Connect with us


      
ರಾಜಕೀಯ

ಕಾಂಗ್ರೆಸ್ ನಿರ್ಮಿಸಿದ ರೈಲ್ವೆ, ವಿಮಾನ ನಿಲ್ದಾಣ, ರಸ್ತೆಗಳನ್ನು ಬಿಜೆಪಿ ಮಾರುತ್ತಿದೆ: ಪ್ರಿಯಾಂಕಾ ಗಾಂಧಿ

pratham

Published

on

ನವದೆಹಲಿ: ಅ. 31(ಯುಎನ್ಐ) ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್​​ ನಿರ್ಮಿಸಿರುವುದನ್ನು ಬಿಜೆಪಿ ಮಾರಾಟ ಮಾಡುತ್ತಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭಾನುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ರೈಲ್ವೆ, ವಿಮಾನ ನಿಲ್ದಾಣ ಮತ್ತು ರಸ್ತೆಗಳನ್ನು ನಿರ್ಮಿಸಿತ್ತು. ಆದ್ರೆ ಬಿಜೆಪಿ ಅವುಗಳನ್ನು ಮಾರಾಟ ಮಾಡುತ್ತಿದೆ. 70 ವರ್ಷಗಳಲ್ಲಿ ನಾವು ಏನು ಮಾಡಿದ್ದೇವೆ ಎಂದು ಅವರು ಕೇಳುತ್ತಾರೆ. ಅವರು ಕೇವಲ 7 ವರ್ಷಗಳಲ್ಲಿ 70 ವರ್ಷಗಳ ಪ್ರಯತ್ನವನ್ನು ಹಾಳು ಮಾಡಿದ್ದಾರೆ ಎಂದು ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವಾಗ ಪ್ರಿಯಾಂಕಾ ಗಾಂಧಿ ಈ ರೀತಿ ಹೇಳಿದರು.

ರಾಜ್ಯದಲ್ಲಿ ನಿರುದ್ಯೋಗ ಪ್ರಮುಖ ಸಮಸ್ಯೆಯಾಗಿದೆ. ಯುಪಿಯಲ್ಲಿ 5 ಕೋಟಿ ನಿರುದ್ಯೋಗಿ ಯುವಕರಿದ್ದಾರೆ. ನಿರುದ್ಯೋಗದಿಂದ ಪ್ರತಿದಿನ ಮೂವರು ಯುವಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದರು.

ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಯುಪಿ ಸರ್ಕಾರವು ಎಲ್ಲಾ ಜಾತಿಗಳು ಮತ್ತು ವರ್ಗಗಳ ಜನರನ್ನು ಶೋಷಣೆ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ದಲಿತರು, ನೇಕಾರರು, ಒಬಿಸಿಗಳು, ಬಡವರು, ಅಲ್ಪಸಂಖ್ಯಾತರು ಮತ್ತು ಬ್ರಾಹ್ಮಣರು ಶೋಷಣೆಗೆ ಒಳಗಾಗಿದ್ದಾರೆ. ಯೋಗಿ ಆದಿತ್ಯನಾಥ್ ಅವರು ಗುರು ಗೋರಖನಾಥರ ಬೋಧನೆಗೆ ವಿರುದ್ಧವಾಗಿ ಸರ್ಕಾರವನ್ನು ನಡೆಸುತ್ತಿದ್ದಾರೆ. ಈ ಸರ್ಕಾರ ಪ್ರತಿನಿತ್ಯ ಜನರ ಮೇಲೆ ಹಲ್ಲೆ ನಡೆಸುತ್ತಿದೆ ಎಂದು ಗಾಂಧಿ ಹೇಳಿದರು.

ಯುಪಿ ಚುನಾವಣೆಗಾಗಿ ಬಿಜೆಪಿಯೊಂದಿಗೆ ಕಾಂಗ್ರೆಸ್ ಸಹಯೋಗದಲ್ಲಿ ಕೆಲಸ ಮಾಡಿದೆ ಎಂಬ ಆರೋಪವನ್ನು ಅವರು ನಿರಾಕರಿಸಿದರು.

Share