Published
4 months agoon
By
UNI Kannadaಬೆಂಗಳೂರು, ಜ ೧೭(ಯುಎನ್ ಐ) ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕಳೆದ ನಾಲ್ಕೈದು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆಆರ್ ಟಿ ಪಿ ಸಿ ಆರ್ ಪರೀಕ್ಷೆ ನಡೆಸಿದಾಗ ಸೋಂಕು ಇರುವುದು ದೃಢವಾಗಿದೆ. ಮುಂಜಾಗ್ರತಾ ಕ್ರಮವಾಗಿ ತಮ್ಮ ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
ರಾಜಧಾನಿ ಪೊಲೀಸ್ ಸಿಬ್ಬಂದಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈವರೆಗೆ ೭೩೮ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಸೋಂಕು ತಗುಲಿದೆ. ಇದರ ಬೆನ್ನಲ್ಲೇ ಸಿಬ್ಬಂದಿಗೆ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಲು ಪೊಲೀಸ್ ಕಮಿಷನರ್ ಕಮಲ್ ಪಂತ್ ಸೂಚನೆ ನೀಡಿದ್ದಾರೆ.
ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್ ಠಾಣೆ ಬಿಟ್ಟು ಹೊರಗೆ ಕೆಲಸ ಮಾಡುವ ಪೊಲೀಸ್ ಸಿಬ್ಬಂದಿ ಟೆಸ್ಟ್ ಹೆಚ್ಚಳ ಮಾಡುವಂತೆ ಅವರು ಸಲಹೆ ನೀಡಿದ್ದಾರೆ. ಆಯಾ ಠಾಣೆಗಳಲ್ಲಿ ಗರ್ಭಿಣಿ ಮಹಿಳಾ ಸಿಬ್ಬಂದಿಗೆ ಆರೋಗ್ಯದ ಸಮಸ್ಯೆ ಕಾಣಿಸಿದರೆ ಕೆಲಸಕ್ಕೆ ಬರದೆ ಮನೆಯಲ್ಲಿರುವಂತೆ ಸೂಚಿಸಲಾಗಿದೆ.
ಜಿಟಿಜಿಟಿ ಮಳೆಯಲ್ಲಿಯೇ ಮುಖ್ಯಮಂತ್ರಿ ಬೆಂಗಳೂರು ವೀಕ್ಷಣೆ
ಮಕ್ಕಳು ಶಿಕ್ಷಣದಿಂದ ವಂಚಿತರಾಗಲು ಬಿಡುವುದಿಲ್ಲ: ಸಚಿವ ಕೆ.ಗೋಪಾಲಯ್ಯ ಭರವಸೆ
ತೆರೆಯದ ಆಗಮನ ದ್ವಾರ; ಪರದಾಡಿದ ಪ್ರಯಾಣಿಕರು
ಬೆಂಗಳೂರು: ಮಳೆಹಾನಿ ಸ್ಥಳಗಳಲ್ಲಿ ಸಿಎಂ ಪರಿವೀಕ್ಷಣೆ
ಬಿಷಪ್ ಕಾಟನ್ ಶಾಲೆಯ ವಿದ್ಯಾರ್ಥಿಗಳ ನಡುವೆ ಮಾರಾಮಾರಿ; ವಿಡಿಯೋ ವೈರಲ್
ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ಡಿ ಕಾರ್ಯ ವೈಫಲ್ಯ ತೋರಿಸಿಕೊಟ್ಟ ಯುವಕ; ಹಿಗ್ಗಾಮುಗ್ಗಾ ತರಾಟೆ