Published
5 months agoon
ಚೆನ್ನೈ: ಡಿ, 8 (ಯುಎನ್ಐ) ಬುಧವಾರ ಸಂಭವಿಸಿದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಅಪಘಾತದಲ್ಲಿ ಗಾಯಗೊಂಡವರಿಗೆ ಉತ್ತಮ ವೈದ್ಯಕೀಯ ನೆರವು ನೀಡುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಿದ್ದಾರೆ.
ಗಾಯಗೊಂಡವರಿಗೆ ಕೂನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಕೊಯಮತ್ತೂರಿನಿಂದ ವೈದ್ಯರನ್ನು ಕಳುಹಿಸಲಾಗುತ್ತಿದೆ ಎಂದು ಎಂ.ಕೆ. ಸ್ಟಾಲಿನ್ ಹೇಳಿದರು.
ಎಂ.ಕೆ.ಸ್ಟಾಲಿನ್ ಕೂಡ ಶೀಘ್ರದಲ್ಲೇ ಕೊಯಮತ್ತೂರಿಗೆ ತೆರಳುವ ಸಾಧ್ಯತೆ ಇದೆ.
ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಬುಧವಾರ ಈ ಪ್ರದೇಶದಲ್ಲಿ ಪತನಗೊಂಡ ನಂತರ ಸಹಾಯದ ಭರವಸೆ ನೀಡುವಂತೆ ಕೂನೂರಿನ ಸ್ಥಳೀಯ ಆಡಳಿತವನ್ನು ಕೇಳಲಾಗಿದೆ. ಭಾರತೀಯ ವಾಯುಪಡೆಯು ಟ್ವಿಟರ್ನಲ್ಲಿ ಘಟನೆಯನ್ನು ದೃಢಪಡಿಸಿದೆ ಮತ್ತು ಅಪಘಾತದ ಕಾರಣವನ್ನು ಕಂಡುಹಿಡಿಯಲು ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದೆ.
ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿರುವುದು ದೃಢಪಟ್ಟಿದೆ. ಗಾಯಗೊಂಡಿದ್ದ ಮೂವರನ್ನು ರಕ್ಷಿಸಲಾಗಿದೆ. ಇದೇ ವೇಳೆ ಉಳಿದವರಿಗಾಗಿ ಹುಡುಕಾಟ ನಡೆದಿದೆ.
ಸಿಡಿಎಸ್ ಬಿಪಿನ್ ರಾವತ್ ಅವರು ಕೊಯಮತ್ತೂರು ಬಳಿಯ ಸೂಲೂರಿನ ಭಾರತೀಯ ವಾಯುಪಡೆ ನೆಲೆಯಿಂದ ವೆಲ್ಲಿಂಗ್ಟನ್ನ ರಕ್ಷಣಾ ಸಿಬ್ಬಂದಿ ಕಾಲೇಜಿಗೆ ತೆರಳುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಬುಧವಾರ ದೆಹಲಿಯಿಂದ ಸೂಲೂರಿಗೆ ತೆರಳಿದ್ದರು.
ಕಸ್ಟಡಿ ಸಾವು: 6 ಪೊಲೀಸರ ಬಂಧನ
“ನಾವು ಹಿಂದಿ ವಿರೋಧಿಸುವುದಿಲ್ಲ, ಹಿಂದಿ ಹೇರಿಕೆಗೆ ವಿರೋಧ” – ಸ್ಟಾಲಿನ್
ಕ್ಯಾಪ್ಟನ್ ವರುಣ್ ಸಿಂಗ್ ನಿಧನ ದೇಶಕ್ಕೆ ತುಂಬಲಾರದ ನಷ್ಟ: ಸಿಎಂ
ಸಿಡಿಎಸ್ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಸೇರಿ 13 ಮಂದಿ ಸಾವು: ಭಾರತೀಯ ವಾಯುಪಡೆ
ಐಎಎಫ್ ಹೆಲಿಕಾಪ್ಟರ್ ಪತನ: ಸಿಡಿಎಸ್ ಬಿಪಿನ್ ರಾವತ್ ಸ್ಥಿತಿ ಗಂಭೀರ: 13 ಮಂದಿ ಸಾವು
ಸಿಡಿಎಸ್ ಜನರಲ್ ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ಪತನ: ನಾಯಕರಿಂದ ತನಿಖೆಗೆ ಆಗ್ರಹ