Connect with us


      




ಕರ್ನಾಟಕ

ಖರ್ಗೆಯವರಿಂದ ಸುಳ್ಳು ಹೇಳಿಸಿದ ಕಾಂಗ್ರೆಸ್- ಛಲವಾದಿ ನಾರಾಯಣಸ್ವಾಮಿ ಆರೋಪ

Published

on

ಬೆಂಗಳೂರು: ಜನೆವರಿ 07 (ಯು‌.ಎನ್.ಐ) ಪಂಜಾಬ್‍ನಲ್ಲಿ ಪ್ರಧಾನಿಯವರ ಭೇಟಿ ವೇಳೆ ಭದ್ರತಾ ವಿಫಲತೆ ಕುರಿತು ಮಲ್ಲಿಕಾರ್ಜುನ ಖರ್ಗೆಯವರು ಸುಳ್ಳು ಹೇಳಿದ್ದು, ಕಾಂಗ್ರೆಸ್‍ನವರು ಅವರಿಂದ ಸುಳ್ಳು ಹೇಳಿಸಿದ್ದಾರೆ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷರು ಮತ್ತು ರಾಜ್ಯ ವಕ್ತಾರರಾದ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್‍ನಲ್ಲಿ ಸುಳ್ಳನ್ನೇ ಹೇಳುವವರಿಗೆ ಮಾತ್ರ ಅವಕಾಶ ಇದೆ. ಆ ಪಕ್ಷದಲ್ಲಿದ್ದ ನಾನು ಸತ್ಯ ಹೇಳಲು ಬಿಜೆಪಿಗೆ ಬಂದಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಎಂದಿಗೂ ಸುಳ್ಳು ಹೇಳಿದ್ದನ್ನು ನೋಡಿರಲಿಲ್ಲ. ಆದರೆ, ಮಲ್ಲಿಕಾರ್ಜುನ ಖರ್ಗೆ ಅವರಿಂದ ಅವರ ಕೈಯಲ್ಲಿ ಕಾಂಗ್ರೆಸ್‍ನವರು ಸುಳ್ಳು ಹೇಳಿಸಿದ್ದಾರೆ. ದಲಿತ ವಿಚಾರವನ್ನು ತಂದಿದ್ದಾರೆ. ಪಂಜಾಬ್‍ನ ದಲಿತ ಸಿಎಂ ಅವರನ್ನು ಪದಚ್ಯುತಗೊಳಿಸಲು ಪ್ರಧಾನಿ ಹೀಗೆ ಮಾಡಿದ್ದಾರೆ ಎಂದಿದ್ದಾರೆ. ಇದು ಆಕ್ಷೇಪಾರ್ಹ ಎಂದು ತಿಳಿಸಿದರು.
ಖಲಿಸ್ತಾನ ಮತ್ತು ಪಾಕಿಸ್ತಾನದ ಜೊತೆ ಪಂಜಾಬ್ ಸರಕಾರ ಕೈಜೋಡಿಸಿದೆ ಎಂದು ಅವರು ಟೀಕಿಸಿದರು. ಈ ಘಟನೆಯನ್ನು ದೇಶದ ಎಲ್ಲ ಪ್ರಜೆಗಳು ಖಂಡಿಸಬೇಕೆಂದು ಆಗ್ರಹಿಸಿದರು.

ಭದ್ರತಾ ವಿಫಲತೆಯು ಕ್ರಾಸ್ ಬಾರ್ಡರ್ ಟೆರರಿಸಂನ ಒಂದು ಭಾಗ. ನವಜೋತ್ ಸಿಂಗ್ ಸಿಧು ಅವರು ಪಾಕಿಸ್ತಾನದ ಪರ ಮಾತನಾಡುತ್ತಾರೆ. ಪಾಕ್ ಜೊತೆ ಸೇರಿ ಈ ಕೃತ್ಯವನ್ನು ಪಂಜಾಬ್ ಸರಕಾರ ಮತ್ತು ಕಾಂಗ್ರೆಸ್‍ನವರು ಮಾಡಿದ್ದಾರೆ. ಇದರ ಹಿಂದೆ ಅಂತರರಾಷ್ಟ್ರೀಯ ಪಿತೂರಿ ಇದೆ ಎಂದು ವಿವರಿಸಿದರು.
ಈ ಆರೋಪ ಮಾಡಲು ನಿಮಗೆ ಮನಸ್ಸಾದರೂ ಹೇಗೆ ಬಂತು? ಎಂದು ಖರ್ಗೆಯವರನ್ನು ಪ್ರಶ್ನಿಸಿದ ಅವರು, ಪ್ರಧಾನಿಯವರು ಬರುವ ಮೊದಲು ಸರ್ವೇ ಮಾಡಿರ್ತಾರೆ. ಪಂಜಾಬ್ ಸಿಎಂ ರೈತರ ಮುಂದೆ ನಿಂತು ಮಾತನಾಡುವುದು ಅವಶ್ಯಕತೆ ಇತ್ತೇ? ಪ್ರಧಾನಿ ಬರುವಾಗ ಹೋರಾಟ, ಪ್ರತಿಭಟನೆಗೆ ಅವಕಾಶವಿಲ್ಲ. ಪಂಜಾಬ್‍ನಲ್ಲಿ ಪ್ರಧಾನಿಯವರನ್ನು ಸ್ವಾಗತಿಸಲು ಸಿಎಂ, ಮುಖ್ಯ ಕಾರ್ಯದರ್ಶಿ ಬರದಿರುವುದು ಏಕೆ? ಎಂದು ಕೇಳಿದರು.

ದಲಿತರೊಬ್ಬರನ್ನು ಸಿಎಂ ಮಾಡಿ ಅವರಿಗೆ ಅಪವಾದ ಬರಲು ಈ ರೀತಿ ಕಾಂಗ್ರೆಸ್ ಮಾಡಿಸಿತೇ? ಕೇವಲ 3 ತಿಂಗಳಿಗೆ ಅಲ್ಲಿ ದಲಿತ ಸಿಎಂ ಮಾಡಿದ್ದೇಕೆ? ಕರ್ನಾಟಕದಲ್ಲಿ ಆರು ದಶಕದಿಂದ ದಲಿತ ಸಿಎಂ ಬೇಡಿಕೆ ಇದ್ದರೂ ಮಾಡಿಲ್ಲವೇಕೆ ಎಂದು ಅವರು ಪ್ರಶ್ನಿಸಿದರು. ಕರ್ನಾಟಕದಲ್ಲಿ ಮಳೆ ಬಿದ್ದರೆ ಕಾಂಗ್ರೆಸ್ ಮುಖಂಡರು ಪಂಜಾಬ್‍ನಲ್ಲಿ ಕೊಡೆ ಹಿಡಿಯುವವರು ಎಂದು ವ್ಯಂಗ್ಯವಾಗಿ ತಿಳಿಸಿದರು.

ಇಂಥ ಭದ್ರತಾ ವಿಫಲತೆ ಯಾವತ್ತೂ ನಡೆದಿಲ್ಲ. ಕಾಂಗ್ರೆಸ್ ಇದರ ಬಗ್ಗೆ ಖುಷಿ ಪಡುತ್ತಿದೆ. ನಿಮಗೆ ಮೋದಿಯವರ ಬಗ್ಗೆ ದ್ವೇಷ ಇರಬಹುದು. ಈ ರೀತಿ ದ್ವೇಷ ಪಡುವುದು ಸರಿಯೇ? ಎಂದು ಕೇಳಿದರು. ಪ್ರಧಾನಿಯವರು ಅದೇ ರಸ್ತೆಯಲ್ಲಿ ಹೋದುದೇಕೆ ಎಂದು ಪ್ರಶ್ನಿಸಿದ ದಿನೇಶ್ ಗುಂಡೂರಾವ್ ದೊಡ್ಡ ಅವಿವೇಕಿ. ಇವರೆಲ್ಲ ರಾಜಕಾರಣಿಯಾಗಲು ಅರ್ಹರೇ? ಈ ದೇಶದ ಕಾನೂನಿಗಿಂತ ಅವರು ದೊಡ್ಡವರೇ? ಎಂದು ಕೇಳಿದರು.

ಕಾಂಗ್ರೆಸ್‍ನ ಸಂಭ್ರಮಕ್ಕೆ ದೇಶದ ಜನರು ಉತ್ತರ ಕೊಡಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆಯವರು ಕಾಂಗ್ರೆಸ್‍ನ ಕೈಗೊಂಬೆ ಆಗಬಾರದು. ದಲಿತ ಸಮುದಾಯ ತಲೆ ತಗ್ಗಿಸುವಂತೆ ಮಾಡದಿರಿ ಎಂದು ಆಗ್ರಹಿಸಿದರು.

ಸಿದ್ದರಾಮಯ್ಯ ಅವರು ತಾವೂ ದಲಿತ ಎಂದು ಹೇಳುವುದಾದರೆ ಪ್ರಧಾನಿಯವರೂ ಹಿಂದುಳಿದವರು. ಅವರೂ ದಲಿತರಲ್ಲವೇ? ಪ್ರಧಾನಿ ಬಗ್ಗೆ ಮಾತನಾಡುವ ಖರ್ಗೆಯವರಿಗೆ ಸಿದ್ದರಾಮಯ್ಯನವರು ಬುದ್ಧಿವಾದ ಹೇಳಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್‍ನವರು ಸುಳ್ಳು ಹೇಳುವುದನ್ನು ಬಿಡಬೇಕು. ಮುಂದಿನ ಚುನಾವಣೆಯಲ್ಲಿ 45- 50 ಲೋಕಸಭಾ ಸೀಟು ಕೂಡ ಕಾಂಗ್ರೆಸ್‍ಗೆ ಸಿಗುವುದಿಲ್ಲ. ಮೋದಿಯವರು ಇನ್ನಷ್ಟು ಶಕ್ತಿಯುತವಾಗಿ ಮುಂದಿನ ಚುನಾವಣೆಯಲ್ಲಿ ಗೆದ್ದು ಬರಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಕರ್ನಾಟಕ

ಸಿಎಂ ಭೇಟಿ ಮಾಡಿದ ಚಿಕ್ಕಮಗಳೂರು ಶಾಸಕರ ನಿಯೋಗ

Published

on

ಬೆಂಗಳೂರು: ಜನೆವರಿ 27 (ಯು.ಎನ್.ಐ.) ಶಾಸಕ ಹಾಗೂ ಬಿಜೆಪಿ ಪ್ರಧಾನ ಕಾರ್ಯಯದರ್ಶಿ ಸಿ ಟಿ ರವಿ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲೆ ಶಾಸಕರು ಮುಖ್ಯಮಂತ್ರಿ‌ ಬಸವರಾಜ ಎಸ್ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದರು. ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ನಿಯೋಗದ ಅಹವಾಲುಗಳನ್ನು ಮುಖ್ಯಮಂತ್ರಿ ಆಲಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ, ಮತ್ತು ಭದ್ರಾ ಉಪಕಣವೆಯ 2 ಮತ್ತು 3 ನೇ ಹಂತದ ಯೋಜನೆಗೆ ಹಣ ಬಿಡುಗಡೆ ಹಾಗೂ ಜಿಲ್ಲೆಯ ಜಲಧಾರೆ ಯೋಜನೆಗೆ ಬಜೆಟ್ ಹಣ ನೀಡುವಂತೆ ನಿಯೋಗ ಮನವಿ ಮಾಡಿದೆ. ನಿಯೋಗದಲ್ಲಿ ಉಪ ಸಭಾಪತಿ ಪ್ರಾಣೇಶ್, ಶಾಸಕ ಸುರೇಶ್, ಬೆಳ್ಳಿ ಪ್ರಕಾಶ್, ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್‌ ಸಹ ಇದ್ದರು.

ಸಿಎಂ ಭೇಟಿ ಬಳಿಕ ಜೀವರಾಜ್ ಅವರು ಮಾತನಾಡಿ, ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿದರು. ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ನಮ್ಮ ಜಿಲ್ಲೆಯಲ್ಲಿ ನನಗಿಂತಲೂ ಹಿರಿಯರಿದ್ದಾರೆ, ಮೂಡಿಗೆರೆ ಎಂ ಪಿ ಕುಮಾರಸ್ವಾಮಿ ಇದಾರೆ, ತರೀಕೆರೆ ಸುರೇಶ್ ಇದಾರೆ, ಅವರಿಗೆ ಕೊಡಲಿ. ಸಿ ಟಿ ರವಿ ಮಾರ್ಗದರ್ಶನದಲ್ಲಿ ಮುಂದೆ‌ ಹೋಗ್ತೀವಿ.
ಸಂಪುಟ ವಿಸ್ತರಣೆ ಸಮಯದಲ್ಲಿ ನಮ್ಮ ಜಿಲ್ಲೆಗೆ ಅವಕಾಶ ಸಿಕ್ಕರೆ ಸಿಗಬಹುದು.. ಸಿಗದೇನೂ ಇರಬಹುದು. ಯಾರಿಗೆ ಕೊಟ್ಟರು ಸಂತೋಷ ಕೊಟ್ಟಿಲ್ಲ ಅಂದ್ರೂ ಸಂತೋಷ ಎಂದರು.

ಬಿಜೆಪಿ ಶಾಸಕರು ಕಾಂಗ್ರೆಸ್ನವರ ಸಂಪರ್ಕದಲ್ಲಿರುವ ವಿಚಾರವಾಗಿ ಮಾತನಾಡಿ, ನಮ್ಮ ಪಕ್ಷದಿಂದ ಯಾರು ಹೋಗೋದಿಲ್ಲ. ಚುನಾವಣಾ ಹತ್ತಿರ ಬಂದಾಗ ಏನ್ ಆಗುತ್ತೆ ಅನ್ನೋದು ದೇವರೊಬ್ಬರಿಗೆ ಮಾತ್ರ ಗೊತ್ತು.‌ ಒಮ್ಮೆ ಪಕ್ಷಕ್ಕೆ ಸೇರ್ಪಡೆಯಾದರೆ ಅಲ್ಲಿ ವಲಸಿಗ ಮೂಲ ಅನ್ನೋದು ಬರೋದಿಲ್ಲ.‌ ಈಶ್ವರಪ್ಪ ಉಸ್ತುವಾರಿಯಾಗಿ ಬಂದಿರೋದನ್ನ ನಾವು ಸ್ವಾಗತ ಮಾಡ್ತೀವಿ ಎಂದು ಹೇಳಿದರು.

ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಮಾತನಾಡಿ.‌ ಸಿ.ಟಿ ರವಿ ನೇತೃತ್ವದಲ್ಲಿ ನಮ್ಮ ಪಕ್ಷದ ಚಿಕ್ಕಮಗಳೂರು ಶಾಸಕರೆಲ್ಲ ಸಿಎಂ ಭೇಟಿ ಮಾಡಿದ್ವಿ. ಚಿಕ್ಕಮಗಳೂರು ಜಿಲ್ಲೆ ಸಮಸ್ಯೆ ಬಗ್ಗೆ ಚರ್ಚೆಗೆ ತೆರಳಿದ್ವಿ. ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಮತ್ತು ಮೂಡಿಗೆರೆಯಲ್ಲಿ ತೋಟಗಾರಿಕೆ ವಿಶ್ವವಿದ್ಯಾಲಯ ಹಾಗೂ ಭದ್ರಾ ಉಪಕಣಿವೆಯ ಕಾಮಗಾರಿ, ಜಿಲ್ಲೆಯ ಜಲಧಾರೆಯ ಯೋಜನೆ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ಮನವಿ ಸಲ್ಲಿಸಿ ಬಂದಿದ್ದೇವೆ ಎಂದು ವಿವರಿಸಿದರು.

Continue Reading

ಕರ್ನಾಟಕ

ಸಿಎಂ‌ ಇಬ್ರಾಹಿಂ ಬಂದರೆ ಸ್ವಾಗತ: ಎಚ್‌‌‌ಡಿಕೆ

Published

on

ಬೆಂಗಳೂರು:ಜನೆವರಿ 27 (ಯು.ಎನ್.ಐ.) ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಿಎಂ‌ ಇಬ್ರಾಹಿಂ‌ ಅವರು ಜಾತ್ಯತೀತ ಜನತಾ ದಳಕ್ಕೆ ಬಂದರೆ ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.‌ಕುಮಾರಸ್ವಾಮಿ ಹೇಳಿದ್ದಾರೆ.

ಅವರಿಂದು ಸುದ್ದಿಗಾರರ ಜೊತೆ ಮಾತನಾಡಿ, ಇಬ್ರಾಹಿಂ ಅವರು ಹಿರಿಯ ರಾಜಕಾರಣಿ.‌ ನಮ್ಮ ಪಕ್ಷ ಹಾಗೂ ದೇವೇಗೌಡರ ಏಳು ಬೀಳುವಿನಲ್ಲೊಯೂ ಜೊತೆಯಾದವರು. ವಿರೋಧ ಪಕ್ಷದ ನಾಯಕರ ಸ್ಥಾನಕ್ಕೆ ಅವರ ಹೆಸರು ಕೇಳಿ‌ ಬಂದಿತ್ತು. ಆ ಸ್ಥಾನ ದೊರೆತರೆ ನಾಯಕರ ಉಪಯೋಗ ಮಾಡಿಕೊಳ್ಳಿ. ನಿಮ್ಮನ್ನು ದುರುಪಯೋಗ ಪಡಿಸಿಕೊಳ್ಳಲ್ಲ ಎಂದಿದ್ದೆ ಎಂದು ವಿವರಿಸಿದರು.

ಅವರಿಗೆ ಇನ್ನೂ ದೇವೇಗೌಡರು ಹಾಗೂ ನಮ್ಮ ಪಕ್ಷದ ಬಗ್ಗೆ ವ್ಯಾಮೋಹ ಇದೆ.‌ ಅವರು ಬಂದರೆ ಸ್ವಾಗತ. ನಾವು ಕದ್ದು ಮುಚ್ಚಿ ಯಾವುದನ್ನೂ ಮಾಡಿಲ್ಲ. ಇಂದೂ ಕೂಡ ನಾನು ಕರೆ ಮಾಡಿ ಮಾತಾಡಿದ್ದೀನಿ. ಅವರು ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತ. ಜನತಾ ಪರಿವಾರದ ನಾಯಕರು ಸೆಟ್ಟಲ್ ಆಗಿದ್ದಾರೆ. ಅವರನ್ನು ವಾಪಸ್ ತರುವ ನಿರೀಕ್ಷೆ ಇಟ್ಟುಕೊಂಡಿಲ್ಲ ಎಂದರು.

ಯವ ನಾಯಕತ್ವ ತರುವ ನಿಟ್ಟಿನಲ್ಲಿ ಚಿಂತಿಸಲಾಗುತ್ತಿದೆ. ಹೊಸ ನಾಯಕರ ನೇಮಕಾತಿ‌ ಮಾಡಲಾಗುತ್ತಿದೆ. ಹೊಸ ನಾಯಕರ ಸೃಷ್ಟಿ ಮೊದಲಿನಿಂದಲೂ ನಡೆಯುತ್ತಿದೆ. ಜೆಡಿಎಸ್ ಮೊದಲಿನಿಂದಲೂ ಗುರು ಮನೆ ಇದ್ದಂತೆ. ಹಲವರು ನಾಯಕರಾಗಿ‌ ಬೆಳೆದು ಹೋಗಿದ್ದಾರೆ ಎಂದು ಪ್ರತಿಪಾದಿಸಿದರು.

Continue Reading

ಕರ್ನಾಟಕ

ಶಾಲಾ ವಿದ್ಯಾರ್ಥಿಗಳಿಗೆ ಕೋವಿಡ್ ದೃಢ; ಹೆಬ್ಬಳ್ಳಿ ಶಾಲೆ ಸೀಲ್‌ಡೌನ್

Published

on

ಧಾರವಾಡ: ಜನೆವರಿ 27 (ಯು.ಎನ್.ಐ.) ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಹಾವಳಿ ಹೆಚ್ಚಾಗತೊಡಗಿದೆ. ಧಾರವಾಡ ಜಿಲ್ಲಾ ಆರೋಗ್ಯ ಇಲಾಖೆ ಜನೆವರಿ 26ರಂದು ಕೊಟ್ಟ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಅತ್ಯಧಿಕ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಬರೋಬ್ಬರಿ 1,523 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಆಕ್ಟಿವ್ ಕೇಸ್ ಗಳ ಸಂಖ್ಯೆ 5,718ಕ್ಕೆ ಏರಿಕೆಯಾಗಿದೆ.

ಇನ್ನೊಂದೆಡೆ ಧಾರವಾಡ ಜಿಲ್ಲೆಯಲ್ಲಿನ ಶಾಲೆಗಳಲ್ಲೂ ಕೋವಿಡ್ ದುಗುಡ ಹೆಚ್ಚಾಗುತ್ತಿದ್ದು, ತಾಲೂಕಿನ ಹೆಬ್ಬಳ್ಳಿ ಗ್ರಾಮದ ಶಾಲೆಯಲ್ಲಿ 18 ವಿದ್ಯಾರ್ಥಿಗಳಿಗೆ ಕೋವಿಡ್ ಕಾಣಿಸಿಕೊಂಡಿದೆ. ಇಲ್ಲಿನ ನೆಹರು ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜನೆವರಿ 24 ರಂದು ಇಬ್ಬರು ವಿದ್ಯಾರ್ಥಿಗಳಲ್ಲಿ ಮಾತ್ರ ಸೋಂಕು ಕಾಣಿಸಿಕೊಂಡಿತು. ಬಳಿಕ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಿಸಿದಾಗ ಒಟ್ಟಾರೆ 18 ವಿದ್ಯಾರ್ಥಿಗಳಲ್ಲಿ ಕೋವಿಡ್ ಹರಡಿರುವುದು ಗ್ರಾಮದಲ್ಲಿ ಆತಂಕ ಹೆಚ್ಚಿಸಿದೆ.

18 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಬಾಕಿ ವಿದ್ಯಾರ್ಥಿಗಳ ಕೋವಿಡ್ ಪರೀಕ್ಷೆಯನ್ನು ಮಾಡಲಾಗಿದ್ದು, ಇಂದು ವರದಿ ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತ ಕ್ರಮಕೈಗೊಂಡಿದ್ದು, ಹೆಬ್ಬಳ್ಳಿ ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದೆ. ಈ ಬಗ್ಗೆ ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಮೂಲಕ ಮಾಹಿತಿ ಕಳುಹಿಸಿರುವ ಪ್ರಾಂಶುಪಾಲರು, ಸರ್ಕಾರದ ನಿರ್ದೇಶನ ಮತ್ತು ತಹಸೀಲ್ದಾರರ ಮಾಹಿತಿ ಆದೇಶದಂತೆ ಇಂದು 27/01/2022 ರಿಂದ 02/02/2022 ವರೆಗೆ ಶಾಲೆಗೆ ರಜೆ ನೀಡಲಾಗಿದೆ. ಅಲ್ಲದೆ, ಭೌತಿಕ ಶಿಕ್ಷಣಕ್ಕೆ ರಜೆ ನೀಡಲಾಗಿದ್ದು, ಆನ್ ಲೈನ್ ಕ್ಲಾಸುಗಳಿಗೆ ಹಾಜರಾಗುವಂತೆ ಸೂಚಿಸಿದ್ದಾರೆ.

Continue Reading
Advertisement
ದೇಶ4 seconds ago

ವೈಯಕ್ತಿಕ ದ್ವೇಷ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ದುಷ್ಟರು

ನವದೆಹಲಿ: ಜನೆವರಿ 27 (ಯು.ಎನ್.ಐ.) ವೈಯಕ್ತಿಕ ದ್ವೇಷದ ಕಾರಣ ಮಹಿಳೆಯನ್ನು ಅಪಹರಿಸಿ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ದುಷ್ಟರು ಚಪ್ಪಲಿ ಹಾರ ಹಾಕಿ, ಮುಖಕ್ಕೆ ಕಪ್ಪು...

ಕರ್ನಾಟಕ1 hour ago

ಸಿಎಂ ಭೇಟಿ ಮಾಡಿದ ಚಿಕ್ಕಮಗಳೂರು ಶಾಸಕರ ನಿಯೋಗ

ಬೆಂಗಳೂರು: ಜನೆವರಿ 27 (ಯು.ಎನ್.ಐ.) ಶಾಸಕ ಹಾಗೂ ಬಿಜೆಪಿ ಪ್ರಧಾನ ಕಾರ್ಯಯದರ್ಶಿ ಸಿ ಟಿ ರವಿ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲೆ ಶಾಸಕರು ಮುಖ್ಯಮಂತ್ರಿ‌ ಬಸವರಾಜ ಎಸ್ ಬೊಮ್ಮಾಯಿ...

ಕರ್ನಾಟಕ1 hour ago

ಸಿಎಂ‌ ಇಬ್ರಾಹಿಂ ಬಂದರೆ ಸ್ವಾಗತ: ಎಚ್‌‌‌ಡಿಕೆ

ಬೆಂಗಳೂರು:ಜನೆವರಿ 27 (ಯು.ಎನ್.ಐ.) ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಿಎಂ‌ ಇಬ್ರಾಹಿಂ‌ ಅವರು ಜಾತ್ಯತೀತ ಜನತಾ ದಳಕ್ಕೆ ಬಂದರೆ ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.‌ಕುಮಾರಸ್ವಾಮಿ ಹೇಳಿದ್ದಾರೆ....

ದೇಶ2 hours ago

ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಅಂತ್ಯ; ಶಾಲಾ-ಕಾಲೇಜುಗಳು ಬಂದ್

ಹೊಸದಿಲ್ಲಿ: ಜನೆವರಿ 27 (ಯು.ಎನ್.ಐ.) ರಾಷ್ಟ್ರ ರಾಜಧಾನಿ ಜನರಿಗೆ ದೆಹಲಿ ಸರ್ಕಾರ ಗುಡ್ ನ್ಯೂಸ್ ನೀಡಿದೆ. ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿರುವ  ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಅನ್ನು...

ಕ್ರೀಡೆ2 hours ago

ಟೀಂ ಇಂಡಿಯಾ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಟ್ವಿಟರ್ ಖಾತೆ ಹ್ಯಾಕ್

ಮುಂಬೈ: ಜನೆವರಿ ೨೭ (ಯು.ಎನ್.ಐ.) ಇತ್ತೀಚೆಗೆ ಬಿಟ್‌ಕಾಯಿನ್ ಸ್ಕ್ಯಾಮರ್ ಗಳು ಟ್ವಿಟರ್ ಖಾತೆಗಳನ್ನು ಹ್ಯಾಕ್ ಮಾಡುತ್ತಿದ್ದು, ಈಗಾಗಲೇ ಸಾಕಷ್ಟು ಮಂದಿಯ ಟ್ವಿಟರ್ ಖಾತೆ ಇದೇ ವಿಚಾರಕ್ಕೆ ಹ್ಯಾಕ್...

ಸಿನೆಮಾ3 hours ago

ನಾಗಚೈತನ್ಯ, ಸಮಂತಾ ವಿಚ್ಛೇದನಕ್ಕೆ ನಟ ನಾಗಾರ್ಜುನ ಕೊಟ್ಟ ಕಾರಣ ಏನು?

ಹೈದರಾಬಾದ್: ಜನೆವರಿ 27 (ಯು.ಎನ್.ಐ.) ಟಾಲಿವುಡ್ ಸ್ಟಾರ್ ಗಳಾದ ನಾಗಚೈತನ್ಯ ಮತ್ತು ಸಮಂತಾ ರುತ್ ಪ್ರಭು 2021ರಲ್ಲಿ ವಿಚ್ಛೇದನ ಘೋಷಿಸಿದರು. ಅಂದಿನಿಂದ ಇಮದಿನವರೆಗೆ ಅವರ ನಡುವಿನ ಪ್ರತ್ಯೇಕತೆಗೆ...

ದೇಶ3 hours ago

ಅನ್ಯ ಜಾತಿ ಹುಡುಗಿ ಮದುವೆಯಾದ ಮಗ: ತಾಯಿ ಮೇಲೆ ಹಲ್ಲೆ

ಚೆನ್ನೈ: ಜನೆವರಿ 27 (ಯು.ಎನ್.ಐ.) ಅನ್ಯ ಜಾತಿಯ ಹುಡುಗಿಯನ್ನು ಮಗ ವಿವಾಹವಾದ ಕಾರಣ ತಾಯಿಯನ್ನು ದೀಪದ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯ ತಿರುಚುಲಿ...

ಸಿನೆಮಾ3 hours ago

‘ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾರೆ’ – ನಟಿ ಶ್ವೇತಾ ತಿವಾರಿ

ಭೋಪಾಲ್: ಜನೆವರಿ 27 (ಯು.ಎನ್.ಐ.) ಕಿರುತೆರೆ ಹಾಗೂ ಹಿಂದಿ ಫಿಲಂ ನಟಿ ಶ್ವೇತಾ ತಿವಾರಿ ದೇವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಫ್ಯಾಶನ್ ಸಂಬಂಧಿತ ವೆಬ್ ಸರಣಿಯ...

ಸಿನೆಮಾ3 hours ago

ವಿವಾಹ ಜೀವನಕ್ಕೆ ಕಾಲಿರಿಸಿದ ಮೌನಿರಾಯ್, ಸೂರಜ್ ನಂಬಿಯಾರ್

ಪಣಜಿ: ಜನೆವರಿ 27 (ಯು.ಎನ್.ಐ.) ಬಾಲಿವುಡ್ ನಟಿ ಮೌನಿ ರಾಯ್ ಮತ್ತು ಉದ್ಯಮಿ ಸೂರಜ್ ನಂಬಿಯಾರ್ ಇಂದು ಗೋವಾದಲ್ಲಿ ವಿವಾಹ ಜೀವನಕ್ಕೆ ಕಾಲಿರಿಸಿದ್ದಾರೆ. ಇವರ ವಿವಾಹದ ಫೋಟೋಗಳು...

ದೇಶ4 hours ago

ಕಾಂಗ್ರೆಸ್ ಉಚ್ಛಾಟಿತ ನಾಯಕ ಕಿಶೋರ್ ಉಪಾಧ್ಯಾಯ ಬಿಜೆಪಿಗೆ ಸೇರ್ಪಡೆ

ಡೆಹ್ರಾಡೂನ್: ಜನೆವರಿ 27 (ಯು.ಎನ್.ಐ.) ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಮುನ್ನ, ಉಚ್ಛಾಟಿತ ರಾಜ್ಯ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಕಿಶೋರ್ ಉಪಾಧ್ಯಾಯ ಗುರುವಾರ ಭಾರತೀಯ ಜನತಾ ಪಕ್ಷ (ಬಿಜೆಪಿ)...

ಟ್ರೆಂಡಿಂಗ್

Share