Connect with us


      




ರಾಜಕೀಯ

ಸೇವೆ ಸಲ್ಲಿಸುವ ಗೌರವಕ್ಕೆ ಆಭಾರಿ: ಮಾಜಿ ಸಿಎಂ ಬಿಎಸ್ ವೈ

Lakshmi Vijaya

Published

on

ಬೆಂಗಳೂರು: ಆಗಸ್ಟ್ 17 (ಯು.ಎನ್.ಐ.) ಪಕ್ಷದ ಕೇಂದ್ರೀಯ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿಯಲ್ಲಿ ಸದಸ್ಯರಾಗಿ ನೇಮಕಗೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೈಕಮಾಂಡ್ ಗೆ ಧನ್ಯವಾದ ತಿಳಿಸಿದರು.

ಪಕ್ಷದ ಕೇಂದ್ರೀಯ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿಯಲ್ಲಿ ನನ್ನನ್ನು ಸದಸ್ಯನನ್ನಾಗಿ ನೇಮಿಸಿರುವ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ರವರಿಗೆ ಕೃತಜ್ಞತೆಗಳು. ನಮ್ಮ ಪಕ್ಷದ ಉನ್ನತ ಮಟ್ಟದ ಸಮಿತಿಯಲ್ಲಿ ಸೇವೆ ಸಲ್ಲಿಸುವ ಈ ಗೌರವಕ್ಕಾಗಿ ನಾನು ಆಭಾರಿಯಾಗಿದ್ದೇನೆ ಎಂದು ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿ ಧನ್ಯವಾದ ತಿಳಿಸಿದ್ದಾರೆ.

ಇದರೊಂದಿಗೆ ಪ್ರಧಾನಿ ನರೇಂದ್ರ ಮೋದಿಗೆ ದೂರವಾಣಿ ಮೂಲಕ ಕರೆ ಮಾಡಿ ಬಿ.ಎಸ್. ಯಡಿಯೂರಪ್ಪನವರು ಧನ್ಯವಾದ ಸಲ್ಲಿಸಿದರು.  ದಕ್ಷಿಣ ಭಾರತದ ತುಂಬ ಪ್ರವಾಸ ಮಾಡಿ ಪಕ್ಷ ಸಂಘಟಿಸಲು ಪ್ರಧಾನಿ ಸೂಚಿಸಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕೂಡ ದೂರವಾಣಿ ಕರೆ ಮಾಡಿ ಬಿಎಸ್ ವೈ ಗೆ ಅಭಿನಂದನೆ ಸಲ್ಲಿಸಿದ್ದಾರೆ.

Share