Published
5 months agoon
ಅಲ್ವಾರ್: ಡಿ, 8 (ಯುಎನ್ಐ) ನಾಲ್ವರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಮತ್ತು ಕಿರುಕುಳ ನೀಡಿದ ಆರೋಪದ ಮೇಲೆ ಒಂಬತ್ತು ಶಿಕ್ಷಕರು ಹಾಗೂ ಸರ್ಕಾರಿ ಶಾಲೆಯ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ.
ಸಂತ್ರಸ್ತೆ ಶಾಲೆಗೆ ಏಕೆ ಹೋಗುತ್ತಿಲ್ಲ ಎಂದು ಆಕೆಯ ತಂದೆ ಕೇಳಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತೆ 10 ನೇ ತರಗತಿಯಲ್ಲಿ ವಿದ್ಯಾರ್ಥಿಯಾಗಿದ್ದು, ಶಾಲೆಯ ಪ್ರಾಂಶುಪಾಲರು ಮತ್ತು ಇತರ ಮೂವರು ಶಿಕ್ಷಕರು ಒಂದು ವರ್ಷದಿಂದ ನನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದಾಳೆ. ಇಬ್ಬರು ಮಹಿಳಾ ಶಿಕ್ಷಕರು ಕೃತ್ಯದ ವಿಡಿಯೋಗಳನ್ನು ಚಿತ್ರೀಕರಿಸಿದ್ದಾರೆ ಎಂದು ಆಕೆ ಆರೋಪ ಮಾಡಿದ್ದಾಳೆ.
ಮಂಧಾನ ಪೊಲೀಸ್ ಠಾಣಾಧಿಕಾರಿ ಮುಖೇಶ್ ಯಾದವ್ ಮಾತನಾಡಿ, ಈ ವಿಷಯಕ್ಕೆ ಸಂಬಂಧಿಸಿದಂತೆ ಮೂರು ವಿಭಿನ್ನ ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದರು.
ಪೊಲೀಸ್ ತನಿಖೆಯ ಸಮಯದಲ್ಲಿ, 6ನೇ ತರಗತಿ, 4ನೇ ತರಗತಿ ಮತ್ತು 3ನೇ ತರಗತಿಯಲ್ಲಿ ಓದುತ್ತಿರುವ ಇನ್ನೂ ಮೂವರು ವಿದ್ಯಾರ್ಥಿಗಳು ಬಲಿಪಶುಗಳಾಗಿದ್ಧಾರೆ ಎಂದು ತಿಳಿದುಬಂದಿದೆ. ಅವರು ಮುಂದೆ ಬಂದು ಪ್ರಾಂಶುಪಾಲರು ಮತ್ತು ಶಿಕ್ಷಕರ ಮೇಲೆ ಸಾಮೂಹಿಕ ಅತ್ಯಾಚಾರದ ಆರೋಪ ಹೊರಿಸಿದ್ದಾರೆ. ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತರು ಹೇಳಿದ್ದಾರೆ.
ತನಿಖೆಯ ನಂತರ ಶಾಲೆಯೊಂದರ ನಾಲ್ವರು ವಿದ್ಯಾರ್ಥಿಗಳು, ಶಾಲೆಯ ಪ್ರಾಂಶುಪಾಲರು ಮತ್ತು ಒಂಬತ್ತು ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ತಮ್ಮ ದೂರಿನಲ್ಲಿ, ಸಂತ್ರಸ್ತರು ಶಿಕ್ಷಕರ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕಿರುಕುಳದ ಆರೋಪ ಮಾಡಿದ್ದಾರೆ.
ಈ ವಿಷಯವನ್ನು ಮಹಿಳಾ ಶಿಕ್ಷಕರಿಗೆ ತಿಳಿಸಿದಾಗ, ನಂತರ ಅವರು ಹುಡುಗಿಯರಿಗೆ “ಆಮಿಷ” ಒಡ್ಡಿದ್ದಾರೆ. ಅಲ್ಲದೇ ಅವರ ಶುಲ್ಕ ಮತ್ತು ಅವರ ಪುಸ್ತಕಗಳನ್ನು ಪಾವತಿಸಲು ಆಫರ್ ಮಾಡಿದ್ದಾರೆ ಎಂದು ಸಂತ್ರಸ್ತರಲ್ಲಿ ಓರ್ವ ವಿದ್ಯಾರ್ಥಿನಿ ಪೊಲೀಸರಿಗೆ ತಿಳಿಸಿದ್ದಾರಳೆ. ಈ ಬಗ್ಗೆ ಯಾರಿಗೂ ದೂರು ನೀಡದಂತೆ ಶಿಕ್ಷಕರು ಸಹ ಕೇಳಿಕೊಂಡಿದ್ದಾರೆ.
ಇದಾದ ನಂತರ, ಮೇಡಂ ನನ್ನನ್ನು ಮೂರು ಶಿಕ್ಷಕರ ಮನೆಗೆ, ಪ್ರಿನ್ಸಿಪಾಲ್ ಸೇರಿದಂತೆ ಹಲವಾರು ಬಾರಿ ಕರೆದೊಯ್ದರು. ಎಲ್ಲಾ ಶಿಕ್ಷಕರು ಮನೆಯಲ್ಲಿ ಮದ್ಯ ಸೇವಿಸಿದರು. ನಂತರ, ಅವರು ನನ್ನ ಬಟ್ಟೆಗಳನ್ನು ತೆಗೆದು ನನ್ನ ಮೇಲೆ ತಪ್ಪು ಮಾಡಿದರು ಎಂದು ಓರ್ವ ಸಂತ್ರಸ್ತೆ ಹೇಳಿದ್ದಾಳೆ.
ಈ ನಡುವೆ ಘಟನೆಯ ಬಗ್ಗೆ ಶಿಕ್ಷಕರಿಗೆ ದೂರು ನೀಡಲು ಶಾಲೆಗೆ ಹೋದಾಗ, ಪ್ರಾಂಶುಪಾಲರು ತಮ್ಮ ಸಹೋದರ ಮಂತ್ರಿ ಎಂದು ಹೇಳಿದರು ಎಂದು ಸಂತ್ರಸ್ತರೊಬ್ಬರ ತಂದೆ ಹೇಳಿದ್ದಾರೆ.
“ನಾನು ದೂರು ನೀಡಿದರೆ ನನ್ನನ್ನು ಕೊಲ್ಲುತ್ತಾನೆ” ಎಂದು ತಂದೆ ಹೇಳಿದರು.
ಎಲ್ಲಾ ಆರೋಪಗಳನ್ನು ತಳ್ಳಿಹಾಕಿದ ಪ್ರಾಂಶುಪಾಲರು, ಅಂತಹ ಯಾವುದೇ ಪ್ರಕರಣದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಆಂಧ್ರ ಗೃಹಸಚಿವೆಯ ವಿವಾದಾತ್ಮಕ ಹೇಳಿಕೆ; ಭಾರೀ ಟೀಕೆ
ಸಿಎಂ ಯೋಗಿ ನಾಡಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೋ ವೈರಲ್
ರೇಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಹೊರಗೆ ಬಂದವನು ಮತ್ತೆ ಜೈಲು ಸೇರಿದ
ಬಿಜ್ನೋರ್: ಇಪ್ಪತ್ತು ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
ಪಾಕ್ ಕ್ರಿಕೆಟಿಗನ ಮೇಲೆ ಅತ್ಯಾಚಾರದ ಆರೋಪ; ಕಾರ್, ಫ್ಲ್ಯಾಟ್ ಕೊಡಿಸುವ ಅಮಿಷ
7 ವರ್ಷದ ಬಾಲೆ ಮೇಲೆ ಅತ್ಯಾಚಾರ ಎಸಗಿದ 14 ರ ಬಾಲಕ