Connect with us


      




ದೇಶ

ಬಿಜೆಪಿ ಮುಖಂಡನ ಹತ್ಯೆ

Vanitha Jain

Published

on

ನವದೆಹಲಿ: ಏಪ್ರಿಲ್ 21 (ಯು.ಎನ್.ಐ.) ಪೂರ್ವ ದೆಹಲಿಯಲ್ಲಿ ಸ್ಥಳೀಯ ಬಿಜೆಪಿ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಮೃತ ವ್ಯಕ್ತಿಯನ್ನು ಜಿತು ಚೌಧರಿ ಎಂದು ಗುರುತಿಸಲಾಗಿದೆ. ಮೃತರಿಗೆ ಗುಂಡೇಟಿನ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೂರ್ವ ದೆಹಲಿಯ ಮಯೂರ್ ವಿಹಾರ್ 3ನೇ ಹಂತದಲ್ಲಿರುವ ಮನೆಯ ಮುಂದೆ ರಕ್ತದ ಮಡುವಿನಲ್ಲಿದ್ದ ಬಿಜೆಪಿ ನಾಯಕನ ಶವವನ್ನು ಪೊಲೀಸ್ ಪೇದೆಯೊಬ್ಬರು ಗುರುತಿಸಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಬರುವಷ್ಟರಲ್ಲಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಆರೋಪಿಗಳು ಪರಾರಿಯಾಗಿದ್ದಾರೆ. ಅಪರಾಧ ನಡೆದ ಸ್ಥಳದಲ್ಲಿ ಕೆಲವು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಎಂದು ಪೊಲೀಸರು ತಿಳಿಸಿದ್ದಾರೆ.

Share