Connect with us


      
ಕರ್ನಾಟಕ

ಕ್ಯಾ. ವರುಣ ಸಿಂಗ್ ನಿಧನಕ್ಕೆ ಸಿಎಂ ಸಂತಾಪ

Bindushree Hosuru

Published

on

ಬೆಳಗಾವಿ: ಡಿ. 15 (ಯು.ಎನ್.ಐ) ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಅವರ ಸಾವಿನಿಂದ ನನಗೆ ಅತೀವ ದುಃಖವಾಗಿದೆ. ದೇಶವು ಒಬ್ಬ ವೀರ ಯೋಧನನ್ನು ಕಳೆದುಕೊಂಡಿದೆ. ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ಅಪಘಾತದಲ್ಲಿ ವರುಣ್ ಸಿಂಗ್ ತೀವ್ರವಾಗಿ ಗಾಯಗೊಂಡಿದ್ದರು.

ಅವರಿಗೆ ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ. ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಕೋರುತ್ತೇನೆ. ಓಂ ಶಾಂತಿ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share