Published
6 months agoon
By
Vanitha Jainಚಾಮರಾಜನಗರ: ಜನೆವರಿ 10 (ಯು.ಎನ್.ಐ.) ಮಧ್ಯಾಹ್ನದ ಬಿಸಿಯೂಟ ಸೇವಿಸಿ 60 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಹನೂರು ತಾಲೂಕಿನ ವಡಕೆಹಳ್ಳ ಗ್ರಾಮದಲ್ಲಿ ನಡೆದಿದೆ.
ವಡಕೆಹಳ್ಳ ಗ್ರಾಮದ ಶಾಲೆಯಲ್ಲಿ ಮದ್ಯಾಹ್ನದ ಬಿಸಿಯೂಟದಲ್ಲಿ ಹಲ್ಲಿ ಬಿದ್ದ ಆಹಾರವನ್ನು ಸೇವಿಸಿದ ಮಕ್ಕಳಲ್ಲಿ ಕೆಲವರು ವಾಂತಿ ಮಾಡಿಕೊಳ್ಳಲು ಆರಂಭಿಸುತ್ತಿದ್ದಂತೆ ಮತ್ತಷ್ಟು ಮಕ್ಕಳು ಅಸ್ವಸ್ಥಗೊಂಡು ಕುಸಿದರು.
ಮಕ್ಕಳು ಅಸ್ವಸ್ಥಗೊಳ್ಳುತ್ತಿದ್ದಂತೆ ಗಾಬರಿಯಾದ ಶಿಕ್ಷಕರು ಕೂಡಲೇ ಮಕ್ಕಳನ್ನು ವಡಕೆಹಳ್ಳ ಗ್ರಾಮದ ಸಮೀಪದ ಕೌದಳ್ಳಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದರಲ್ಲಿ ಕೆಲವು ಮಕ್ಕಳನ್ನು ರಾಮಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಿಇಒ ಟಿ.ಆರ್.ಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಧಾರವಾಡ-ಬೆಳಗಾವಿ ರೈಲು ಯೋಜನೆ ಶೀಘ್ರದಲ್ಲಿ ಪ್ರಾರಂಭ : ಸಿಎಂ
ರಮೇಶ್ ಜಾರಕಿಹೊಳಿ ವಿರುದ್ಧ ಗಂಭೀರ ಆರೋಪ: 819 ಕೋಟಿ ರೂ. ಲೂಟಿ!
ಬೆಳಗಾವಿ ಭೀಕರ ಅಪಘಾತ: ಮೃತ ಕಾರ್ಮಿಕರಿಗೆ 5 ಲಕ್ಷ ರೂ. ಪರಿಹಾರ
ಅಂಜನಾದ್ರಿ ಬೆಟ್ಟದಲ್ಲಿ ಜುಲೈನಲ್ಲಿ ಕಾಮಗಾರಿ ಪ್ರಾರಂಭಿಸಲು ಸಿಎಂ ಬೊಮ್ಮಾಯಿ ಸೂಚನೆ
ಎಸ್. ಎಂ. ಕೃಷ್ಣ, ನಾರಾಯಣ ಮೂರ್ತಿ, ಪ್ರಕಾಶ್ ಪಡುಕೋಣೆಗೆ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ
ತಿಂಗಳಲ್ಲಿ 15 ದಿನ ಅರಣ್ಯದಲ್ಲಿರಿ: ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಿಎಂ ತಾಕೀತು