Connect with us


      




ವಿದೇಶ

ದಕ್ಷಿಣ ಧ್ರುವಕ್ಕೆ ಏಕಾಂಗಿಯಾಗಿ ಚಾರಣ ಪೂರ್ಣಗೊಳಿಸಿದ ಭಾರತೀಯ ಮೂಲದ ಮೊದಲ ಮಹಿಳೆ ಹರ್‌ಪ್ರೀತ್ ಚಾಂಡಿ

Published

on

ಲಂಡನ್: ಜನವರಿ 04(ಯು.ಎನ್.ಐ) ಭಾರತೀಯ ಮೂಲದ ಬ್ರಿಟಿμï ಸಿಖ್ ಸೇನಾ ಅಧಿಕಾರಿ ಮತ್ತು ಪೆÇೀಲಾರ್ ಪ್ರೀತ್ ಎಂದು ಕರೆಯಲ್ಪಡುವ ಫಿಸಿಯೋಥೆರಪಿಸ್ಟ್ ಕ್ಯಾಪ್ಟನ್ ಹರ್‌ಪ್ರೀತ್ ಚಾಂಡಿ ದಕ್ಷಿಣ ಧ್ರುವಕ್ಕೆ ಏಕಾಂಗಿಯಾಗಿ ತೆರಳಿ ಚಾರಣ ಪೂರ್ಣಗೊಳಿಸಿದ ಮೊದಲ ಮಹಿಳೆ ಎಂಬ ಖ್ಯಾತಿ ಗಳಿಸಿದ್ದಾರೆ.

ಈ ಬಗ್ಗೆ ಖುದ್ದಾಗಿ ಲೈವ್ ಬ್ಲಾಗ್‍ನಲ್ಲಿ ಹೇಳಿಕೊಂಡ ಚಾಂಡಿ, ದಕ್ಷಿಣ ಧ್ರುವಕ್ಕೆ ಏಕಾಂಗಿಯಾಗಿ ತೆರಳಿ 40 ದಿನಗಳಲ್ಲಿ 700 ಮೈಲುಗಳು (1,127 ಕಿಲೋಮೀಟರ್) ಪ್ರಯಾಣಿಸಿದ ಅನುಭವವನ್ನು ಹಂಚಿಕೊಂಡಿದ್ದಾರೆ. ಮೈನಸ್ 50 ಡಿಗ್ರಿ ಸೆಲ್ಸಿಯಸ್ ತಾಪಮಾನ ಮತ್ತು ಗಾಳಿಯ ವೇಗ 60ಎಂಪಿಎಸ್ ವೇಗದಲ್ಲಿ 700 ಮೈಲುಗಳು (1,127 ಕಿಲೋಮೀಟರ್) ಕ್ರಮಿಸಿದ್ದಾರೆ.

“ನಾನು ಹಿಮ ಬೀಳುತ್ತಿರುವ ದಕ್ಷಿಣ ಧ್ರುವಕ್ಕೆ ಹೋಗಿದ್ದೇನೆ. ಇದೀಗ ನಾನಿಲ್ಲಿ ತುಂಬಾ ವಿಭಿನ್ನವಾದ ಭಾವನೆಗಳಲ್ಲಿ ತೇಲುತ್ತಿದ್ದೇನೆ. ಮೂರು ವರ್ಷಗಳ ಹಿಂದೆ ನನಗೆ ಧ್ರುವ ಪ್ರಪಂಚದ ಬಗ್ಗೆ ಏನೂ ತಿಳಿದಿರಲಿಲ್ಲ ಮತ್ತು ಅಂತಿಮವಾಗಿ ಇಲ್ಲಿಗೆ ಬರುವುದು ತುಂಬಾ ಅತಿವಾಸ್ತವಿಕ. ಇಲ್ಲಿಗೆ ಬರುವುದು ಕಷ್ಟಕರವಾಗಿತ್ತು ಮತ್ತು ನಾನು ಇಲ್ಲಿಗೆ ತಲುಪಲು ಸಹಕರಿಸಿದ ಎಲ್ಲರಿಗೂ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಬರೆದಿದ್ದಾರೆ.

“ಈ ಚಾರಣ ಯಾವಾಗಲೂ ನನಗಿಂತ ತುಂಬಾ ಮಿಗಿಲು. ಜನರು ತಮ್ಮ ಸುತ್ತಲಿನ ಕಟ್ಟುಪಾಡುಗಳನ್ನು ದೂರ ನಿಂತು ತಾವು ನಂಬುವಂತೆ ನಾನು ಉತ್ತೇಜಿಸುತ್ತೇನೆ. ನಾವು ಬಂಡಾಯಗಾರರು ಎಂದು ತೋರಿಸಿಕೊಳ್ಳದೇ ಅಂದುಕೊಂಡಿರುವುದನ್ನು ಮಾಡಿ. ನಾನು ಎಂದಿಗೂ ಆಗುವುದಿಲ್ಲ ಎಂದು ಹೇಳುವುದಿಲ್ಲ, ಸಾಮಾನ್ಯವಾದುದು, ಸರಳವಾದುದನ್ನು ಮಾಡಲು ಪ್ರೇರೇಪಿಸಲಾಗುತ್ತದೆ. ಆದರೆ ನಾವು ಸಾಮಾನ್ಯವಾಗಿಯೇ ನಮಗೆ ಬೇಕಾಗಿರುವುದನ್ನು ಸ್ವಂತಿಕೆ ಮೂಲಕ ರಚಿಸಿಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.

ವಿದೇಶ

ಪ್ಯಾರಿಸ್ ನಲ್ಲಿ 8 ಗಂಟೆ ಸಭೆ; ರಷ್ಯಾ ಉಕ್ರೇನ್ ಮಧ್ಯೆ ಕದನ ವಿರಾಮ

Published

on

ಪ್ಯಾರಿಸ್: ಜನೆವರಿ 27 (ಯು.ಎನ್.ಐ.) ಉಕ್ರೇನ್ ಮತ್ತು ರಷ್ಯಾ ನಡುವೆ ಪೂರ್ವ ಗಡಿಯಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ ಪರಿಹಾರದ ಸುದ್ದಿ ಬಂದಿದೆ. ಬುಧವಾರ ಪ್ಯಾರಿಸ್‌ನಲ್ಲಿ ಎಂಟು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಎಲ್ಲಾ ಪಕ್ಷಗಳು ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ. ಇದಲ್ಲದೆ, 2019ರ ಬಳಿಕ ಉಕ್ರೇನ್ ಮತ್ತು ರಷ್ಯಾ ಮೊದಲ ಬಾರಿಗೆ ಉಕ್ರೇನಿಯನ್ ಪಡೆಗಳು ಮತ್ತು ಪ್ರತ್ಯೇಕತಾವಾದಿಗಳ ನಡುವೆ ನಡೆಯುತ್ತಿರುವ ಸಂಘರ್ಷದ ಬಗ್ಗೆ ಫ್ರಾನ್ಸ್ ಮತ್ತು ಜರ್ಮನಿಯೊಂದಿಗೆ ಜಂಟಿ ಹೇಳಿಕೆ ನೀಡಲು ಒಪ್ಪಿಕೊಂಡಿವೆ. ಈ ಕದನ ವಿರಾಮದಲ್ಲಿ ಫ್ರಾನ್ಸ್ ಮತ್ತು ಜರ್ಮನಿ ಪ್ರಮುಖ ಪಾತ್ರ ವಹಿಸಿವೆ.

ಎರಡೂ ಕಡೆಯವರು ಬೇಷರತ್ತಾದ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದಾರೆ ಎಂದು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದು, ಎರಡು ವಾರಗಳ ನಂತರ ಬರ್ಲಿನ್‌ನಲ್ಲಿ ಇದೇ ವಿಷಯದ ಕುರಿತು ಮತ್ತೊಂದು ಸಭೆ ನಡೆಸಲು ನಿರ್ಧರಿಸಲಾಗಿದೆ. ಸೀಜ್ ಫೈರ್ ಅನ್ನು ಫ್ರಾನ್ಸ್ ಸ್ವಾಗತಿಸಿದ್ದು, ನಿರಂತರವಾಗಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಸಕಾರಾತ್ಮಕ ವಿಚಾರಗಳು ಹೊರಹೊಮ್ಮಿವೆ ಎಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರ ಸಹಾಯಕ ತಿಳಿಸಿದ್ದಾರೆ.

ರಷ್ಯಾದ ರಾಜತಾಂತ್ರಿಕ ಡಿಮಿಟ್ರಿ ಕೊಜಾಕ್ ಅವರು ಅನೇಕ ಭಿನ್ನಾಭಿಪ್ರಾಯಗಳ ಹೊರತಾಗಿಯೂ, ಪೂರ್ವ ಉಕ್ರೇನ್‌ನಲ್ಲಿ ಕದನ ವಿರಾಮವನ್ನು ಒಪ್ಪಿಕೊಂಡಿದ್ದೇವೆ ಎಂದು ಹೇಳಿದರು. ಎರಡು ವಾರಗಳ ನಂತರ ಬರ್ಲಿನ್ ಸಭೆಯಲ್ಲಿ ಪ್ಯಾರಿಸ್‌ನಂತೆ ಎರಡೂ ದೇಶಗಳ ರಾಜತಾಂತ್ರಿಕರು ಭಾಗವಹಿಸಲಿದ್ದಾರೆ. ಈ ಸಭೆಗಳಲ್ಲಿ ರಾಷ್ಟ್ರಗಳ ಮುಖ್ಯಸ್ಥರನ್ನು ಒಳಗೊಳ್ಳುವುದು ಅಜೆಂಡಾದಲ್ಲಿಲ್ಲ ಎಂದು ಜಂಟಿಯಲ್ಲಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

Continue Reading

ದೇಶ

ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿದ್ದ ಅಪ್ರಾಪ್ತನ ಬಿಡುಗಡೆಗೆ ಚೀನಾ ಒಪ್ಪಿಗೆ: ಸಚಿವ ಕಿರಣ್ ರಿಜಿಜು

Published

on

ನವದೆಹಲಿ: ಜನೆವರಿ 26 (ಯು.ಎನ್.ಐ.) ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿರುವ 17 ವರ್ಷದ ಅಪ್ರಾಪ್ತ ಯುವಕನ ಬಿಡುಗಡೆಗೆ ಚೀನಾ ಸೂಚಿಸಿದ್ದು, ದಿನಾಂಕ ಮತ್ತು ಸಮಯವನ್ನು ಶೀಘ್ರದಲ್ಲೇ ಹಂಚಿಕೊಳ್ಳಲಿದೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

ಚೀನಾ ಕೂಡ ಕಾಣೆಯಾಗಿದ್ದ ಅಪ್ಪರ್ ಸಿಯಾಂಗ್ ಜಿಲ್ಲೆಯ ಜಿಡೋ ಗ್ರಾಮದ ನಿವಾಸಿಯಾಗಿರುವ ಮಿರಾಮ್ ಟ್ಯಾರೋನ್ ಎಂಬ ಅಪ್ರಾಪ್ತ ಯುವಕನ ಬಿಡುಗಡೆಯ ಸ್ಥಳವನ್ನು ಸೂಚಿಸಿದೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ ವಿಳಂಬವಾಗಿದೆ ಎಂದು ಸಚಿವ ಕಿರಣ್ ರಿಜಿಜು ಹೇಳಿದರು.

“ಭಾರತೀಯ ಸೇನೆಯು ಗಣರಾಜ್ಯೋತ್ಸವ ದಿನದಂದು ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್ಎ) ಯೊಂದಿಗೆ ಹಾಟ್‌ಲೈನ್ ಮೂಲಕ ಭಾರತದ ಅಪ್ರಾಪ್ತ ಯುವಕನನ್ನು ಹಸ್ತಾಂತರಿಸುವುದಾಗಿ ಪ್ರತಿಕ್ರಿಯಿಸಿದೆ ಮತ್ತು ಬಿಡುಗಡೆಯ ಸ್ಥಳವನ್ನು ಸೂಚಿಸಿದೆ. ಅವರು ಶೀಘ್ರದಲ್ಲೇ ದಿನಾಂಕ ಮತ್ತು ಸಮಯವನ್ನು ತಿಳಿಸುವ ಸಾಧ್ಯತೆಯಿದೆ. ಹವಾಮಾನ ವೈಪರೀತ್ಯದಿಂದಾಗಿ ವಿಳಂಬವಾಗಿದೆ ಎಂದು ಕಿರಣ್ ರಿಜಿಜು ವಿವರಿಸಿದರು.

ಈ ಹಿಂದೆ, ಭಾರತೀಯ ಸೇನೆಯು ಗುರುತು, ವೈಯಕ್ತಿಕ ವಿವರಗಳು ಮತ್ತು ಕಾಣೆಯಾದ ಅಪ್ರಾಪ್ತ ಯುವಕನ ಚಿತ್ರವನ್ನು ಚೀನಾಕ್ಕೆ ಹಂಚಿಕೊಂಡಿದೆ ಎಂದು ಅವರು ಹೇಳಿದ್ದಾರೆ. ಮಿರಾಮ್ ಟ್ಯಾರೋನ್ 2022 ರ ಜನವರಿ 18 ರಂದು ಬಿಶಿಂಗ್ ಪ್ರದೇಶದ ಶಿಯುಂಗ್ ಲಾದಿಂದ ನಾಪತ್ತೆಯಾಗಿದ್ದನು. ಅರುಣಾಚಲ ಪ್ರದೇಶದ ತ್ಸಾಂಗ್ಪೋ ನದಿ ಭಾರತವನ್ನು ಪ್ರವೇಶಿಸುವ ಸ್ಥಳದ ಬಳಿ ಈ ಘಟನೆ ನಡೆದಿದೆ ಎಂದು ಸಂಸದರು ಹೇಳಿದ್ದಾರೆ. ತ್ಸಾಂಗ್ಪೋವನ್ನು ಅರುಣಾಚಲ ಪ್ರದೇಶದಲ್ಲಿ ಸಿಯಾಂಗ್ ಮತ್ತು ಅಸ್ಸಾಂನಲ್ಲಿ ಬ್ರಹ್ಮಪುತ್ರ ಎಂದು ಕರೆಯಲಾಗುತ್ತದೆ.

Continue Reading

ವಿದೇಶ

56 ಭಾರತೀಯ ಮೀನುಗಾರರ ಬಿಡುಗಡೆಗೆ ಆದೇಶಿಸಿದ ಶ್ರೀಲಂಕಾ ನ್ಯಾಯಾಲಯ

Published

on

ಕೊಲಂಬೋ: ಜನೆವರಿ 25 (ಯು.ಎನ್.ಐ.) ದ್ವೀಪ ರಾಷ್ಟ್ರದ ಪ್ರಾದೇಶಿಕ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಬಂಧಿತರಾಗಿದ್ದ 56 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡುವಂತೆ ಶ್ರೀಲಂಕಾ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.

ಡಿಸೆಂಬರ್ ಮಧ್ಯಭಾಗದಲ್ಲಿ ಮನ್ನಾರ್ ನ ದಕ್ಷಿಣ ಸಮುದ್ರದಲ್ಲಿ ಶ್ರೀಲಂಕಾ ನೌಕಾಪಡೆಯಿಂದ ಬಂಧನಕ್ಕೊಳಗಾಗಿದ್ದ ಮೀನುಗಾರರನ್ನು ಬಿಡುಗಡೆ ಮಾಡುವಂತೆ ಉತ್ತರ ಜಾಫ್ನಾ ಪರ್ಯಾಯ ದ್ವೀಪದ ನ್ಯಾಯಾಲಯವು ಆದೇಶಿಸಿದೆ.

“56 #ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಲು ನ್ಯಾಯಾಲಯವು ಆದೇಶಿಸಿದೆ ಎಂದು ತಿಳಿದು ಸಂತೋಷವಾಗಿದೆ ಎಂದು ಕೊಲಂಬೊದಲ್ಲಿರುವ ಭಾರತೀಯ ಹೈಕಮಿಷನ್ ಟ್ವೀಟ್ ಮಾಡಿದೆ.

ಮಂಗಳವಾರ 56 ಮೀನುಗಾರರನ್ನು ಬಿಡುಗಡೆ ಮಾಡುವ ಮೂಲಕ ಶ್ರೀಲಂಕಾದ ವಶದಲ್ಲಿ ಯಾವುದೇ ಭಾರತೀಯ ಮೀನುಗಾರರು ಇರುವುದಿಲ್ಲ ಎಂದು ಶ್ರೀಲಂಕಾ ಅಧಿಕಾರಿಗಳು ಮತ್ತು ಭಾರತೀಯ ರಾಜತಾಂತ್ರಿಕ ಮೂಲಗಳು ಬಿಡುಗಡೆಯನ್ನು ದೃಢಪಡಿಸಿವೆ.

ಆರ್ಥಿಕ ನೆರವು ಮಾತುಕತೆಗಳು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಮಾನವೀಯ ಆಧಾರದ ಮೇಲೆ ಶ್ರೀಲಂಕಾವನ್ನು ಬಿಡುಗಡೆ ಮಾಡುವಂತೆ ಭಾರತೀಯ ಅಧಿಕಾರಿಗಳು ಶ್ರೀಲಂಕಾವನ್ನು ಒತ್ತಾಯಿಸಿದ್ದರಿಂದ ಮೀನುಗಾರರ ಬಿಡುಗಡೆಗೆ ನ್ಯಾಯಾಲಯವು ಆದೇಶಿಸಿದೆ.

ದಕ್ಷಿಣ ನೆರೆಯ ವಿದೇಶಿ ವಿನಿಮಯ ಬಿಕ್ಕಟ್ಟನ್ನು ನಿಭಾಯಿಸಲು ಸಹಾಯ ಮಾಡಲು ಭಾರತವು ಈ ತಿಂಗಳು ಶ್ರೀಲಂಕಾಕ್ಕೆ ಆರ್ಥಿಕ ಪರಿಹಾರ ಪ್ಯಾಕೇಜ್ ಅನ್ನು ಘೋಷಿಸಿತು. ಈ ತಿಂಗಳ ಆರಂಭದಲ್ಲಿ ಹಣಕಾಸು ಸಚಿವ ಬಸಿಲ್ ರಾಜಪಕ್ಸೆ ಮತ್ತು ವಿದೇಶಾಂಗ ಸಚಿವ ಜೈಶಂಕರ್ ನಡುವಿನ ಮಾತುಕತೆಯಲ್ಲಿ ಮೀನುಗಾರರ ಸಮಸ್ಯೆಯನ್ನು ಚರ್ಚೆ ನಡೆಸಲಾಗಿತ್ತು.

Continue Reading
Advertisement
ದೇಶ14 mins ago

ಅಧಿಕೃತವಾಗಿ ಟಾಟಾ ಸಮೂಹಕ್ಕೆ ಏರ್ ಇಂಡಿಯಾ ಕಂಪೆನಿ ಹಸ್ತಾಂತರ

ನವದೆಹಲಿ: ಜನೆವರಿ 27  (ಯು.ಎನ್.ಐ.) ಕೇಂದ್ರ ಸರ್ಕಾರವು ಗುರುವಾರ ಅಧಿಕೃತವಾಗಿ ಏರ್ ಇಂಡಿಯಾವನ್ನು ಟಾಟಾ ಸಮೂಹಕ್ಕೆ ಹಸ್ತಾಂತರಿಸಿದೆ. 69 ವರ್ಷಗಳ ಬಳಿಕ ಪುನಃ ಟಾಟಾ ಮಡಿಲಿಗೆ ಏರ್...

ಕರ್ನಾಟಕ38 mins ago

ಉ.ಪ್ರ.‌ಚುನಾವಣೆ ನಂತರ ರಾಜ್ಯದಲ್ಲಿ‌ಮಹತ್ವದ ಬದಲಾವಣೆ: ಸಿ.ಎಂ ಇಬ್ರಾಹಿಮ್

ಬೆಂಗಳೂರು: ಜನೆವರಿ 27 (ಯು.ಎನ್.ಐ.)‌ ನಾನು ಹೇಳಿದಂತೆ ರಾಜ್ಯದಲ್ಲಿ ರಾಜಕೀಯ ಬೆಳವಣಿಗೆಗಳು ಘಟಿಸುತ್ತಾ ಬಂದಿವೆ.‌ ಉತ್ತರ ಪ್ರದೇಶ ಚುನಾವಣಾ ಬಳಿಕ ಸಾರ್ವತ್ರಿಕ ಚುನಾವಣೆ, ಇಲ್ಲವೇ ರಾಷ್ಟ್ರ ಪತಿ...

ದೇಶ53 mins ago

ವೈಯಕ್ತಿಕ ದ್ವೇಷ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ದುಷ್ಟರು

ನವದೆಹಲಿ: ಜನೆವರಿ 27 (ಯು.ಎನ್.ಐ.) ವೈಯಕ್ತಿಕ ದ್ವೇಷದ ಕಾರಣ ಮಹಿಳೆಯನ್ನು ಅಪಹರಿಸಿ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ದುಷ್ಟರು ಚಪ್ಪಲಿ ಹಾರ ಹಾಕಿ, ಮುಖಕ್ಕೆ ಕಪ್ಪು...

ಕರ್ನಾಟಕ2 hours ago

ಸಿಎಂ ಭೇಟಿ ಮಾಡಿದ ಚಿಕ್ಕಮಗಳೂರು ಶಾಸಕರ ನಿಯೋಗ

ಬೆಂಗಳೂರು: ಜನೆವರಿ 27 (ಯು.ಎನ್.ಐ.) ಶಾಸಕ ಹಾಗೂ ಬಿಜೆಪಿ ಪ್ರಧಾನ ಕಾರ್ಯಯದರ್ಶಿ ಸಿ ಟಿ ರವಿ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲೆ ಶಾಸಕರು ಮುಖ್ಯಮಂತ್ರಿ‌ ಬಸವರಾಜ ಎಸ್ ಬೊಮ್ಮಾಯಿ...

ಕರ್ನಾಟಕ2 hours ago

ಸಿಎಂ‌ ಇಬ್ರಾಹಿಂ ಬಂದರೆ ಸ್ವಾಗತ: ಎಚ್‌‌‌ಡಿಕೆ

ಬೆಂಗಳೂರು:ಜನೆವರಿ 27 (ಯು.ಎನ್.ಐ.) ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಿಎಂ‌ ಇಬ್ರಾಹಿಂ‌ ಅವರು ಜಾತ್ಯತೀತ ಜನತಾ ದಳಕ್ಕೆ ಬಂದರೆ ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.‌ಕುಮಾರಸ್ವಾಮಿ ಹೇಳಿದ್ದಾರೆ....

ದೇಶ3 hours ago

ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಅಂತ್ಯ; ಶಾಲಾ-ಕಾಲೇಜುಗಳು ಬಂದ್

ಹೊಸದಿಲ್ಲಿ: ಜನೆವರಿ 27 (ಯು.ಎನ್.ಐ.) ರಾಷ್ಟ್ರ ರಾಜಧಾನಿ ಜನರಿಗೆ ದೆಹಲಿ ಸರ್ಕಾರ ಗುಡ್ ನ್ಯೂಸ್ ನೀಡಿದೆ. ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿರುವ  ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಅನ್ನು...

ಕ್ರೀಡೆ3 hours ago

ಟೀಂ ಇಂಡಿಯಾ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಟ್ವಿಟರ್ ಖಾತೆ ಹ್ಯಾಕ್

ಮುಂಬೈ: ಜನೆವರಿ ೨೭ (ಯು.ಎನ್.ಐ.) ಇತ್ತೀಚೆಗೆ ಬಿಟ್‌ಕಾಯಿನ್ ಸ್ಕ್ಯಾಮರ್ ಗಳು ಟ್ವಿಟರ್ ಖಾತೆಗಳನ್ನು ಹ್ಯಾಕ್ ಮಾಡುತ್ತಿದ್ದು, ಈಗಾಗಲೇ ಸಾಕಷ್ಟು ಮಂದಿಯ ಟ್ವಿಟರ್ ಖಾತೆ ಇದೇ ವಿಚಾರಕ್ಕೆ ಹ್ಯಾಕ್...

ಸಿನೆಮಾ3 hours ago

ನಾಗಚೈತನ್ಯ, ಸಮಂತಾ ವಿಚ್ಛೇದನಕ್ಕೆ ನಟ ನಾಗಾರ್ಜುನ ಕೊಟ್ಟ ಕಾರಣ ಏನು?

ಹೈದರಾಬಾದ್: ಜನೆವರಿ 27 (ಯು.ಎನ್.ಐ.) ಟಾಲಿವುಡ್ ಸ್ಟಾರ್ ಗಳಾದ ನಾಗಚೈತನ್ಯ ಮತ್ತು ಸಮಂತಾ ರುತ್ ಪ್ರಭು 2021ರಲ್ಲಿ ವಿಚ್ಛೇದನ ಘೋಷಿಸಿದರು. ಅಂದಿನಿಂದ ಇಮದಿನವರೆಗೆ ಅವರ ನಡುವಿನ ಪ್ರತ್ಯೇಕತೆಗೆ...

ದೇಶ4 hours ago

ಅನ್ಯ ಜಾತಿ ಹುಡುಗಿ ಮದುವೆಯಾದ ಮಗ: ತಾಯಿ ಮೇಲೆ ಹಲ್ಲೆ

ಚೆನ್ನೈ: ಜನೆವರಿ 27 (ಯು.ಎನ್.ಐ.) ಅನ್ಯ ಜಾತಿಯ ಹುಡುಗಿಯನ್ನು ಮಗ ವಿವಾಹವಾದ ಕಾರಣ ತಾಯಿಯನ್ನು ದೀಪದ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯ ತಿರುಚುಲಿ...

ಸಿನೆಮಾ4 hours ago

‘ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾರೆ’ – ನಟಿ ಶ್ವೇತಾ ತಿವಾರಿ

ಭೋಪಾಲ್: ಜನೆವರಿ 27 (ಯು.ಎನ್.ಐ.) ಕಿರುತೆರೆ ಹಾಗೂ ಹಿಂದಿ ಫಿಲಂ ನಟಿ ಶ್ವೇತಾ ತಿವಾರಿ ದೇವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಫ್ಯಾಶನ್ ಸಂಬಂಧಿತ ವೆಬ್ ಸರಣಿಯ...

ಟ್ರೆಂಡಿಂಗ್

Share