Connect with us


      
ಕರ್ನಾಟಕ

ಸಚಿವ ಸಂಪುಟ ವಿಸ್ತರಣೆ ಕುರಿತು ಸಿಎಂ ನಿರ್ಧಾರ – ಅರುಣ್ ಸಿಂಗ್

Iranna Anchatageri

Published

on

ಬೆಂಗಳೂರು: ಮೇ 14 (ಯು.ಎನ್.ಐ.) ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಮುಖ್ಯಮಂತ್ರಿ ಸಕಾಲದಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಮತ್ತು ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ತಿಳಿಸಿದರು.

ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಂಪುಟ ಪುನಾರಚನೆಯು ಮುಖ್ಯಮಂತ್ರಿಯ ಪರಮಾಧಿಕಾರ ಎಂದೂ ಅವರು ನಗುತ್ತ ನುಡಿದರು.

ರಾಜ್ಯಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯತ್ವಕ್ಕೆ ಸ್ಪರ್ಧಿಸಲು ಬಯಸುವವರ ಪಟ್ಟಿಯನ್ನು ರಾಜ್ಯ ಕೋರ್ ಕಮಿಟಿ ಮತ್ತು ರಾಜ್ಯ ಚುನಾವಣಾ ಸಮಿತಿಯು ಕೇಂದ್ರ ಸಂಸದೀಯ ಮಂಡಳಿಗೆ ಶಿಫಾರಸು ಮಾಡುತ್ತದೆ. ಕೇಂದ್ರ ಸಂಸದೀಯ ಮಂಡಳಿಯು ರಾಜ್ಯಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯತ್ವಕ್ಕೆ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುತ್ತದೆ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಕಾಂಗ್ರೆಸ್ ಪಕ್ಷದೊಳಗೆ ಗೊಂದಲಗಳಿವೆ. ಬಿಜೆಪಿಯಲ್ಲಿ ನಾಯಕತ್ವ ಮತ್ತಿತರ ಯಾವುದೇ ಗೊಂದಲಗಳಿಲ್ಲ ಎಂದೂ ಅವರು ಪ್ರತಿಕ್ರಿಯಿಸಿದರು.

Share