇಕು ಎಂದು ಸಲಹೆ ನೀಡಿದರು.
ಜಿಲ್ಲಾಸ್ಪತ್ರೆ, ಕಿಮ್ಸ್ ಹಾಗೂ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗಿರುವ ವೈದ್ಯಕೀಯ ಆಕ್ಸಿಜನ್ ಘಟಕಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು. ಹೋಮ್ ಐಸೋಲೇಷನ್ ನಲ್ಲಿರುವವರಿಗೆ ಔಷಧಿ ತಲುಪಿಸುವ ತಂಡಗಳಲ್ಲಿ ಕಾರ್ಯ ನಿರ್ವಹಿಸಲು ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳು ಮುಂದೆ ಬಂದರೆ ಅವರ ಸೇವೆ ಪಡೆಯಬಹುದು. ಕೋವಿಡ್ ಪ್ರಮಾಣ ಅತ್ಯಧಿಕ ಮಟ್ಟಕ್ಕೆ ತಲುಪಿದಾಗ ಯಾವುದೇ ಸೋಂಕಿತರಿಗೂ ತೊಂದರೆ ಆಗದಂತೆ ಎಚ್ಚರ ವಹಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಕೇಂದ್ರ ಸಚಿವ ಜೋಶಿ ಸೂಚಿಸಿದರು .

Continue Reading

ಆರೋಗ್ಯ

ಬೆಂಗಳೂರಿನ ಸೋಂಕಿತರ ಹೋಂ ಐಸೋಲೇಷನ್ ಅವಧಿ ೩ ದಿನ ಕಡಿತ…!

Published

on

By

ಬೆಂಗಳೂರು, ಜ ೧೮ (ಯುಎನ್‌ಐ) ಬೆಂಗಳೂರು ಮಹಾನಗರದಲ್ಲಿ ಕೋವಿಡ್ ಸೋಂಕಿತರ ಹೋಂ ಐಸೋಲೇಷನ್ ಅವಧಿಯಲ್ಲಿ ಮೂರು ದಿನ ಕಡಿತ ಮಾಡಲಾಗಿದೆ ಎಂದು ಬಿ ಬಿ ಎಂ ಪಿ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹೆಚ್ಚು ಸೋಂಕಿತರು ಮನೆಯಲ್ಲೇ ಇದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಹೋಂ ಐಸೋಲೇಷನ್ ಅವಧಿ ಈಗಿರುವ ೧೦ ದಿನಗಳಿಂದ ೭ ದಿನಗಳಿಗೆ ಇಳಿಸಲಾಗಿದೆ ಎಂದರು.
ಸೋಂಕಿತರು ಗುಣಮುಖರಾದ ಬಳಿಕ ಕೋವಿಡ್ ಪರೀಕ್ಷೆ ಮಾಡಿಸಿ, ನೆಗೆಟಿವ್ ವರದಿ ಪಡೆಯುವ ಅಗತ್ಯತೆ ಇಲ್ಲ. ೭ ದಿನಗಳ ಬಳಿಕ ತಮ್ಮ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಹುದು ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸೋಂಕಿತರಿಗೆ ಹೆಚ್ಚಿನ ಪ್ರಮಾಣದಲ್ಲಿ ಔಷಧಿ ಬಳಕೆ ಮಾಡದಂತೆ ಸೂಚನೆ ನೀಡಲಾಗಿದೆ. ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಮೇಲೆ ಹೆಚ್ಚಿನ ನಿಗಾ ಇರಿಸಲಾಗಿದೆ ಎಂದು ಇದೇ ವೇಳೆ ತಿಳಿಸಿದರು.

Continue Reading
Advertisement
ದೇಶ10 mins ago

ರಾಷ್ಟ್ರೀಯ ಬಾಲ ಪುರಸ್ಕಾರ್ ಪುರಸ್ಕೃತರೊಂದಿಗೆ ಪ್ರಧಾನಿ ನಾಳೆ ಸಂವಾದ

ನವದೆಹಲಿ, ಜ ೨೩(ಯುಎನ್ ಐ) ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ್ ಪುರಸ್ಕೃತರೊಂದಿಗೆ ನಾಳೆ ವೀಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ....

ಅಂಕಣ12 mins ago

ಮಾಯಾಜಾಲದ ಬೆನ್ನು ಹತ್ತಿ

ಅಂಕಣ: ಮುಖಗಳು -೩ ಒಂಬತ್ತನೆ ತರಗತಿ ವಿದ್ಯಾರ್ಥಿ ತಂದೆಯೊಬ್ಬರು ಫೋನ್ ಮಾಡಿದ್ದರು. ‘ಮಗ ಮೊಬೈಲ್ ಕೊಡಿಸು ಎಂದು ಹಠ ಮಾಡುತ್ತಿದ್ದಾನೆ ಏನು ಮಾಡಲಿ?’ ಎಂದು ಕೇಳಿದ್ದರು. ‘ಅವನಿಗೇಕೆ...

ದೇಶ14 mins ago

ಟ್ರೈನ್ ಡ್ರೈವರ್‌ಗೆ ನಿದ್ದೆ ಎಂಬ ಚಿಂತೆ; ಪ್ರಯಾಣಿಕರಿಗೆ ಸುಸ್ತೋ ಸುಸ್ತು..!!

ಶಹಜಹಾನ್ಪುರ್/ಉತ್ತರಪ್ರದೇಶ: ಜನೆವರಿ 23 (ಯು.ಎನ್.ಐ.) “ನನ್ನ ನಿದ್ದೆ ಸಂಪೂರ್ಣವಾಗಿಲ್ಲ. ನಾನು ಸದ್ಯ ರೈಲು ಚಲಾಯಿಸುವುದಿಲ್ಲ.” ಉತ್ತರ ಪ್ರದೇಶದ ಶಹಜಹಾನ್‌ಪುರ ರೈಲು ನಿಲ್ದಾಣದಲ್ಲಿ ಶುಕ್ರವಾರ ಇಂಥದ್ದೊಂದು ವಿಚಿತ್ರ ಘಟನೆ...

ದೇಶ44 mins ago

ಬಂಗಾಳ: ನೇತಾಜಿ ಜನ್ಮದಿನದಂದು ಲಾಠಿ ಚಾರ್ಜ್

ಕೋಲ್ಕತ್ತಾ: ಜನೆವರಿ 23 (ಯು.ಎನ್.ಐ.) ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಸಂದರ್ಭದಲ್ಲಿಯೂ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ರಾಜಕೀಯ ನಿಂತಿಲ್ಲ. ಪಶ್ಚಿಮ ಬಂಗಾಳದ...

ಅಂಕಣ2 hours ago

ದಟ್ಟ ಕಾಡಿನಲ್ಲಿ ʻಸಪ್ನೋಂ ಕೀ ರಾಣೀʼ

ಅಂಕಣ: ಒಂದೂರಲ್ಲಿ ಒಂದಿನ- 3 ಈ ಒಂದೂರು ಅನ್ನುವ ಮಾಯೆ ಇದೆಯಲ್ಲ, ಅದು ವಿಚಿತ್ರವಾದದ್ದು. ಅಪ್ಪ ಕಥೆ ಹೇಳುವಾಗ ಪ್ರತಿ ಸಲವೂ ಆ ಕಥೆ ಒಂದೂರಿನಲ್ಲಿ ಅಂತಲೇ...

ಕ್ರೀಡೆ2 hours ago

ಅಂಕುಶ್ ರಘುವಂಶಿ ಟೀಂ ಇಂಡಿಯಾದ ಉದಯೋನ್ಮುಖ ತಾರೆ!

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅಂಡರ್ 19 ವರ್ಲ್ಡ್ ಕಪ್ ಮೂಲಕ ಭಾರತ ಕ್ರಿಕೆಟ್ ತಂಡಕ್ಕೆ ಮತ್ತೊಬ್ಬ ಉದಯೋನ್ಮುಖ ಆಟಗಾರ ದೊರೆತಿದ್ದಾರೆ. ಅವರೇ ದೆಹಲಿ ಮೂಲದ ಅಂಕುಶ್...

ಅಂಕಣ3 hours ago

ಎಳವೆಯಿಂದ ರಂಗಭೂಮಿ

ನಾದಾಂಕಣ – ಡಾ. ನಾ. ದಾಮೋದರ ಶೆಟ್ಟಿ ಭಾರತೀಯ ಹಾಗೂ ಗ್ರೀಕ್‌ ರಂಗಭೂಮಿಗೆ ಬಹುದೊಡ್ಡ ಪರಂಪರೆಇದೆ ಎನ್ನುವುದು ಸಾರ್ವಕಾಲಿಕ ಸತ್ಯ. ಆದರೆ ಯುರೋಪಿನ ರಂಗಭೂಮಿಯಾಗಲೀ ರಷ್ಯಾ, ಅಮೇರಿಕಾ...

ದೇಶ3 hours ago

ಅರುಣಾಚಲದಿಂದ ನಾಪತ್ತೆಯಾಗಿದ್ದ ಯುವಕ ಚೀನಾ ಗಡಿಯಲ್ಲಿ ಪತ್ತೆ!

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿದ್ದ ಭಾರತೀಯ ಯುವಕ ಚೀನಾ ಗಡಿಯಲ್ಲಿ ಪತ್ತೆಯಾಗಿದ್ದಾನೆ. ಈ ಬಗ್ಗೆ ಚೀನಾ ಸೈನಿಕರು ಭಾರತೀಯ ಯೋಧರಿಗೆ ಮಾಹಿತಿ ನೀಡಿದ್ದು,...

ಹಣಕಾಸು4 hours ago

ಕೆಲಸ ಬದಲಾಯಿಸಿದ್ದೀರಾ? ಚಿಂತೆ ಬಿಡಿ.. ನಿಮ್ಮ ನೆರವಿಗೆ ಇದೆ ಇಪಿಎಫ್ಒ!

ಬೆಂಗಳೂರು: ಜನೆವರಿ 23 (ಯು.ಎನ್.ಐ.) ಉತ್ತಮ ಸಂಬಳ, ಭದ್ರತೆಯುಳ್ಳ ನೌಕರಿ, ವಿಶೇಷ ಸವಲತ್ತುಗಳು.. ಹೀಗೆ ನಾನಾ ಉದ್ದೇಶಗಳಿಂದ ಉದ್ಯೋಗಿಗಳು ತಮ್ಮ ಕೆಲಸವನ್ನು ಬದಲಾಯಿಸುತ್ತಾ ಇರುತ್ತಾರೆ. ಇಂತಹ ಸಂದರ್ಭದಲ್ಲಿ...

ದೇಶ4 hours ago

ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿ… ದೇಶಾದ್ಯಂತ ಪರಾಕ್ರಮ ದಿನವಾಗಿ ಆಚರಣೆ

ನವದೆಹಲಿ, ಜ ೨೩( ಯುಎನ್ ಐ) ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ೧೨೫ನೇ ಜನ್ಮಜಯಂತಿ ಇಂದು. ದೇಶಾದ್ಯಂತ ಪರಾಕ್ರಮ ದಿನವಾಗಿ ನೇತಾಜಿ...

ಟ್ರೆಂಡಿಂಗ್

Share