Published
6 months agoon
By
UNI Kannadaಜನೆವರಿ 09 (ಯು.ಎನ್.ಐ.) ಪಿಲಿಭಿಟ್ ಕ್ಷೇತ್ರದ ಸಂಸದ ಫಿರೋಜ್ ವರುಣ್ ಗಾಂಧಿ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಕೊರೊನಾ ಪಾಸಿಟಿವ್ ಆಗಿರುವ ಬಗ್ಗೆ ವರುಣ್ ಗಾಂಧಿ ಟ್ವಿಟ್ಟರ್ ನಲ್ಲಿ ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ. ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯರು ಪರೀಕ್ಷೆ ಮಾಡಿದಾಗ ಪಾಸಿಟಿವ್ ಕಾಣಿಸಿಕೊಂಡಿದೆ ಎಂದು ವರುಣ್ ಗಾಂಧಿ ಬಹಿರಂಗಪಡಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಕೊರೊನಾ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವುದಕ್ಕೆ ವರುಣ್ ಗಾಂಧಿ ಕಳವಳ ವ್ಯಕ್ತಪಡಿಸಿದ್ದಾರೆ. ಇಂಥ ಸಂದರ್ಭದಲ್ಲಿ ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ. ಇದರೊಂದಿಗೆ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಹಾಗೂ ರಾಜಕೀಯ ಕಾರ್ಯಕರ್ತರ ರಕ್ಷಣೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವರುಣ್ ಗಾಂಧಿ ಸರಕಾರವನ್ನು ಆಗ್ರಹಿಸಿದ್ದಾರೆ.
“ಕೊರೊನಾ ಮೂರನೇ ಅಲೆ ಸಂದರ್ಭದಲ್ಲಿ ಚುನಾವಣಾ ಪ್ರಚಾರ ನಡೆಯುತ್ತಿದೆ. ಚುನಾವಣಾ ಅಭ್ಯರ್ಥಿಗಳು, ಮುಂಜಾಗ್ರತಾ ಕ್ರಮವಾಗಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲು ಸುಲಭ ಕ್ರಮಗಳನ್ನು ತೆಗೆದುಕೊಳ್ಳಬೇಕು”ಎಂದು ವರುಣ್ ಗಾಂಧಿ ಹೇಳಿದರು.
ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಜುಬೇರ್ ಬಂಧನ; ಜರ್ಮನಿ ಹೇಳಿಕೆಗೆ ಕಟುವಾಗಿ ಪ್ರತಿಕ್ರಿಯಿಸಿದ ಕೇಂದ್ರ
ಚೀನಾದ ಕಂಪನಿಗಳು ಭಾರತದ ಕಾನೂನು ಪಾಲಿಸಬೇಕು: ವಿದೇಶಾಂಗ ಸಚಿವಾಲಯ
ಶೀಘ್ರದಲ್ಲೇ ವಾಣಿಜ್ಯ ಹಾರಾಟ ನಡೆಸಲಿದೆ ‘ಆಕಾಶ ಏರ್’
ಫೋನ್ ಹಿಂತಿರುಗಿಸಲು ನಿರಾಕರಿಸಿದ್ದಕ್ಕೆ ಸ್ನೇಹಿತನ ಕೊಂದ ಪಾಪಿ
ಹಿಂದೂ ವ್ಯಕ್ತಿಯ ಅಂತಿಮ ವಿಧಿವಿಧಾನ ನೆರವೇರಿಸಿದ ಮುಸ್ಲಿಂ ಕುಟುಂಬ
ವಿವಾಹ ಜೀವನಕ್ಕೆ ಕಾಲಿರಿಸಿದ ಪಂಜಾಬ್ ಸಿಎಂ ಭಗವಂತ್ ಮಾನ್