Published
6 months agoon
ಚಂಡೀಗಢ : ನ. 4 (ಯುಎನ್ಐ) ಗಡಿ ಭದ್ರತಾ ಪಡೆ (BSF) ಮತ್ತು ಪಾಕಿಸ್ತಾನ ರೇಂಜರ್ಗಳು ಇಂದು ಅಟ್ಟಾರಿ-ವಾಘಾ ಗಡಿಯಲ್ಲಿ ದೀಪಾವಳಿ ಹಿನ್ನೆಲೆ ಸಿಹಿ ವಿನಿಮಯ ಮಾಡಿಕೊಂಡರು.
ಗುಜರಾತ್ನ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಮತ್ತು ರಾಜಸ್ಥಾನದ ಬಾರ್ಮರ್ ಸೆಕ್ಟರ್ನಲ್ಲಿ ಬಿಎಸ್ಎಫ್ ಮತ್ತು ಪಾಕ್ ರೇಂಜರ್ಗಳು ಸಿಹಿ ವಿನಿಮಯ ಮಾಡಿಕೊಂಡಿದ್ದಾರೆ.
ಹಾಗೆಯೇ ಭಾರತೀಯ ಸೇನೆ ಮತ್ತು ಪಾಕಿಸ್ತಾನ ಸೇನೆಯು ದೀಪಾವಳಿಯ ಸಂದರ್ಭದಲ್ಲಿ ಗಡಿ ನಿಯಂತ್ರಣ ರೇಖೆಯ (ಎಲ್ಒಸಿ) ತಿತ್ವಾಲ್ ಕ್ರಾಸಿಂಗ್ ಸೇತುವೆಯಲ್ಲಿ ಸಿಹಿ ವಿನಿಮಯ ಮಾಡಿಕೊಂಡಿರುವುದು ಕಂಡುಬಂದಿದೆ.