Published
5 months agoon
ಬೆಳಗಾವಿ: ಡಿಸೆಂಬರ್ ೧೩ (ಯು.ಎನ್.ಐ.) ಇಂದು ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ ಆರಂಭವಾಯಿತು. ಭಾಗವಹಿಸಲು ಬಂದವರೆಲ್ಲರ ಆಕರ್ಷಣೆ ಕೇಂದ್ರ ಬಿಂದು ಕಿತ್ತೂರ ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಅವರೇ ಆಗಿದ್ದಾರೆ ಎಂಬುದು ವಿಶೇಷ.
ಸದಾ ತಂಗಾಳಿ ಬೀಸುವ ಎತ್ತರದ ಗುಡ್ಡದಲ್ಲಿ ಭವ್ಯವಾದ ಸುವರ್ಣ ವಿಧಾನಸೌಧ ನಿರ್ಮಾಣವಾಗಿದೆ. ಉತ್ತರ ಕರ್ನಾಟಕ ಭಾಗದ ಜನತೆ ಆಶೋತ್ತರಗಳಿಗೆ ದನಿಯಾಗಬೇಕೆಂದೇ ಇದರ ನಿರ್ಮಾಣವಾಗಿದೆ. ಕೋವಿಡ್ ಸೇರಿದಂತೆ ಇತರ ಕಾರಣಗಳಿಂದಾಗಿ ಕಳೆದ ಮೂರು ವರ್ಷಗಳಿಂದ ಇಲ್ಲಿ ವಿಧಾನ ಮಂಡಲ ಅಧಿವೇಶನ ನಡೆದಿರಲಿಲ್ಲ.
ಈ ಬಾರಿಯೂ ಇಲ್ಲಿ ಅಧಿವೇಶನ ನಡೆಯುವುದು ಅನುಮಾನವಾಗಿತ್ತು. ಸಾಕಷ್ಟು ಮಂದಿ ಒಮೈಕ್ರಾನ್ ಆತಂಕದ ನಡುವೆ ಮಹಾರಾಷ್ಟ್ರ ಗಡಿಭಾಗದಲ್ಲಿರುವ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ವಿರೋಧ ವ್ಯಕ್ತಪಡಿಸಿದ್ದರು. ಆದರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ದೃಢ ಸಂಕಲ್ಪದಿಂದಾಗಿ ವಿಧಾನಮಂಡಲ ಅಧಿವೇಶನ ಆರಂಭವಾಗಿದೆ.
ಇಂದು ಬೆಳಗ್ಗೆ ಸುವರ್ಣ ವಿಧಾನಸೌಧವನ್ನು ಪಶ್ಚಿಮ ದ್ವಾರದಿಂದ ಪ್ರವೇಶಿಸಿದ ಬಸವರಾಜ ಬೊಮ್ಮಾಯಿ ಅವರು ಕಿತ್ತೂರ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಅವರ ಮುಂದೆ ಗಕ್ಕನೆ ನಿಂತರು. ಒಂದಷ್ಟು ಹೊತ್ತು ಅವರ ಮುಂದೆಯೇ ನಿಂತರು. ನಂತರ ಉತ್ತಮವಾಗಿ ಇವರಿಬ್ಬರ ಕಲಾಕೃತಿಗಳನ್ನು ನಿರ್ಮಿಸಿರುವುದನ್ನು ಪ್ರಶಂಸಿಸಿದರು.
ಪಶ್ಚಿಮ ದ್ವಾರದಿಂದ ಪ್ರವೇಶಿಸುವ ಎಲ್ಲರ ಆಕರ್ಷಣೆ ಕೇಂದ್ರಬಿಂದು ಈ ಇಬ್ಬರು ಸ್ವಾತಂತ್ರ ಸಂಗ್ರಾಮಿಗಳೇ ಆಗಿದ್ದಾರೆ. ಅನೇಕರು ಇವರ ಕಲಾಕೃತಿಗಳ ಮುಂದೆ ನಿಂತು ಪೋಟೋ ತೆಗೆಸಿಕೊಳ್ಳುವುದು ಸೆಲ್ಫಿ ಕ್ಲಿಕ್ಕಿಸಿಕೊಳ್ಳುವುದನ್ನು ಮಾಡುತ್ತಿದ್ದಾರೆ. ಸಿರಿಧಾನ್ಯಗಳಿಂದ ರೂಪಿಸಿರುವ ಈ ಕಲಾಕೃತಿಗಳ ಸುಂದರತೆ ಒಂದೇ ದಿನದಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಪಶುವೈದ್ಯರಿಗೂ ಕಾನೂನಿನ ಅಡಿಯಲ್ಲಿ ರಕ್ಷಣೆ ನೀಡಿ: ರಾಜ್ಯ ಪಶುವೈದ್ಯಕೀಯ ಸಂಘ ಒತ್ತಾಯ
ನಗರದಲ್ಲಿ ಎಲ್ಲೆಡೆ ಕಳಪೆ ಕಾಮಗಾರಿ: ಎಚ್.ಡಿ.ಕುಮಾರಸ್ವಾಮಿ
ಪರಿಷತ್ ಟಿಕೆಟ್ ಹಂಚಿಕೆ: ಕಾಂಗ್ರೆಸ್ನಿಂದ ಒಮ್ಮತದ ಅಭ್ಯರ್ಥಿಗಳು ಶಿಫಾರಸು-ಡಿಕೆಶಿ
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ: ಈಶ್ವರಪ್ಪ ಪ್ರತಿಕ್ರಿಯೆ
ಮಳೆ ಅನಾಹುತ: ಸಚಿವರ ನೇತೃತ್ವದಲ್ಲಿ 8 ಕಾರ್ಯಪಡೆ ರಚನೆ
ಎಫ್ಡಿಐ ಹೂಡಿಕೆಯಲ್ಲಿ ರಾಜ್ಯಕ್ಕೆ ಸಿಂಹಪಾಲು: ಸಿಎಂ