Published
1 month agoon
By
Vanitha Jainಚೆನ್ನೈ: ಮೇ 18 (ಯು.ಎನ್.ಐ.) ತಮಿಳುನಾಡಿನ ಸೇಲಂನಲ್ಲಿ ಎರಡು ಬಸ್ಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ವಾಹನವೊಂದರಲ್ಲಿ ಅಳವಡಿಸಲಾಗಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, 30 ಮಂದಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ.
ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ಎಡಪ್ಪಾಡಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ತಿರುಚೆಂಗೋಡಿನಿಂದ ಬರುತ್ತಿದ್ದ ಇನ್ನೊಂದು ಬಸ್ ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿವೆ. ಎರಡು ಖಾಸಗಿ ಬಸ್ಗಳಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ಡಿಕ್ಕಿಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ, ಡಿಕ್ಕಿ ಹೊಡೆದ ನಂತರ ಬಸ್ಸಿನಲ್ಲಿ ಕುಳಿತಿದ್ದ ಚಾಲಕ ಡ್ರೈವಿಂಗ್ ಸೀಟ್ನಿಂದ ಹಾರಿ ಬಿಡುವುದನ್ನು ಮತ್ತು ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಇನ್ನೊಬ್ಬ ವ್ಯಕ್ತಿ ವಾಹನದ ಮುಂಭಾಗದ ಗಾಜಿಗೆ ತಾಗುವುದನ್ನು ಕಾಣಬಹುದು. ಈ ಡಿಕ್ಕಿಯ ಪರಿಣಾಮ ವಾಹನಕ್ಕೆ ತೀವ್ರ ಹಾನಿಯಾಗಿದೆ.
ಇತರ ಪ್ರಯಾಣಿಕರು ಕೂಡ ಆಘಾತಕ್ಕೊಳಗಾಗಿದ್ದು, ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸೇಲಂ ಮತ್ತು ಎಡಪ್ಪಾಡಿಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಆಭರಣ ಅಂಗಡಿಗೆ ನುಗ್ಗಿ ದರೋಡೆ, ಮಾಲೀಕನಿಗೆ ಗುಂಡೇಟು; ಸಿಸಿಕ್ಯಾಮೆರಾದಲ್ಲಿ ಕೃತ್ಯ ಸೆರೆ
ಸಿಧು ಮೂಸೆವಾಲಾರ ಕೊನೆಯ ಹಾಡನ್ನ ಯೂಟ್ಯೂಬ್ ನಿಂದ ತೆಗೆದುಹಾಕಿರೋದೇಕೆ?
ಹಕ್ಕುಗಳನ್ನು ರಕ್ಷಿಸುವುದು ಅಪರಾಧವಲ್ಲ; ತೀಸ್ತಾ ಸೆತಲ್ವಾಡ್ ಪರ ವಿಶ್ವಸಂಸ್ಥೆ ಅಧಿಕಾರಿ ದನಿ
“ರಾಷ್ಟ್ರೀಯ ಭದ್ರತೆಗೆ ಡ್ರಗ್ಸ್ ದೊಡ್ಡ ಸವಾಲು” : ಷಾ
ಸಿಎಂ ಭೇಟಿಯಾಗಲು ಪ್ರವಾಹದ ನೀರಲ್ಲಿ ಪರದಾಡಿದ ಅಸ್ಸಾಂ ಯುವಕ
ಸಿಎಂ ಯೋಗಿ ಆದಿತ್ಯನಾಥ್ ಪ್ರಯಾಣಿಸ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ