Connect with us


      
ರಾಜಕೀಯ

ಸಾಮಾನ್ಯ ಕಾರ್ಯಕರ್ತನನ್ನು ಪಕ್ಷ ಕೈ ಬಿಡುವುದಿಲ್ಲವೆಂಬುದಕ್ಕೆ ನಾನೇ ಉದಾಹರಣೆ: ಬಿಎಸ್ ವೈ

Lakshmi Vijaya

Published

on

ಬೆಂಗಳೂರು: ಆಗಸ್ಟ್ 17 (ಯು.ಎನ್.ಐ.) ಬಿಜೆಪಿ ಹೈಕಮಾಂಡ್ ನ ಅತ್ಯುನ್ನತ ಮಂಡಳಿಯಾದ ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಪಕ್ಷದ ರಾಷ್ಟ್ರೀಯ ನಾಯಕರು ದೊಡ್ಡ ಸ್ಥಾನ ನೀಡಿದ್ದಾರೆ. ಯಾವುದೇ ಸ್ಥಾನ ಅಪೇಕ್ಷೆ ಪಟ್ಟ ವ್ಯಕ್ತಿ ನಾನಲ್ಲ. ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ ಬಳಿಕ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವ ಅಪೇಕ್ಷೆ ಇತ್ತು.  ಪಕ್ಷದ ಆದೇಶವನ್ನು ವಿನಮ್ರತೆಯಿಂದ ಸ್ವೀಕರಿಸುತ್ತೇನೆ. ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ತರುವುದು ಹಾಗೂ ದಕ್ಷಿಣ ಭಾರತದಲ್ಲಿ ಪಕ್ಷ ಸಂಘಟನೆ ಮಾಡಲು ಪ್ರವಾಸ ಮಾಡುತ್ತೇನೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು.

ಸಾಮಾನ್ಯ ಕಾರ್ಯಕರ್ತನಿಗೆ ಪಕ್ಷ ಯಾವತ್ತೂ ಕೈ ಬಿಡುವುದಿಲ್ಲ ಎನ್ನುವುದಕ್ಕೆ ನಾನೇ ಉದಾಹರಣೆ. ರಾಜ್ಯದಲ್ಲಿ ಬೇರೆ ಪಕ್ಷ ಅಧಿಕಾರಕ್ಕೆ ಬರಲು ಬಿಡುವುದಿಲ್ಲ. ರಾಜ್ಯದಲ್ಲಿ ಎಲ್ಲರೂ ಒಟ್ಟಾಗಿ ಪ್ರವಾಸ ಮಾಡುತ್ತೇವೆ. ನನಗೆ ಹೆಚ್ಚಿನ ಜವಾಬ್ದಾರಿ ನೀಡಿದರೆ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎನ್ನುವ ನಂಬಿಕೆ ಪಕ್ಷದ ಹೈಕಮಾಂಡ್ ಗೆ ಇದೆ. ಆ ನಂಬಿಕೆಯಿಂದ ಜವಾಬ್ದಾರಿ ನೀಡಿದ್ದಾರೆ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ಬೊಮ್ಮಾಯಿ ನಮ್ಮ ನಾಯಕರು. ಅವರನ್ನು ಮುಂದಿಟ್ಟುಕೊಂಡು ಎಲ್ಲರೂ ಸೇರಿ ಚುನಾವಣೆ ಎದುರಿಸುತ್ತೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಸದಾನಂದಗೌಡ, ರೇಣುಕಾಚಾರ್ಯ, ಲೆಹರ್ ಸಿಂಗ್ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಭಾಗಿಯಾಗಿದ್ದರು.

Share