Connect with us


      
ರಾಜಕೀಯ

ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಚುನಾವಣೆಯಲ್ಲಿ ಸ್ಪರ್ಧಿಸಲ್ಲ

Vanitha Jain

Published

on

ಲಕ್ನೋ: ಜನೆವರಿ 11 (ಯು.ಎನ್.ಐ.) ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಮಾಯಾವತಿ ಈ ಹಿಂದೆಯೂ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿರಲಿಲ್ಲ.

ಮಾಜಿ ಮುಖ್ಯಮಂತ್ರಿ ಮಾಯಾವತಿ ಮತ್ತು ನಾನು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಬಿಎಸ್‍ಪಿ ಸಂಸದ ಸತೀಶ್ ಚಂದ್ರ ಮಿಶ್ರಾ ತಿಳಿಸಿದ್ದಾರೆ.

ಸಮಾಜವಾದಿ ಪಕ್ಷವು 400 ಅಭ್ಯರ್ಥಿಗಳನ್ನು ಹೊಂದಿಲ್ಲ. ಹಾಗಾದರೆ ಅವರು 400 ಸ್ಥಾನಗಳನ್ನು ಹೇಗೆ ಗೆಲ್ಲಲು ಸಾಧ್ಯ ಎಂದು ಸಮಾಜವಾದಿ ಪಕ್ಷದ ವಿರುದ್ಧ ವ್ಯಂಗ್ಯವಾಡಿದ ಮಿಶ್ರಾ, ಎಸ್‍ಪಿ ಅಥವಾ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದ ಬಿಎಸ್‍ಪಿ ಸಂಸದರು ಉತ್ತರ ಪ್ರದೇಶದಲ್ಲಿ ಬಿಎಸ್‍ಪಿ ಸರ್ಕಾರ ರಚಿಸಲಿದೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ಪಂಜಾಬ್, ಉತ್ತರಾಖಂಡ ಮತ್ತು ಗೋವಾದಲ್ಲಿ ಫೆಬ್ರವರಿ 14ರಂದು ಮತ್ತು ಮಣಿಪುರದಲ್ಲಿ ಫೆಬ್ರವರಿ 27 ಮತ್ತು ಮಾರ್ಚ್ 6 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

ಉತ್ತರ ಪ್ರದೇಶದಲ್ಲಿ 2017ರ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 403 ಸ್ಥಾನಗಳಲ್ಲಿ 312 ಸ್ಥಾನಗಳನ್ನು ಗೆದ್ದಿತ್ತು. ಎಸ್‍ಪಿ ಕೇವಲ 47 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು ಮತ್ತು ಕಾಂಗ್ರೆಸ್ ಏಳು ಸ್ಥಾನಗಳನ್ನು ಗೆದ್ದಿದೆ. ಬಹುಜನ ಸಮಾಜವಾದಿ ಪಕ್ಷ (ಬಿಎಸ್‍ಪಿ) 19 ಸ್ಥಾನಗಳನ್ನು ಗೆದ್ದಿತ್ತು.

Share