Connect with us


      




ದೇಶ

ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿಗೆ ತಡೆ!

Iranna Anchatageri

Published

on

ಹೊಸದಿಲ್ಲಿ, ಜನವರಿ 03 (ಯು.ಎನ್.ಐ.) ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಬಯೋಮೆಟ್ರಿಕ್ ಹಾಜರಾತಿಗೆ ಕೇಂದ್ರ ಸರ್ಕಾರ ತಡೆ ನೀಡಿದೆ. ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್, ಕಳೆದ ಕೆಲವು ದಿನಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಹೆಚ್ಚುತ್ತಿರುವ ಕರೋನಾ ಪ್ರಕರಣಗಳ ಮೇಲೆ ಕಡಿವಾಣ ಹಾಕುವ ಸಂಬಂಧ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ಟ್ವೀಟ್ ಮಾಡುವ ಮೂಲಕ ಸೂಚನೆ ನೀಡಿರುವ ಕೇಂದ್ರ ಸಚಿವರು, “ಕಳೆದ ಕೆಲವು ದಿನಗಳಲ್ಲಿ #COVID ಪ್ರಕರಣಗಳ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ಆದೇಶದವರೆಗೆ ಸರ್ಕಾರಿ ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಪ್ರಧಾನಿ ಮೋದಿ ನಾಯಕತ್ವದಲ್ಲಿ ಸರ್ಕಾರಿ ಉದ್ಯೋಗಿಗಳ ಆರೋಗ್ಯದ ದೃಷ್ಟಿಯಿಂದ ಈ ನಿರ್ಣಯ ಕೈಗೊಳ್ಳಲಾಗಿದೆ ” ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

Share