Connect with us


      




ಕರ್ನಾಟಕ

2022-23ನೇ ಸಾಲಿನ ಬಜೆಟ್: ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕ ಬಜೆಟ್- ಬೈರತಿ ಬಸವರಾಜ

Vanitha Jain

Published

on

ಬೆಂಗಳೂರು: ಮಾರ್ಚ್ 04 (ಯು.ಎನ್.ಐ.) ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಪ್ರಥಮ ಭಾರಿಗೆ ಮಂಡಿಸಿದ ಚೊಚ್ಚಲ ಬಜೆಟ್ ರಾಜ್ಯದ ಎಲ್ಲರನ್ನೂ ಒಳಗೊಂಡು ಸಮಗ್ರ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದು, ಆರ್ಥಿಕ ಶಿಸ್ತನ್ನು ಒಳಗೊಳ್ಳುವ ಮೂಲಕ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿದಿದೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅಭಿಪ್ರಾಯಪಟ್ಟರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶದ ಮೂಲ ಸೌಕರ್ಯ ಅಭಿವೃದ್ಧಿಗೆ ಪ್ರಸಕ್ತ ಸಾಲಿನ ಆಯವ್ಯಯ ಹೆಚ್ಚು ಒತ್ತು ನೀಡಿದೆ. ರೈತರು, ಮಹಿಳೆಯರು ಸೇರಿದಂತೆ ಎಲ್ಲಾ ವರ್ಗದ ಜನರು ಸ್ವಾಭಿಮಾನದ ಜೀವನ ನಡೆಸಲು ಪೂರಕವಾದ ಕಾರ್ಯಕ್ರಮಗಳನ್ನು ನೀಡಿದ್ದಾರೆ ಎಂದರು.

ಇದರಿಂದಾಗಿ ಆರ್ಥಿಕ ಚಟುವಟಿಕೆಗಳು ಹೆಚ್ಚಾಗಿ ನಾಡಿನ ಅಭಿವೃದ್ಧಿಗೂ ಪೂರಕವಾಗಲಿದೆ. ನಗರ ಪ್ರದೇಶಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿಗಳು 2022-23ನೇ ಸಾಲಿನ ಬಜೆಟ್ ನಲ್ಲಿ ಹೆಚ್ಚು ಕಾರ್ಯಕ್ರಮಗಳನ್ನು ಘೋಷಿಸಿರುವುದು ಸ್ವಾಗತಾರ್ಹ ಎಂದರು.

Share