Connect with us


      




ರಾಜಕೀಯ

ಬಿಎಸ್ ವೈ ಭೇಟಿಯಾದ ಸಿಎಂ: ಪರಿಷತ್ ಫಲಿತಾಂಶ ಚರ್ಚೆ

Kumara Raitha

Published

on

ಸಾಂದರ್ಭಿಕ ಚಿತ್ರ

ಬೆಳಗಾವಿ: ಡಿಸೆಂಬರ್ (ಯು.ಎನ್.ಐ.) ವಿಧಾನ ಪರಿಷತ್ತಿನ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾಜಿ.ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ವಾರಣಾಸಿಯಿಂದ ಬೆಳಗಾವಿಗೆ ಮಂಗಳವಾರ ರಾತ್ರಿ ಆಗಮಿಸಿದ ಬೊಮ್ಮಾಯಿ ಅವರು ಯಡಿಯೂರಪ್ಪ ಅವರನ್ನು ಬೆಳಗಾವಿಯ ಕೆ ಎಲ್ ಇ ಗೆಸ್ಟ್ ಹೌಸ್ ನಲ್ಲಿ ಭೇಟಿ ಮಾಡಿ ಫಲಿತಾಂಶದ ಕುರಿತು ಚರ್ಚಿಸಿದ್ದಾರೆ.
ಈ ಕುರಿತು ಬುಧವಾರ ಸಂಜೆ ಪಕ್ಷದ ಶಾಸಕಾಂಗ ಸಭೆಯಲ್ಲಿ ವಿಸ್ತೃತ ಚರ್ಚೆ ಮಾಡೋಣ ಎಂದು ಯಡಿಯೂರಪ್ಪ ಸಿಎಂ ಬೊಮ್ಮಾಯಿಗೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಶಾಸಕಾಂಗ ಸಭೆ: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ. ಹಿನ್ನೆಲೆಯಲ್ಲಿ ಬುಧವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಪ್ರತಿಪಕ್ಷ ಕಾಂಗ್ರೆಸ್ ದಾಳಿಯನ್ನು ಎದುರಿಸುವ ಕುರಿತು ಹಾಗೂ ಮತಾಂತರ ನಿಷೇಧ ಸೇರಿದಂತೆ ಮಹತ್ವದ ವಿಧೆಯಕಗಳನ್ನು ಜಾರಿಗೆ ತರುವ ಬಗ್ಗೆ ಚರ್ಚಿಸಿ ಎಲ್ಲ ಶಾಸಕರು ಕಡ್ಡಾಯ ಹಾಜರಿರುವಂತೆ ಸಭೆಯಲ್ಲಿ ಮುಖ್ಯಮಂತ್ರಿಗಳು ಸೂಚಿಸುವ ಸಾಧ್ಯತೆ ಇದೆ.
ಪ್ರತಿ ಪಕ್ಷ ಕಾಂಗ್ರೆಸ್ ಕೂಡ ಅಧಿವೇಶದ ಹಿನ್ನೆಲೆಯಲ್ಲಿ ಆಡಳಿತ ಪಕ್ಷದ ವೈಫಲ್ಯವನ್ನು ಎತ್ತಿ ತೋರಿಸಲು ಹಾಗೂ ವಿವಾದಾತ್ಮಕ ಮತಾಂತರ ವಿಧೇಯಕವನ್ನು ವಿರೋಧಿಸುವ ಕುರಿತು ತನ್ನ ಶಾಸಕರಿಗೆ ಸೂಚನೆ ನೀಡಬಹುದು. ಈ ಬಗ್ಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೂಚನೆ ನೀಡುವ ಸಾಧ್ಯತೆ ಇದೆ

Share