Connect with us


      




ದೇಶ

ಕೇಂದ್ರ ಸರಕಾರದ ವಿರುದ್ಧ ಶರದ್ ಪವಾರ್ ಕಿಡಿ

Vanitha Jain

Published

on

ಅಮರಾವತಿ/ನಾಗ್ಪುರ: ಏಪ್ರಿಲ್ 11 (ಯು.ಎನ್.ಐ.) ಕೇಂದ್ರ ಸರಕಾರವು ರಾಜ್ಯಗಳ ನಡುವೆ ವಿವಾದಗಳನ್ನು ಸೃಷ್ಟಿಸುತ್ತಿರುವುದಲ್ಲದೇ ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ತನ್ನ ಎಲ್ಲಾ ತಂತ್ರಗಳನ್ನು ಬಳಸಿ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.

ಅಮರಾವತಿಯಲ್ಲಿ ಎನ್‌ಸಿಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶರದ್ ಪವಾರ್, ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ, ರಾಜ್ಯಗಳೊಳಗೆ ವಿವಾದಗಳನ್ನು ಸೃಷ್ಟಿಸುವ, ನಾಯಕರ ವಿರುದ್ಧ ವಿಚಾರಣೆ ನಡೆಸುವ ಮತ್ತು ಇತರ ಹಲವು ಮಾರ್ಗಗಳ ಮೂಲಕ ಬಿಜೆಪಿ ರಾಜ್ಯಗಳನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಕೇಂದ್ರ ಸರಕಾರದ ಈ ಪ್ರಯತ್ನವನ್ನು ವಿಫಲಗೊಳಿಸುತ್ತದೆ ಮತ್ತು ಅದರ ವಿರುದ್ಧ ಪೂರ್ಣ ಶಕ್ತಿಯೊಂದಿಗೆ ಹೋರಾಡಲಿದೆ ಎಂದು ಹೇಳಿದರು.

ಇಂಧನ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಕೇಂದ್ರ ಸರಕಾರ ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುತ್ತಿದೆ ಎಂದು ಪವಾರ್ ಹೇಳಿದ್ದಾರೆ. ಇದು ಜನರಲ್ಲಿ ನಿರುದ್ಯೋಗವನ್ನು ಹೆಚ್ಚಿಸುತ್ತಿದೆ ಎಂದು ದೂರಿದರು.

ಕಾಶ್ಮೀರ ಫೈಲ್ಸ್ ಚಿತ್ರದ ಕುರಿತು ಪ್ರತಿಕ್ರಿಯಿಸಿದ ಎನ್‌ಸಿಪಿ ಮುಖ್ಯಸ್ಥರು, ಹಿಂದೂಗಳಲ್ಲಿ ಅಶಾಂತಿಯನ್ನು ಸೃಷ್ಟಿಸಲು ಮತ್ತು ದೇಶದಲ್ಲಿ ಕೋಮು ಸೌಹಾರ್ದತೆಯನ್ನು ಕದಡಲು ಕೇಂದ್ರ ಸರಕಾರವು ಚಲನಚಿತ್ರವನ್ನು ಜನರಿಗೆ ತೋರಿಸಲು ಆಸಕ್ತಿ ವಹಿಸುತ್ತಿದೆ. ಧಾರ್ಮಿಕ ನೆಲೆಯಲ್ಲಿ ಸಮಾಜದಲ್ಲಿ ಬಿರುಕು ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.

Share