Published
6 months agoon
By
UNI Kannadaಬೆಂಗಳೂರು : ಜನೆವರಿ 10 (ಯು.ಎನ್.ಐ.) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೋವಿಡ್ ಸೋಂಕಿಗೆ ಒಳಗಾಗಿರುವ ಮುಖ್ಯಮಂತ್ರಿಗಳು, ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
“ನನಗೆ ಇಂದು ಕೋವಿಡ್ ಸೋಕು ಧೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆಗೆ ಒಳಪಡಬೇಕು ಹಾಗೂ ಪ್ರತ್ಯೇಕವಾಗಿ ಇರಬೇಕು ಎಂದು ವಿನಂತಿಸಿಕೊಂಡಿದ್ದಾರೆ. ಆರಂಭಿಕ ಹಂತದ ರೋಗಲಕ್ಷಣಗಳು ಕಾಣಿಸಿಕೊಂಡಿದೆ. ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ” ತಿಳಿಸಿದ್ದಾರೆ.
ಸಚಿವ ಆರ್ ಅಶೋಕ್ , ಶಿಕ್ಷ ಸಚಿವ ನಾಗೇಶ್ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಮುಖ್ಯಮಂತ್ರಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಬೆನ್ನಲ್ಲೇ ಮುಖ್ಯಮಂತ್ರಿಗಳ ಪೂರ್ವ ನಿಗದಿ ಕಾರ್ಯಕ್ರಮಗಳನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ದಿನಾಂಕ 11.01.2022 ರಿಂದ 13.01.2002ರವರೆಗೆ ನಿಗದಿಗೊಳಿಸಲಾಗಿದ್ದ ಬೆಂಗಳೂರು ನಗರ ವ್ಯಾಪ್ತಿಯ ವಿವಿಧ ವಿಧಾನಸಭಾ ಕ್ಷೇತ್ರಗಳ ಕೋವಿಡ್-19 ಮತ್ತು ಕಾವೇರಿ (ಬೆಂಗಳೂರು ಜಲಮಂಡಳಿ) ಕಾಮಗಾರಿಗಳ ಪರಿಶೀಲನಾ ಸಭೆಗಳನ್ನು ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿಯವರ ಸಚಿವಾಲಯ ತಿಳಿಸಿದೆ.
ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.#Covid_19
— Basavaraj S Bommai (@BSBommai) January 10, 2022
ಇಂಧನ ಇಲಾಖೆ: 1385 ಅಭ್ಯರ್ಥಿಗಳಿಗೆ ಏಕಕಾಲಕ್ಕೆ ನೇಮಕ ಆದೇಶ
ಮೈಶುಗರ್ ಕಾರ್ಖಾನೆ ಆಗಸ್ಟ್ನಲ್ಲಿ ಪುನಾರಂಭ!
ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಬೆಂಬಲ
‘ಪ್ರತಿ ಹತ್ಯೆಯಲ್ಲೂ ಬಿಜೆಪಿ ಹೆಣದ ರಾಜಕೀಯ’ – ದಿನೇಶ್ ಗುಂಡೂರಾವ್
ರಾಜಸ್ಥಾನ ಹತ್ಯೆ: ಕಾಂಗ್ರೆಸ್ ಸರಕಾರ ವಜಾಗೊಳಿಸಲು ಕಟೀಲ್ ಆಗ್ರಹ
ರಾಜಸ್ಥಾನದಲ್ಲಿ ಟೈಲರ್ ಶಿರಚ್ಛೇದ: ಹತ್ಯೆ ಖಂಡಿಸಿದ ಎಚ್ಡಿಕೆ