Connect with us


      
ದೇಶ

ಬೆಂಕಿಯಿಂದ ಸುಟ್ಟು ಕರಕಲಾದ ಬಸ್ಸು

UNI Kannada

Published

on

Bus

ಆಂಧ್ರಪ್ರದೇಶ್: ಡಿಸೆಂಬರ್ 16,(ಯು.ಎನ್.ಐ.)   ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ  ಚಲಿಸುತ್ತಿದ್ದ ಬಸ್ಸಿನಲ್ಲಿದ್ದ ಪ್ರಯಾಣಿಕರು ಕೂದಲೆಳೆ ಅಂತರದಿಂದ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ,

ಪರ್ಚೂರು ಮಂಡಲಂ ತಿಮ್ಮರಾಜಪಾಲೆಂನಲ್ಲಿ ಖಾಸಗಿ ಬಸ್ ಒಂದರಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ, ಆದರೆ ಚಾಲಕನ ಸಮಯಪ್ರಜ್ಞೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್ಸಿನಲ್ಲಿ ಕಾಣಿಸಿಕೊಂಡ ಬೆಂಕಿಯನ್ನ ಗಮನಿಸಿದ ಪ್ರಯಾಣಿಕರು ಕೂಡಲೆ ಬಸ್ಸಿನಿಂದ ಕೆಳಗಿಳಿದಿದ್ದಾರೆ. ಯಾವುದೇ ಪ್ರಾಣಾಪಾಯವಾಗಿಲ್ಲವಾದರೂ ಪ್ರಯಾಣಿಕರಿಗೆ ಸಂಬಂಧಿಸಿದ ವಸ್ತುಗಳು ಸಂಪೂರ್ಣ ಬೆಂಕಿಗಾಹುತಿಯಾಗಿದೆ.

ಬಸ್ಸು ಹೈದರಾಬಾದ್ ನಿಂದ ಚಿರಾಲ ಕಡೆಗೆ ಬರುವಾಗ ಈ ಘಟನೆ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಘಟನ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ಮುಂದುವರಿದಿದೆ.

Share