Published
6 months agoon
ಬೆಂಗಳೂರು: ಜನೆವರಿ 08 (ಯು.ಎನ್.ಐ.) ಕರಾವಳಿ ಪ್ರದೇಶದ ದೈನಂದಿನ ಆಹಾರದಲ್ಲಿ ಕುಚಲಕ್ಕಿಗೆ ಪ್ರಧಾನ ಸ್ಥಾನ. ಇದಿಲ್ಲದ ಊಟವನ್ನು ಅವರು ಕಲ್ಪಿಸಿಕೊಳ್ಳಲಾರರು. ಇದನ್ನರಿತ ಪ್ರಧಾನ ಮಂತ್ರಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರಕಾರ ಪಡಿತರದಲ್ಲಿ ಕುಚಲಕ್ಕಿ ವಿತರಣೆ ಮಾಡಲು ಆದೇಶಿಸಿದೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಬರೆದ ಪತ್ರಕ್ಕೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಶೀಘ್ರ ಸ್ಪಂದಿಸಿದ್ದಾರೆ. ಕೇಂದ್ರ ಸರ್ಕಾರದಿಂದ ರಾಜ್ಯ ಸರಕಾರಕ್ಕೆ ನೀಡುವ ಪಡಿತರ ಸಂಬಂಧಿತ ಧಾನ್ಯಗಳ ವಿತರಣೆಯಲ್ಲಿ ಕುಚಲಕ್ಕಿ ಸೇರಿಸಲು ಅವರು ಆದೇಶ ನೀಡಿದ್ದಾರೆ. ಇದುವರೆಗೂ ಕರಾವಳಿ ಪ್ರದೇಶದ ಪಡಿತರದಲ್ಲಿ ಕುಚಲಕ್ಕಿ ಸೇರ್ಪಡೆಯಾಗಿರಲಿಲ್ಲ. ಅಲ್ಲಿಯೂ ಬೆಳ್ತಕ್ಕಿ ವಿತರಣೆ ಮಾಡಲಾಗುತ್ತಿತ್ತು.
ರಾಜ್ಯದ ಕರಾವಳಿಯಲ್ಲಿನ ಪಡಿತರದಲ್ಲಿ ಕುಚಲಕ್ಕಿ ಸೇರಿಸುವಂತೆ ಕೇಂದ್ರ ಸರಕಾರ ನೀಡಿರುವ ಆದೇಶಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. “ಪಡಿತರದಲ್ಲಿ ವಿತರಿಸಲು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬೆಳೆದ ಕುಚಲಕ್ಕಿ ನೀಡಲು ಒಪ್ಪಿಕೊಂಡಿರುವ ಪ್ರಧಾನಿ @narendramodi ನೇತೃತ್ವದ ಕೇಂದ್ರ ಸರಕಾರಕ್ಕೆ ಧನ್ಯವಾದಗಳು. ಸ್ಥಳೀಯ ಉತ್ಪನ್ನಗಳಿಗೆ ಬೆಂಬಲ ನೀಡುವ ಜೊತೆಗೆ ಫಲಾನುಭವಿಗಳಿಗೆ ಅವರ ಆಯ್ಕೆಯ ಆಹಾರ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆ” ಎಂದು ಹೇಳಿದ್ದಾರೆ.
https://twitter.com/CMofKarnataka/status/1479827515568836608?t=Szv1y_ZIblgXZpxwk-94EA&s=08
ಧಾರವಾಡ-ಬೆಳಗಾವಿ ರೈಲು ಯೋಜನೆ ಶೀಘ್ರದಲ್ಲಿ ಪ್ರಾರಂಭ : ಸಿಎಂ
ರಮೇಶ್ ಜಾರಕಿಹೊಳಿ ವಿರುದ್ಧ ಗಂಭೀರ ಆರೋಪ: 819 ಕೋಟಿ ರೂ. ಲೂಟಿ!
ಬೆಳಗಾವಿ ಭೀಕರ ಅಪಘಾತ: ಮೃತ ಕಾರ್ಮಿಕರಿಗೆ 5 ಲಕ್ಷ ರೂ. ಪರಿಹಾರ
ಅಂಜನಾದ್ರಿ ಬೆಟ್ಟದಲ್ಲಿ ಜುಲೈನಲ್ಲಿ ಕಾಮಗಾರಿ ಪ್ರಾರಂಭಿಸಲು ಸಿಎಂ ಬೊಮ್ಮಾಯಿ ಸೂಚನೆ
ಎಸ್. ಎಂ. ಕೃಷ್ಣ, ನಾರಾಯಣ ಮೂರ್ತಿ, ಪ್ರಕಾಶ್ ಪಡುಕೋಣೆಗೆ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ
ತಿಂಗಳಲ್ಲಿ 15 ದಿನ ಅರಣ್ಯದಲ್ಲಿರಿ: ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಿಎಂ ತಾಕೀತು