Connect with us


      
ಕರ್ನಾಟಕ

ಡಿ.ಕೆ.ಶಿವಕುಮಾರ್‌ ಅವರಿಗೆ ಗಣ್ಯರಿಂದ ಜನ್ಮದಿನದ ಶುಭಾಶಯ

Iranna Anchatageri

Published

on

ಬೆಂಗಳೂರು: ಮೇ 15 (ಯು.ಎನ್.ಐ.) 60ನೇ ವಸಂತಕ್ಕೆ ಕಾಲಿಟ್ಟಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ.

ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ನವಸಂಕಲ್ಪ ಶಿಬಿರದಲ್ಲಿ ಪಾಲ್ಗೊಂಡಿರುವ ಶಿವಕುಮಾರ್ ಅವರಿಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ಶುಭ ಕೋರಿದರು. ಪ್ರಿಯಾಂಕಾ ಗಾಂಧಿ ಅವರು ಶಿವಕುಮಾರ್ ಅವರು ಕೇಕ್ ಕತ್ತರಿಸುವಾಗ ಖುದ್ದು ಹಾಜರಿದ್ದು ಶುಭಾಶಯ ಹೇಳಿದರು.

ಮಾಜಿ ಪ್ರಧಾನಿ ದೇವೇಗೌಡ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ ಮತ್ತಿತರ ಮುಖಂಡರು ದೂರವಾಣಿ ಕರೆ ಮಾಡಿ ಶಿವಕುಮಾರ್ ಅವರಿಗೆ ಶುಭಾಶಯ ತಿಳಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್, ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ಹಿರಿಯ ನಾಯಕ ಎಸ್.ಆರ್. ಪಾಟೀಲ್ ಮತ್ತಿತರರು ಶಿವಕುಮಾರ್ ಅವರಿಗೆ ಆಯಸ್ಸು, ಆರೋಗ್ಯ ವೃದ್ಧಿಸಲಿ ಹಾಗೂ ಯಶಸ್ಸು ಸಿಗಲಿ ಎಂದು ಶುಭ ಸಂದೇಶದಲ್ಲಿ ಹಾರೈಸಿದ್ದಾರೆ.

Share