Connect with us


      
ಜಾನಪದ

ಹವಾಮಾನ ಬದಲಾವಣೆ ಬಗ್ಗೆ ಪ್ರಸ್ತಾಪಿಸಿದ ಸಿದ್ದರಾಮಯ್ಯ

Iranna Anchatageri

Published

on

ವಿಧಾನಸಭೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಳೆಹಾನಿ, ಮನೆ ಕಳೆದುಕೊಂಡಿರುವವರಿಗೆ ಪರಿಹಾರ ಸಿಗದೆ ಇರುವ ಬಗ್ಗೆ ಸದನದ ಗಮನ ಸೆಳೆದರು. ಈ ಮಧ್ಯೆ ಮಾತನಾಡಿದ ಅವರು, ರಾಜ್ಯದಲ್ಲಿ ಹವಾಮಾನ ಬದಲಾವಣೆಯಾಗುತ್ತಿದೆ ಎಂದು ವಿಜ್ಞಾನಿಗಳು ನೀಡಿರುವ ಹೇಳಿಕೆ ಬಗ್ಗೆ  ಸರ್ಕಾರವನ್ನು ಎಚ್ಚರಿಸಿದರು.

ಹವಾಮಾನ ಬದಲಾವಣೆ ಕೃಷಿ ಪದ್ಧತಿಯನ್ನು ತೀವ್ರವಾಗಿ ಬಾಧಿಸಲಿದೆ ಎಂದು ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ. 2030ರೊಳಗೆ ಭತ್ತ ಶೇಕಡಾ 5.6 ಕಡಿಮೆಯಾಗುತ್ತದೆ. ಕಡಲೆ 19.2, ರಾಗಿ 12, ಶೇಂಗಾ 9.6, ಸೋಯಾಬಿನ್ 20.6 ಕಡಿಮೆಯಾಗಲಿದೆ ಎಂದು ಹವಾಮಾನ ವಿಜ್ಞಾನಿಗಳು ರಾಜ್ಯಕ್ಕೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಹವಾಮಾನ ಬದಲಾವಣೆಯಿಂದಾಗಿ ಕೆಲವು ಬೆಳೆಗಳಾದ ಹತ್ತಿ, ಜೋಳ, ಕಬ್ಬು ಬೆಳೆಯಲ್ಲಿ ಇಳುವರಿ ಹೆಚ್ಚಾಗಲಿದೆ ಎಂದು ತಿಳಿಸಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಅರಣ್ಯ ಮತ್ತು ಪರಿಸರ ಇಲಾಖೆಯಲ್ಲಿನ ಸ್ವಾಯತ್ತ ಸಂಸ್ಥೆಯಾಗಿರುವ ಎನ್ವಾರನ್ ಮೆಂಟಲ್ ಮ್ಯಾನೇಜ್ ಮೆಂಟ್ ಆಂಡ್ ಪಾಲಿಸಿ ರಿಸರ್ಚ್ ಇನ್ಸಿಟ್ಯೂಟ್ ಈ ವರದಿಯನ್ನು ನೀಡಿದೆ. ಈ ವರದಿಯ ಬಗ್ಗೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸುವುದು ಅವಶ್ಯಕ ಎಂದು ಸಿದ್ದರಾಮಯ್ಯ ತಿಳಿಸಿದರು.

Share