Connect with us


      




ಕರ್ನಾಟಕ

ಪರಿಷತ್ ಚುನಾವಣೆ ; ಜೆಡಿಎಸ್-ಬಿಜೆಪಿ ಮೈತ್ರಿ ಬಹುತೇಕ ಖಚಿತ – 2ನೇ ಸುತ್ತಿನ ಪ್ರಚಾರ ಆರಂಭಿಸಿದ ಬಿಎಸ್ವೈ

Iranna Anchatageri

Published

on

ಬೆಂಗಳೂರು, ಡಿ 7 (ಯುಎನ್ಐ) ರಾಜ್ಯದ ಮೇಲ್ಮನೆಯ 25 ಸ್ಥಾನಗಳಿಗೆ ಡಿಸೆಂಬರ್ 10 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಎರಡನೇ ಸುತ್ತಿನ ಪ್ರಚಾರ ಕಾರ್ಯ ಇಂದು ಆರಂಭಿಸಿದ್ದಾರೆ.

ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳು

 

ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳೋಕು ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿಎಸ್ವೈ, ”ಪರಿಷತ್ ಚುನಾವಣೆಗೆ ಎರಡನೇ ಸುತ್ತಿನ ಪ್ರಚಾರ ಶುರು ಮಾಡ್ತಿದೀನಿ. ಸದ್ಯದಲ್ಲೇ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 15 ಸ್ಥಾನಗಳಲ್ಲಿ ಗೆಲ್ಲಲಿದೆ. ಗ್ರಾಮೀಣ ಪ್ರದೇಶಗಳಲ್ಲಿ ಬಿಜೆಪಿ ಪರ ಜನ ಇದಾರೆ. ಬಿಜೆಪಿ ಬಗ್ಗೆ ಕಾಂಗ್ರೆಸ್ ನವ್ರು ಹಗುರವಾಗಿ ಮಾತಾಡ್ತಿದಾರೆ. ಅವರ ಹಗುರ ಮಾತುಗಳಿಗೆ ಚುನಾವಣೆಯಲ್ಲಿ ಜನ ಉತ್ತರ ಕೊಡ್ತಾರೆ ಅಂತಾ ಕಾಂಗ್ರೆಸ್ ನಾಯಕರಿಗೆ ಮಾಜಿ ಸಿಎಂ ಯಡಿಯೂರಪ್ಪ ತಿರುಗೇಟು ಕೊಟ್ಟರು.

ಬಿ.ವೈ.ವಿಜಯೇಂದ್ರಗೆ ಸಚಿವ ಸ್ಥಾನ?

ಬಿ ವೈ ವಿಜಯೇಂದ್ರಗೆ ಸಚಿವ ಸ್ಥಾನ ನೀಡುವ ವಿಚಾರ ಕುರಿತಂತೆ ಮಾತನಾಡಿದ ಬಿಎಸ್ವೈ, ವಿಜಯೇಂದ್ರಗೆ ಸಚಿವ ಸ್ಥಾನದ ಬಗ್ಗೆ ನಾನು ಏನೂ ಮಾತಾಡಲ್ಲ. ಸಚಿವ ಸ್ಥಾನ ಕೊಡೋದು ಬಿಡೋದು ಹೈಕಮಾಂಡ್, ಕೇಂದ್ರದ ನಾಯಕರು ಹಾಗೂ ಸಿಎಂಗೆ ಬಿಟ್ಟ ವಿಚಾರ. ಈ ಬಗ್ಗೆ ನಾನು ಏನೂ ಹೇಳಲ್ಲ ಅಂತಾ ತಿಳಿಸಿದರು.

ಬಿಜೆಪಿ-ಜೆಡಿಎಸ್ ಮೈತ್ರಿ ಖಚಿತ?

ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡುವಂತೆ ಫೋನ್ ಮಾಡಿ ಕೇಳಿಕೊಂಡಿದ್ದೇನೆ. ‌ಕುಮಾರಸ್ವಾಮಿ ಅವರು ಇವತ್ತು ಸುದ್ದಿಗೋಷ್ಟಿ ನಡೆಸಿ ಈ ಬಗ್ಗೆ ಹೇಳಿಕೆ ನೀಡಲಿದ್ದಾರೆ. ಬಹುತೇಕ ಬಿಜೆಪಿಗೆ ಜೆಡಿಎಸ್ ಬೆಂಬಲ ಕೊಡುವ ವಿಶ್ವಾಸ ನನಗಿದೆ. ಜೆಡಿಎಸ್ ಎಲ್ಲೆಲ್ಲಿ ಸ್ಪರ್ಧೆ ಮಾಡಿಲ್ವೋ ಅಲ್ಲಿ ಬಿಜೆಪಿಗೆ ಬೆಂಬಲ ದೊರೆಯುವ ವಿಶ್ವಾಸವನ್ನು ಬಿ.ಎಸ್.ಯಡಿಯೂರಪ್ಪ ವ್ಯಕ್ತಪಡಿಸಿದರು.

ಯಡಿಯೂರಪ್ಪ ಅವರ ಜಿಲ್ಲಾ ಪ್ರವಾಸ

ಸುದ್ದಿಗೋಷ್ಠಿ ಬಳಿಕ, ವಿಧಾನಪರಿಷತ್ತಿನ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳಲು ಪುತ್ರಿ ಅರುಣಾದೇವಿ ಜೊತೆಗೆ ದಾವಣಗೆರೆ ಜಿಲ್ಲಾ ಪ್ರವಾಸ ಯಡಿಯೂರಪ್ಪ ಕೈಗೊಂಡರು.

Share